ಮುಖ್ಯ ಸುದ್ದಿ
ಚಿತ್ರದುರ್ಗದಲ್ಲಿ ಭರ್ಜರಿ ಬೈಕ್ ರ್ಯಾಲಿ | ಹಿಂದೂ ಮಹಾಗಣಪತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಬಜರಂಗದಳದಿಂದ ಆಯೋಜನೆ

ಚಿತ್ರದುರ್ಗ ನ್ಯೂಸ್.ಕಾಂ: ಹಿಂದೂ ಮಹಾಗಣಪತಿ ಶೋಭಾಯಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿ ಚಿತ್ರದುರ್ಗ ನಗರಾದ್ಯಂತ ಭಾರೀ ಸದ್ದು ಮಾಡಿತು.
ಅಬ್ಬರಿಸಿ, ಆರ್ಭಟಿಸಿ ಭರ್ಜರಿ ಸೌಂಡ್ ಮಾಡುತ್ತಿದ್ದ ತರಹೇವಾರಿ ಬೈಕುಗಳು ರಸ್ತೆಗಿಳಿದಿದ್ದವು. ಕೇಸರಿ ಧ್ವಜ, ಶಾಲು, ರುಮಾಲುಗಳನ್ನು ಕಟ್ಟಿಕೊಂಡಿದ್ದ ಯುವ ಪಡೇ ನಗರದಲ್ಲಿ ರೌಂಡ್ಸ್ ಮಾಡುವ ಮೂಲಕ ಶೋಭಾಯಾತ್ರೆಗೆ ರಂಗು ತುಂಬಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿಗೆ ಕಾಂಗ್ರೆಸ್ ಪೂಜೆ
ಬೈಕ್ ರ್ಯಾಲಿಯಲ್ಲಿದ್ದ ಜೀಪ್‍ಗಳು ಯುವಕರಿಗೆ ಜೋಶ್ ತುಂಬುವ ಕೆಲಸ ಮಾಡಿದವು. ರ್ಯಾಲಿಯುದ್ದಕ್ಕೂ ಜೈ ಶ್ರೀರಾಮ್, ಭಾರತ್ ಮಾತಾ ಕೀ ಜೈ ಘೋಷಣೆಗಳು ಅನುರಣಿಸಿದವು.

ಚಿತ್ರದುರ್ಗದಲ್ಲಿ ಭರ್ಜರಿ ಬೈಕ್ ರ್ಯಾಲಿ
ಬೈಕ್ ರ್ಯಾಲಿಗೆ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ ಚಾಲನೆ ನೀಡಿದರು. ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಜಿ.ಎಂ.ಸುರೇಶ್, ಮಾರ್ಗದರ್ಶಕರು, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಬಜರಂಗದಳ ಪ್ರಾಂತ ಸಹ ಸಂಯೋಜಕ ಪ್ರಭಂಜನ್, ವಿಎಚ್‍ಪಿ ಜಿಲ್ಲಾ ಕಾರ್ಯದರ್ಶಿ ಪಿ.ರುದ್ರೇಶ್, ಸಹ ಕಾರ್ಯದರ್ಶಿ ಕೇಶವ್, ಬಜರಂಗದಳ ಜಿಲ್ಲಾ ಸಂಯೋಜಕ ಸಂದೀಪ್, ಮುಖಂಡರಾದ ಅಶೋಕ್, ರಾಜೇಶ್, ರಂಗಸ್ವಾಮಿ, ಶಶಿಧರ್, ರಂಗಸ್ವಾಮಿ, ವಿಫುಲ್ ಜೈನ್, ಕಾರ್ತಿಕ್, ಅಜಿತ್ ಮತ್ತಿತರರಿದ್ದರು.
ಇದನ್ನೂ ಓದಿ: ಇದೇ ನೋಡಿ ಚಿತ್ರದುರ್ಗ ಮೆಡಿಕಲ್ ಕಾಲೇಜಿನ ಮೊದಲ ಬ್ಯಾಚ್

ಚಿತ್ರದುರ್ಗದಲ್ಲಿ ಭರ್ಜರಿ ಬೈಕ್ ರ್ಯಾಲಿ
ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಆರಂಭವಾದ ಬೈಕ್ ರ್ಯಾಲಿ ಹೊಳಲ್ಕೆರೆ ರಸ್ತೆ ಮಾರ್ಗವಾಗಿ ಬುರುಜನಹಟ್ಟಿ, ಚಿಕ್ಕಪೇಟೆ, ದೊಡ್ಡಪೇಟೆ, ಜೋಗಿಮಟ್ಟಿ ರಸ್ತೆ, ಸ್ಟೇಡಿಯಂ ರಸ್ತೆ, ಮೆದೇಹಳ್ಳಿ ರಸ್ತೆ, ಜೆಸಿಆರ್ ಬಡಾವಣೆ ಮೂಲಕ ಮೆದೇಹಳ್ಳಿ ರಸ್ತೆ ಮೂಲಕ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮುಕ್ತಾಯವಾಯಿತು.
