CHITRADURGA NEWS | 15 JULY 2026
ಚಿತ್ರದುರ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷ್ಮಿ” ಯೋಜನೆಯ 31ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.
ಇದನ್ನೂ ಓದಿ: ಸುಸ್ಥಿರ ಕೃಷಿಗೆ ಸಾವಯವ ಅತ್ಯಗತ್ಯ | ಆರ್.ರಜನೀಕಾಂತ್
ಜಿಲ್ಲೆಯಲ್ಲಿ ಇಂದಿನಿಂದಲೇ ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಗೆ 31ನೇ ಕಂತಿನ ಜಮೆ ಪ್ರಕ್ರಿಯೆ ಆರಂಭವಾಗಲಿದೆ. ಇಂದು ಸಂಜೆಯಿಂದಲೇ ಹಣ ಬಿಡುಗಡೆಯಾಗಲಿದ್ದು, ಹಂತ-ಹಂತವಾಗಿ ಮುಂದಿನ ಮೂರ್ನಾಲ್ಕು ದಿನಗಳ ಕಾಲ ಫಲಾನುಭವಿಗಳ ಖಾತೆಗೆ ಹಣ ನೇರವಾಗಿ ಜಮೆಯಾಗಲಿದೆ.
ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ಥಿತಿ ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000/-ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 3,75,487ಕ್ಕೂ ಹೆಚ್ಚು ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆತಿದೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

