CHITRADURGA NEWS | 21 MARCH 2026
ಹೊಳಲ್ಕೆರೆ: ತಾಲೂಕಿನ ಬಂಡೆಬೊಮ್ಮನಹಳ್ಳಿ ಗ್ರಾಮದಲ್ಲಿ ಒಂದು ಕೋಟಿ ರೂ.ವೆಚ್ಚದಲ್ಲಿ ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿ ಪೂಜೆ ನೆರವೇರಿಸಿದರು.
ಇದನ್ನೂ ಓದಿ: ಆಸಿಡ್ ದಾಳಿ ಸಂತ್ರಸ್ತರ ಆರೋಗ್ಯ ವಿಚಾರಿಸಿದ ನ್ಯಾ.ವಿಜಯ್
ನಂತರ ಮಾತನಾಡಿದ ಶಾಸಕರು, ನಿಮ್ಮ ಊರಿನಲ್ಲಿ ಕೆರೆ ಏರಿ ಮೇಲೆ ಒಂದು ಬಸ್ ಹೋಗುತ್ತಿತ್ತು. ಅದನ್ನು ಮನಗಂಡು ಏರಿ ಅಗಲಗೊಳಿಸಿದ್ದರಿಂದ ಈಗ ಏಕ ಕಾಲದಲ್ಲಿ ಎರಡು ಬಸ್‍ಗಳು ಸಂಚರಿಸುತ್ತಿವೆ. ಐದು ಕೋಟಿ ರೂ.ವೆಚ್ಚದಲ್ಲಿ ಬ್ರಿಡ್ಜ್ ಕಟ್ಟಿಸಿದ್ದೇನೆ.
ಎಲ್ಲಿ ಏನು ಅವಶ್ಯಕತೆಯಿದೆ ಎನ್ನುವುದನ್ನು ಅರ್ಥಮಾಡಿಕೊಂಡು ಕೆಲಸ ಮಾಡುತ್ತಿದ್ದೇನೆ. ಬಡ ಮಕ್ಕಳಿಗೂ ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ಸಿಗುವಂತಾಗಲಿ ಎನ್ನುವ ಉದ್ದೇಶದಿಂದ ತಾಲ್ಲೂಕಿಗೆ ಹದಿಮೂರು ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮಂಜೂರು ಮಾಡಿಸಿದ್ದೇನೆ.
ಒಂದು ಶಾಲೆಯಿದ್ದರೆ ಸುತ್ತಮುತ್ತಲಿನ ಏಳೆಂಟು ಹಳ್ಳಿ ಮಕ್ಕಳಿಗೆ ಅನುಕೂಲವಾಗುತ್ತದೆ. ಬೆಳಿಗ್ಗೆ ಮನೆಗಳಿಗೆ ಹೋಗಿ ಮಕ್ಕಳನ್ನು ಕರೆ ತಂದು ಮಧ್ಯಾಹ್ನ ಬಿಸಿಯೂಟ, ಹಾಲು, ಬಾಳೆಹಣ್ಣು, ಮೊಟ್ಟೆ, ಪೌಷ್ಠಿಕಾಂಶವುಳ್ಳ ಕಾಳು, ಪಠ್ಯಪುಸ್ತಕ, ಶೂ, ಸಾಕ್ಸ್ ನೀಡಲಾಗುತ್ತದೆ. ನಂತರ ಸಂಜೆ ಮಕ್ಕಳನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಲಾಗುವುದು ಎಂದರು.
ಇದನ್ನೂ ಓದಿ: ಹಾಲು ಉತ್ಪಾದಕರ ಸಹಕಾರ ಸಂಘ ರದ್ದತಿಗೆ ಕ್ರಮ
ಹಿರಿಯೂರು ತಾಲ್ಲೂಕಿನ ವಾಣಿವಿಲಾಸಸಾಗರದಿಂದ ತಾಲ್ಲೂಕಿನಾದ್ಯಂತ ಪ್ರತಿ ಮನೆ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. 2053 ನೇ ಇಸವಿಯವರೆಗೆ ಜನಸಂಖ್ಯೆಯನ್ನು ಆಧಾರವಾಗಿಟ್ಟುಕೊಂಡು ಇನ್ನು ಎರಡು ಮೂರು ತಿಂಗಳಲ್ಲಿ ನೀರು ನೀಡುತ್ತೇನೆ.
ಭರಮಸಾಗರ ಹೋಬಳಿ ಸೇರಿ ಹೊಳಲ್ಕೆರೆ ತಾಲ್ಲೂಕಿನಲ್ಲಿರುವ ಎಲ್ಲಾ ಕೆರೆಗಳಿಗೆ ಭದ್ರಾ ಯೋಜನೆಯಿಂದ ನೀರು ತುಂಬಿಸಲಾಗುವುದು. ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್‍ಗಳ ನಿರ್ಮಾಣವಾಗುತ್ತಿದೆ. ಚಿಕ್ಕಜಾಜೂರಿನ ಕೋಟೆಹಾಳ್ ಹತ್ತಿರ ಹದಿಮೂರುವರೆ ಎಕರೆ ಜಾಗದಲ್ಲಿ ಐದು ನೂರು ಕೋಟಿ ರೂ.ವೆಚ್ಚದಲ್ಲಿ ನಾಲ್ಕು ನೂರು ಕೆ.ವಿ. ವಿದ್ಯುತ್ ಪವರ್ ಸ್ಟೇಷನ್ ಕಟ್ಟಿಸುತ್ತಿದ್ದೇನೆ.
ಜೋಗ್‍ಫಾಲ್ಸ್‍ನಿಂದ ನೇರವಾಗಿ ಇಲ್ಲಿಗೆ ವಿದ್ಯುತ್ ಪೂರೈಕೆಯಾಗಲಿದೆ. ಇದರಿಂದ ರೈತರಿಗೆ ದಿನಕ್ಕೆ ಹತ್ತು ಗಂಟೆಗಳ ಕಾಲ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | ಯುಗಾದಿ ನಂತರದ ಅಡಿಕೆ ಮಾರುಕಟ್ಟೆ ರೇಟ್
ಈ ಸಂದರ್ಭದಲ್ಲಿ ಹೊಳಲ್ಕೆರೆ ಬಿಜೆಪಿ.ಮಂಡಲ ಮಾಜಿ ಅಧ್ಯಕ್ಷ ಸಿದ್ದೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಂತೋಷ್, ರಮೇಶ್, ನಾಗರಾಜಪ್ಪ, ಉಮೇಶ್, ಮಹೇಶಣ್ಣ, ಪರಮೇಶಣ್ಣ, ಡಾ.ವಿದ್ಯಾ, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರುಗಳು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
