CHITRADURGA NEWS | 15 MARCH 2026
ಹೊಳಲ್ಕೆರೆ: ಖಾಸಗಿ ಶಾಲೆಯನ್ನು ಮೀರಿಸುವ ರೀತಿಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುತ್ತದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.
ಇದನ್ನೂ ಓದಿ: ಅದ್ದೂರಿ ಏಕನಾಥೇಶ್ವರಿ ಜಾತ್ರೆಗೆ ತೀರ್ಮಾನ | ನಗರಾದ್ಯಂತ ದೀಪಾಲಂಕಾರಕ್ಕೆ ಸಲಹೆ
ಎನ್.ಜಿ.ಹಳ್ಳಿ ಗ್ರಾಮದಲ್ಲಿ 10 ಕೋಟಿ ರೂ.ವೆಚ್ಚದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆ ಸಲ್ಲಿಸಿ ನಂತರ ಸರ್ಕಾರಿ ಪ್ರೌಢಶಾಲೆಯ ವಾರ್ಷಿಕೋತ್ಸವ, ಎನ್.ಜಿ.ಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಸ್ ವಿತರಿಸಿ ಮಾತನಾಡಿದರು.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಲ್.ಕೆ.ಜಿ.ಯಿಂದ ಪಿ.ಯು.ಸಿವರೆಗೆ ಗುಣ ಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಾಗುವುದು. ಮಧ್ಯಾಹ್ನದ ಬಿಸಿಯೂಟ, ಪಠ್ಯಪುಸ್ತಕ, ಶೂ, ಸಾಕ್ಸ್, ಪೌಷ್ಠಿಕಾಂಶವುಳ್ಳ ಕಾಳುಗಳನ್ನು ನೀಡಲಾಗುವುದು. ಸುತ್ತಮುತ್ತಲಿನ ಹತ್ತುಕ್ಕು ಹೆಚ್ಚು ಹಳ್ಳಿಗಳ ಮಕ್ಕಳು ಇಲ್ಲಿಗೆ ಬಂದು ಪಾಠ ಕಲಿಯಬಹುದು.
ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆಂದು ಉಚಿತವಾಗಿ ಬಸ್ಗಳನ್ನು ಬಿಟ್ಟಿದ್ದೇನೆ. ಡ್ರೈವರ್ ಕಂಡಕ್ಟರ್ಗೆ ಸಂಬಳ ನೀಡಿ ಬಸ್ಗೆ ಡೀಸೆಲ್ ಕೂಡ ಹಾಕಿಸಲಾಗುವುದು. ಬೆಳಿಗ್ಗೆ ಮಕ್ಕಳನ್ನು ಮನೆಯಿಂದ ಶಾಲೆಗೆ ಕರೆ ತಂದು ಸಂಜೆ ಸುರಕ್ಷಿತವಾಗಿ ಮನೆಗೆ ತಲುಪಿಸಲಾಗುವುದು ಎಂದರು.
ಇದನ್ನೂ ಓದಿ: ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
ಮುಂದಿನ ದಿನಗಳಲ್ಲಿ ಎಲ್ಲಾ ಹಳೆಯ ಶಾಲೆಗಳನ್ನು ಕೆಡವಿ ಹತ್ತು ಕೋಟಿ ರೂ.ವೆಚ್ಚದಲ್ಲಿ ಉತ್ತಮ ಕಟ್ಟಡಗಳನ್ನು ಕಟ್ಟಿಸಿ ಖಾಸಗಿ ಶಾಲೆಗಳನ್ನು ಮೀರಿಸುವ ರೀತಿಯಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಿಸಲಾಗುವುದು. ಪೋಷಕರುಗಳು ತಮ್ಮ ಮಕ್ಕಳನ್ನು ಕರ್ನಾಟಕ ಪಬ್ಲಿಕ್ ಶಾಲೆಗೆ ದಾಖಲಿಸಿ ಸಹಕರಿಸುವಂತೆ ಮನವಿ ಮಾಡಿದರು.
