
CHITRADURGA NEWS | 20 NOVEMBER 2025
ಚಿತ್ರದುರ್ಗ : ಚಿತ್ರದುರ್ಗ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜಲ ಸಂರಕ್ಷಣಾ ಕಾಮಗಾರಿಗಳನ್ನು ಉತ್ತಮವಾಗಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಜಲ ಶಕ್ತಿ ಇಲಾಖೆ ನೀಡುವ ಜಲ ಸಂಚಾಯ್, ಜನ ಭಾಗಿಧಾರಿ (ಜಿ.ಎಸ್.ಜೆ.ಬಿ) ರಾಷ್ಟ್ರ ಪ್ರಶಸ್ತಿಗೆ ಜಿಲ್ಲೆಯು ಭಾಜನವಾಗಿದೆ.
ಇದನ್ನೂ ಓದಿ: ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಸೂಚನೆ

ನವದೆಹಲಿಯಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದೌಪದಿ ಮುರ್ಮು, ಹಾಗೂ ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ನೀಡಿದ ಪ್ರಶಸ್ತಿಯನ್ನು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಸ್ವೀಕರಿಸಿದರು.
ಜಿಲ್ಲೆಯಲ್ಲಿ ಜಲ ಮೂಲದ ಸಂರಕ್ಷಣೆಯಡಿ ಅಂತರ್ಜಲ ವೃದ್ಧಿಗಾಗಿ, ಜಲ ಸಂರಕ್ಷಣೆಗೆ ಅದ್ಯತೆ ನೀಡಲಾಗಿದ್ದು, ಮಳೆ ನೀರು ಸಂರಕ್ಷಣೆ ಕಾಮಗಾರಿ, ಕಂದಕ ಬದು, ಕೆರೆ ಹೂಳೆತ್ತುವುದು, ಕಟ್ಟೆ ಅಭಿವೃದ್ಧಿ, ಕಾಲುವೆ ಅಭಿವೃದ್ಧಿ, ಕಲ್ಯಾಣಿಗಳ ಅಭಿವೃದ್ಧಿ, ಚೆಕ್ ಡ್ಯಾಮ್ ನಿರ್ಮಾಣ, ಇಂಗು ಗುಂಡಿ ಸೇರಿದಂತೆ ಹಲವು ಕಾಮಗಾರಿಗಳಿಂದ ಅಂತರ್ಜಲ ಮಟ್ಟ ಹೆಚ್ಚಲು ಕಾರಣವಾಗಿದೆ.
ಜಿಲ್ಲೆಯಲ್ಲಿ ವಿಶೇಷವಾಗಿ ನರೇಗಾ ಯೋಜನೆಯಡಿ ಅಭಿಯಾನ ಕೈಗೊಂಡು 2024-25ನೇ ಸಾಲಿನಲ್ಲಿ 1063 ಗ್ರಾಮಗಳಲ್ಲಿ 7815 ಕಾಮಗಾರಿಗಳನ್ನು ಅನುಷ್ಠಾನಿಸಲಾಗಿದೆ.
ಇದನ್ನೂ ಓದಿ: ವಿಕಲಚೇತನರಿಗೆ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ | ಜೆ.ವೈಶಾಲಿ
ಈ ಎಲ್ಲಾ ಕಾಮಗಾರಿಗಳು ಪರಿಣಾಮಕಾರಿಯಾಗಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ರೂ. 25 ಲಕ್ಷ ನಗದು ಸೇರಿದಂತೆ ಈ ಪ್ರಶಸ್ತಿ ಲಭಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
