Connect with us

    ಚಿತ್ರಹಳ್ಳಿಯ ಮೊರಾರ್ಜಿ ಶಾಲೆಯಲ್ಲಿ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿಗೆ ಭೂಮಿಪೂಜೆ

    ಹೊಳಲ್ಕೆರೆ

    ಚಿತ್ರಹಳ್ಳಿಯ ಮೊರಾರ್ಜಿ ಶಾಲೆಯಲ್ಲಿ ಸಿಂಥೆಟಿಕ್ ಟ್ರ್ಯಾಕ್ ಕಾಮಗಾರಿಗೆ ಭೂಮಿಪೂಜೆ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 25 MARCH 2025

    ಹೊಳಲ್ಕೆರೆ: ತಾಲ್ಲೂಕಿನ ಚಿತ್ರಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಆವರಣದಲ್ಲಿ ರೂ.1.90 ಕೋಟಿ ವೆಚ್ಚದಲ್ಲಿ 400 ಮೀಟರ್ ಸಿಂಥೆಟಿಕ್ ರನ್ನಿಂಗ್ ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಶಂಕಸ್ಥಾಪನೆ ನೆರವೇರಿಸಿದರು

    Also Read: ಸಾಲ ನೀಡಲು ಲಂಚದ ಬೇಡಿಕೆ | ಡಿಸಿಸಿ ಬ್ಯಾಂಕ್ ನೌಕರ ಲೋಕಾಯುಕ್ತ ಬಲೆಗೆ

    ಈ ವೇಳೆ ಮಾತನಾಡಿದ ಶಾಸಕರು, ಗಟ್ಟಿಮುಟ್ಟಾಗಿ ಆರೋಗ್ಯದಿಂದಿರಬೇಕಾದರೆ ಪ್ರತಿಯೊಬ್ಬರು ಪಠ್ಯದ ಜೊತೆ ಆಟಕ್ಕೂ ಹೆಚ್ಚಿನ ಒತ್ತು ಕೊಡಬೇಕು ಎಂದು ಮಕ್ಕಳಿಗೆ ತಿಳಿಸಿದರು.

    ಬೆಂಗಳೂರಿನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದ ಮಾದರಿಯಲ್ಲಿ ಸ್ಟೇಡಿಯಂ ನಿರ್ಮಾಣ ಮಾಡಲಾಗುವುದು. 30 ಸಾವಿರ ಮಕ್ಕಳು ಕುಳಿತು ಆಟಗಳನ್ನು ವೀಕ್ಷಿಸಬಹುದು. ಮಕ್ಕಳನ್ನು ಕೇವಲ ಪಠ್ಯಪುಸ್ತಕಕ್ಕಷ್ಟೆ ಸೀಮಿತಗೊಳಿಸುವ ಬದಲು ಕ್ರೀಡೆಯಲ್ಲಿಯೂ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಿದಾಗ ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯವಂತರಾಗಿರಬಹುದು ಎಂದು ಹೇಳಿದರು.

    ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಯಾರು ಪಡೆಯುತ್ತಾರೋ ಅವರಿಗೆ ಐವತ್ತು ಸಾವಿರ ರೂ.ಗಳ ಬಹುಮಾನ ನೀಡುತ್ತೇನೆ.

    Also Read: ಶಿವಮೊಗ್ಗದಲ್ಲಿ ರಾಶಿ ಅಡಿಕೆ ಬೆಲೆ ಮತ್ತಷ್ಟು ಹೆಚ್ಚಳ

    ಮುಂದಿನ ಶೈಕ್ಷಣಿಕ ವರ್ಷಕ್ಕೆ 6 ರಿಂದ 7 ಕೋಟಿ ರೂ.ವೆಚ್ಚದಲ್ಲಿ ಹೆಣ್ಣು ಮಕ್ಕಳ ಪದವಿ ಕಾಲೇಜು ಹಾಸ್ಟೆಲ್ ನಿರ್ಮಾಣವಾಗಲಿದೆ. ಅತ್ಯುತ್ತಮವಾದ ಕ್ಯಾಂಪಸ್ ಕೂಡ ಇರಲಿದೆ. ಶಿಕ್ಷಣದ ಕಡೆ ಗಮನ ಕೊಟ್ಟು ನಿಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಗುರು-ಹಿರಿಯರು, ಶಾಲಾ-ಕಾಲೇಜು ಹಾಗೂ ಪೋಷಕರುಗಳಿಗೆ ಕೀರ್ತಿ ತರುವಂತಾಗಬೇಕು ಎಂದು ಹೇಳಿದರು.

    ಎಂ.ಎಂ.ಪ್ರೌಢಶಾಲೆಯೊಂದರಲ್ಲಿಯೇ ಒಂದು ಸಾವಿರಕ್ಕೂ ಹೆಚ್ಚು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ ಎಂದರು.

    Also Read: ಏಪ್ರಿಲ್ 1 ರಿಂದ 15ರ ವರೆಗೆ ಏಕನಾಥೇಶ್ವರಿ ಜಾತ್ರೆ

    ಈ ಸಂದರ್ಭದಲ್ಲಿ ಹೊಳಲ್ಕೆರೆ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚನ್ನಬಸಪ್ಪ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಅಧಿಕಾರಿ ಪ್ರದೀಪ್‍ಕುಮಾರ್, ಮೊರಾರ್ಜಿದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಹರ್ಷ, ಅಂಕಳಪ್ಪ, ಪ್ರವೀಣ್, ಶಿವಮೂರ್ತಿ, ಮಹೇಶ್, ಮೋಹನ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    More in ಹೊಳಲ್ಕೆರೆ

    To Top