ದೇವಸ್ಥಾನಕ್ಕೆ ಈಗಾಗಲೆ ಹತ್ತು ಲಕ್ಷ ರೂ.ಗಳನ್ನು ಕೊಟ್ಟಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ಅನುದಾನದಲ್ಲಿ ಇನ್ನು ಹಣ ಕೊಡುತ್ತೇನೆ. ಎನ್.ಜಿ.ಹಳ್ಳಿ ಗೇಟ್ನಲ್ಲಿ
ಪೊಲೀಸ್ ಉಪ ಠಾಣೆ ಅಗತ್ಯವಿರುವುದರಿಂದ ಗೃಹ ಮಂತ್ರಿ ಬಳಿ ಮಾತನಾಡಿ ಮಂಜೂರು ಮಾಡಿಸುತ್ತೇನೆ ಎಂದು ಭರವಸೆ ನೀಡಿದರು.
ವಿಧಾನಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಎನ್.ಜಿ.ಹಳ್ಳಿ ಗ್ರಾಮಕ್ಕೆ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಮಂಜೂರು ಮಾಡಿಸುವಂತೆ ಈ ಹಿಂದೆ ಶಾಸಕ ಡಾ.ಎಂ.ಚಂದ್ರಪ್ಪನವರಲ್ಲಿ ಮನವಿ ಮಾಡಿದ್ದೆ. ಅದರಂತೆ ಅವರು ಕರ್ನಾಟಕ ಪಬ್ಲಿಕ್ ಶಾಲೆಯನ್ನು ಕೊಟ್ಟು ಹೇಳಿದ ಮಾತಿನಂತೆ ನಡೆದುಕೊಂಡಿದ್ದಾರೆ.
ಐದರಿಂದ ಹತ್ತು ಕೋಟಿ ರೂ.ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟಿಸುವುದಾಗಿಯೂ ಭರವಸೆ ಕೊಟ್ಟಿರುವುದು ನನಗೆ ಅತ್ಯಂತ ಸಂತೋಷವನ್ನುಂಟು ಮಾಡಿದೆ. ಕೆಲವು ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳನ್ನು ಮೀರಿಸುವ ರೀತಿಯಲ್ಲಿವೆ. ಎನ್.ಜಿ.ಹಳ್ಳಿ ಹಾಗೂ ಸುತ್ತಮುತ್ತಲಿನ ಹತ್ತಾರು ಗ್ರಾಮದ ಮಕ್ಕಳು ಇಲ್ಲಿಗೆ ಬಂದು ಶಿಕ್ಷಣ ಪಡೆಯುವಂತೆ ತಿಳಿಸಿದರು.
ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮೂಲಭೂತ ಸೌಲಭ್ಯಗಳಾದ ಹೆಚ್ಚುವರಿ ಕೊಠಡಿ, ಗ್ರಂಥಾಲಯ, ಲೈಬ್ರರಿಯನ್ನು ತೆರೆಯಬೇಕು. ಶಿಕ್ಷಕರು ಮನೆ ಮನೆಗೆ ಹೋಗಿ ಮಕ್ಕಳನ್ನು ಶಾಲೆಗೆ ಕರೆ ತರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಮಕ್ಕಳನ್ನು ಇಲ್ಲಿಗೆ ದಾಖಲಿಸಿ ಸಹಕರಿಸುವಂತೆ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಎನ್.ಜಿ.ಹಳ್ಳಿ ಗಡಿ ಭಾಗದಲ್ಲಿರುವುದರಿಂದ ಇಲ್ಲೊಂದು ಪೊಲೀಸ್ ಔಟ್ಪೋಸ್ಟ್ ಮಂಜೂರು ಮಾಡಿಸುವಂತೆ ಶಾಸಕ ಡಾ.ಎಂ.ಚಂದ್ರಪ್ಪನವರಲ್ಲಿ ಕೆ.ಎಸ್.ನವೀನ್ ವಿನಂತಿಸಿದರು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಕ್ಷೇತ್ರ ಸಮನ್ವಯಾಧಿಕಾರಿ ಸುರೇಂದ್ರನಾಥ್, ಹೊಳಲ್ಕೆರೆ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕೇಶ್, ಜೆ.ಆರ್.ಗುರುಮೂರ್ತಿ, ಕುಮಾರ್, ಮೋಹನ್ಕುಮಾರ್, ಶ್ರೀನಿವಾಸ್, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

