CHITRADURGA NEWS | 21 MAY 2025
ಹೊಳಲ್ಕೆರೆ: ಸಿರಿಗೆರೆ ಹೋಬಳಿ ಸಿದ್ದಾಪುರ ಗ್ರಾಮದಲ್ಲಿ 4 ಕೋಟಿ ರೂ.ವೆಚ್ಚದಲ್ಲಿ ನೂತನ ಸಿ.ಸಿ.ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
Also Read: ಕ್ಯಾನ್ಸರ್ ತಡೆಗಟ್ಟಲು ಈ 5 ಕ್ಯಾನ್ಸರ್ ವಿರೋಧಿ ಆಹಾರವನ್ನು ತಿನ್ನಿ
ನಂತರ ಮಾತನಾಡಿದ ಶಾಸಕರು, ಗುಣಮಟ್ಟದ ರಸ್ತೆ, ಕೆರೆ ಕಟ್ಟೆಗಳಿಗೆ ನೀರು ತುಂಬಿಸುವುದು, ರೈತರ ತೋಟಗಳು ಒಣಗದಂತೆ ವಿದ್ಯುತ್ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.
ತಾಲ್ಲೂಕಿನಾದ್ಯಂತ 495 ಹಳ್ಳಿಗಳಲ್ಲಿಯೂ ಪ್ರತಿನಿತ್ಯ ಒಂದಲ್ಲ ಒಂದು ರೀತಿಯ ಅಭಿವೃದ್ದಿ ಕಾಮಗಾರಿಗಳು ನಡೆಯುತ್ತಿರುತ್ತವೆ. ಸಿದ್ದಾಪುರದ ಜನ ಯಾವುದೇ ಸಂದರ್ಭದಲ್ಲಿ ನನ್ನನ್ನು ಕೈಬಿಟ್ಟಿಲ್ಲ. ಚುನಾವಣೆಯಲ್ಲಿ ಮತ ನೀಡಿ ಗೆಲ್ಲಿಸಿದ್ದೀರಿ. ನಿಮ್ಮಗಳ ಋಣ ನನ್ನ ಮೇಲಿದೆ ಎಂದರು.
ಅಜ್ಜಂಪುರದಲ್ಲಿ 250 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ ಸ್ಟೇಷನ್ ನಿರ್ಮಿಸಿ ಇನ್ನು ಆರು ತಿಂಗಳೊಳಗೆ ರೈತರ ತೋಟಗಳಿಗೆ ನಿರಂತರ ಕರೆಂಟ್ ಕೊಡಲಾಗುವುದು.
ಕೆರೆ ಕಟ್ಟೆಗಳನ್ನು ತುಂಬಿಸುವುದು ದೊಡ್ಡದಲ್ಲ. ನೀರು ವ್ಯರ್ಥವಾಗಿ ಹರಿದು ಹೋಗದಂತೆ ಎಚ್ಚರ ವಹಿಸುವುದು ಮುಖ್ಯ. ಒಟ್ಟಾರೆ ಕ್ಷೇತ್ರದ ಜನಸಾಮಾನ್ಯರ, ರೈತರ, ಬಡವರ ಕೆಲಸಗಳಿಗೆ ಆದ್ಯತೆ ಕೊಡುತ್ತೇನೆ ಎಂದು ಹೇಳಿದರು.
Also read: ಈ 5 ಹೊಟ್ಟೆ ಸಮಸ್ಯೆಗಳಿದ್ದರೆ, ಹೊಕ್ಕುಳಲ್ಲಿ ಕ್ಯಾಸ್ಟರ್ ಆಯಿಲ್ ಹಚ್ಚಿ
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪ ಪ್ರದೀಪ್, ಸದಸ್ಯರುಗಳಾದ ಮೋಹನ್, ಬಸವರಾಜ್, ವೀರಭದ್ರಯ್ಯ, ರಾಜಣ್ಣ, ಪಂಚಾಚಾರಿ ಸೇರಿದಂತೆ ಗ್ರಾಮಸ್ಥರು ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
