CHITRADURGA NEWS | 15 AUGUST 2026
ಚಿತ್ರದುರ್ಗ: ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಯ ವತಿಯಿಂದ ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಲಾಯಿತು.
ಇದನ್ನೂ ಓದಿ: ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ
ಸೊಸೈಟಿಯ ಅಧ್ಯಕ್ಷ ಎಂ. ನಿಶಾನಿ ಜಯಣ್ಣ ಅವರು ಭೂಮಿಪೂಜೆ ನೆರವೇರಿಸಿ ಮಾತನಾಡಿ, 1912ರಲ್ಲಿ ಸ್ಥಾಪನೆಯಾದ ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಯಿಂದ ಸುಮಾರು ₹2.50 ಕೋಟಿಯಿಂದ ₹2.75 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದರು.
ಕಟ್ಟಡ ನಿರ್ಮಾಣಕ್ಕಾಗಿ ಡಿಸಿಸಿ ಬ್ಯಾಂಕ್‌ನಿಂದ ₹2 ಕೋಟಿ ಸಾಲ ಪಡೆಯಲಾಗಿದೆ. ಇ-ಟೆಂಡರ್ ಮೂಲಕ ಆರ್. ಮಂಜುನಾಥ್ ಅವರಿಗೆ ಕಾಮಗಾರಿ ಗುತ್ತಿಗೆ ನೀಡಲಾಗಿದ್ದು, ಜಿಲ್ಲೆಯಲ್ಲಿ ಮಾದರಿಯಾಗುವ ರೀತಿಯಲ್ಲಿ ಸಹಕಾರಿ ಸಮುದಾಯ ಭವನ ನಿರ್ಮಿಸಲಾಗುವುದು ಎಂದು ಹೇಳಿದರು.
ಸಮುದಾಯ ಭವನದಲ್ಲಿ 90 ಅಡಿ ಉದ್ದದ ಫಂಕ್ಷನ್ ಹಾಲ್, ಏಳು ಕೊಠಡಿಗಳು, ಡೈನಿಂಗ್ ಹಾಲ್, ಸ್ಟೋರ್ ರೂಂ, ಲಿಫ್ಟ್ ಹಾಗೂ ಹವಾನಿಯಂತ್ರಣ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಜನವರಿ ವೇಳೆಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದರು.
ಇದನ್ನೂ ಓದಿ: ಮತದಾರರ ಪಟ್ಟಿ ಪರಿಷ್ಕರಣೆ | ಚಿತ್ರದುರ್ಗದಲ್ಲಿ ಶೇ.90.15 ಗಣಕೀಕರಣ ಪೂರ್ಣ | ಡಿಸಿ
ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ, ಶಾಸಕರಾದ ಕೆ.ಸಿ. ವೀರೇಂದ್ರಪ್ಪ, ಬಿ.ಜಿ. ಗೋವಿಂದಪ್ಪ ಹಾಗೂ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಇಲಿಯಾಸ್ ಉಲ್ಲಾ ಷರೀಫ್ ಅವರ ಸಹಕಾರದೊಂದಿಗೆ ಹೈಟೆಕ್ ಸಹಕಾರಿ ಸಮುದಾಯ ಭವನ ನಿರ್ಮಾಣವಾಗಲಿದೆ ಎಂದು ನಿಶಾನಿ ಜಯಣ್ಣ ಹೇಳಿದರು.
ಈ ಸಂದರ್ಭದಲ್ಲಿ ಸೊಸೈಟಿ ಉಪಾಧ್ಯಕ್ಷೆ ಎನ್.ಎಂ. ಪುಷ್ಪವಲ್ಲಿ, ನಿರ್ದೇಶಕರಾದ ಸುರೇಶ್ ಭಾಫ್ನ, ಸಿ.ಕೆ. ಸತ್ಯಮೂರ್ತಿ, ಶ್ರೀನಿವಾಸ್ ಮೂರ್ತಿ, ಹರೀಶ್ ಬಾಬು, ಸೂರ್ಯಪ್ರಕಾಶ್, ಚಂಪಿಕ, ನಿಶಾನಿ ದಶರಥ, ಚಂದ್ರಪ್ಪ, ತಿಪ್ಪೇಸ್ವಾಮಿ, ಶಬ್ಬೀರ್ ಅಹಮದ್, ದೊರೆಸ್ವಾಮಿ ಕೆ., ಸಾಧಿಕ್ ಅಲಿಖಾನ್, ವ್ಯವಸ್ಥಾಪಕ ನಯೀಮ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

