
CHITRADURGA NEWS | 19 DECEMBER 2025
ಚಿತ್ರದುರ್ಗ: ರಾಜ್ಯ ಸರ್ಕಾರ ಮಹಿಳೆಯರಿಗೆ ಪ್ರಸಕ್ತ ವರ್ಷದ ಫೆಬ್ರವರಿ, ಮಾರ್ಚ್ ತಿಂಗಳಲ್ಲಿ 1.28 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 75 ಸಾವಿರ ಕೋಟಿ ಹಣ ನೀಡಿರುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಹೇಳಿಕೆ ನೀಡುವ ಮೂಲಕ ಸದನಕ್ಕೆ ಅವಮಾನ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಹನುಮಂತೇಗೌಡ ತಿಳಿಸಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ ಹೃದಯ ಭಾಗದಲ್ಲೇ ಹೊಸ ನ್ಯಾಯಾಲಯ ನಿರ್ಮಿಸಿ | ಕೆ.ಎಸ್.ವಿಜಯ

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಸಚಿವರು ಕಲಾಪದಲ್ಲಿ ಈ ಎರಡು ತಿಂಗಳ ಹಣವನ್ನು ಜಮೆ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ. ಆದರೆ ಅದಕ್ಕೆ ದಾಖಲೆಯಿಲ್ಲ. ಎರಡು ತಿಂಗಳಿನ ಕಂತು ಸುಮಾರು 5 ಸಾವಿರ ಕೋಟಿ ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ ಎಂದು ಸದನದಲ್ಲಿ ನಮ್ಮ ಪಕ್ಷದ ಮುಂಖಡರು ದಾಖಲೆ ಸಮೇತ ನೀಡಿದ್ದಾರೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸುಳ್ಳು ಮಾಹಿತಿ ನೀಡುವ ಮೂಲಕ ಕಲಾಪಕ್ಕೆ ಅಗೌರವ ತೋರಿದ್ದು, ಸಚಿವರ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಇದನ್ನೂ ಓದಿ: ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಹಾಕಲು ಯತ್ನ | ಪೊಲೀಸರಿಂದ ತಡೆ, ವಾಗ್ವಾದ, ಆಕ್ರೋಶ
ನಮ್ಮ ಮುಖಂಡರ ಪ್ರಯತ್ನದಿಂದ ರಾಜ್ಯದ 1.28 ಕೋಟಿ ಫಲಾನುಭವಿಗಳ ಖಾತೆಗೆ 2 ತಿಂಗಳಿನ ಗೃಹಲಕ್ಷ್ಮಿ ಹಣವು ಪಾವತಿಯಾಗಲಿದೆ ಎಂದು ತಿಳಿಸಿದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
