
CHITRADURGA NEWS | 07 JANUARY 2026
ಚಿತ್ರದುರ್ಗ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಸೋಲಾರ್ ಪ್ಲಾಂಟ್ ಅಳವಡಿಕೆಗೆ ರೈತರ ವಿರೋಧ | ಡಿಸಿ ಕಚೇರಿ ಎದುರು ಪ್ರತಿಭಟನೆ

ಹೊಳಲ್ಕೆರೆ ತಾಲ್ಲೂಕಿನ ಗಂಗಸಮುದ್ರ, ರಾಮಗಿರಿ ಗ್ರಾಮ ಪಂಚಾಯಿತಿ ಹಾಗೂ ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್, ಗೊಡಬನಾಳ್ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ, ಬೂದುನೀರು ನಿರ್ವಹಣೆ ಕಾಮಗಾರಿ, ಅಂಗನವಾಡಿ ಹಾಗೂ ಗ್ರಂಥಾಲಯ ಪರಿಶೀಲನೆ ನಡೆಸಿದರು.
ಗಂಗಸಮುದ್ರ ಹಾಗೂ ಅನ್ನೇಹಾಳ್ ಅಂಗನವಾಡಿ ಕೇಂದ್ರಗಳ ದಾಖಲಾತಿಗಳನ್ನು ಪರಿಶೀಲಿಸಿ, ಆರೋಗ್ಯ ಮತ್ತು ಮಕ್ಕಳ ಪೌಷ್ಠಿಕ ಆಹಾರ ವಿತರಣೆ ಕುರಿತು ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿ ಗ್ರಂಥಾಲಯ ಪುಸ್ತಕಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಗ್ರಂಥಪಾಲಕರಿಗೆ ತಿಳಿಸಿದರು.
ಗ್ರಾಮಫೋನ್ ಸಹಾಯವಾಣಿ ಬಗ್ಗೆ ಹೆಚ್ಚು ಪ್ರಚಾರ ಪಡಿಸಿ :
ಗ್ರಾಮೀಣ ಜನರಿಗೆ ತ್ವರಿತವಾಗಿ ಸ್ಪಂದಿಸಲು ಜಿಲ್ಲಾ ಪಂಚಾಯಿತಿ ವತಿಯಿಂದ ಆರಂಭಿಸಿರುವ ಉಚಿತ ಗ್ರಾಮಫೋನ್ ಸಹಾಯವಾಣಿ-1800-425-1978 ಕುರಿತು ಹೆಚ್ಚು ಪ್ರಚುರ ಪಡಿಸಬೇಕು ಎಂದು ಜಿ.ಪಂ ಸಿಇಒ ಡಾ.ಆಕಾಶ್ ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ವಿಮಾನ ಹತ್ತಿದ ಸರ್ಕಾರಿ ಶಾಲೆ ಮಕ್ಕಳು | ದೆಹಲಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ನೆರವು
ಗ್ರಾಮೀಣ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ, ಪರಿಹಾರ ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗ್ರಾಮ-ಫೋನ್ ಜಾರಿಗೊಳಿಸಿದ್ದು, ಗ್ರಾಮೀಣ ಜನರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸಿಕೊಳ್ಳಲು ಉಚಿತ ಗ್ರಾಮಫೋನ್ ಸಹಾಯಕವಾಗಿದೆ. ಹಾಗಾಗಿ ಗ್ರಾಮಫೋನ್ ಉಚಿತ ಸಹಾಯವಾಣಿ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಪ್ರಚುರಪಡಿಸಲು ತಿಳಿಸಿದರು.
ಉತ್ತಮ ಕಚೇರಿ ನಿರ್ವಹಣೆಗಾಗಿ ಏಳು ಸೂತ್ರಗಳ ಭಿತ್ತಿಚಿತ್ರಗಳನ್ನು ಸೂಚನಾ ಫಲಕದಲ್ಲಿ ಅಳವಡಿಸಲು ಸೂಚಿಸಿದರು.
ಬೂದುನೀರು ನಿರ್ವಹಣೆ ಕಾಮಗಾರಿ ವೀಕ್ಷಣೆ:
ಹೊಳಲ್ಕೆರೆ ತಾಲ್ಲೂಕಿನ ಗಂಗಸಮುದ್ರ ಮತ್ತು ತಾಳಿಕಟ್ಟೆ ಗ್ರಾಮ, ಚಿತ್ರದುರ್ಗ ತಾಲ್ಲೂಕಿನ ಅನ್ನೇಹಾಳ್, ಮಹದೇವನಕಟ್ಟೆ, ಗೊಡಬನಾಳ್ ಗ್ರಾಮಗಳಲ್ಲಿ ಬೂದು ನೀರು ನಿರ್ವಹಣೆ ಕಾಮಗಾರಿಗಳನ್ನು ಜಿ.ಪಂ ಸಿಇಒ ಡಾ.ಎಸ್.ಆಕಾಶ್ ವೀಕ್ಷಿಸಿದರು.
ಬೂದುನೀರು ನಿರ್ವಹಣೆಗಾಗಿ ಚರಂಡಿಯಲ್ಲಿ ಸಂಸ್ಕರಿಸುವ ವಿಧಾನ (ಇನ್‍ಲೈನ್ ಟ್ರೀಟ್‍ಮೆಂಟ್) ನಿರ್ಮಾಣದ ಕಾಮಗಾರಿಗಳನ್ನು ಪರಿಶೀಲಿಸಿ, ನಂತರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸ್ವಚ್ಛ ಸಂಕೀರ್ಣ ಘಟಕಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಕಾರ್ಯಾಚರಣೆ ಕುರಿತು ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದನ್ನೂ ಓದಿ: ಅಬಕಾರಿ ಲೈಸೆನ್ಸ್ ಇ-ಹರಾಜು | ಒಂದು ಅರ್ಜಿ ಶುಲ್ಕ ಎಷ್ಟು ಗೊತ್ತಾ ?
ಈ ಸಂದರ್ಭದಲ್ಲಿ ಗ್ರಾಮೀಣ ಕುಡಿಯುವ ನೀರು ಕಾರ್ಯಪಾಲಕ ಅಭಿಯಂತರರಾದ ಅಮರನಾಥ್ ಜೈನ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶಿವಮೂರ್ತಿ, ವಾಸುದೇವ್, ಕಿರಿಯ ಅಭಿಯಂತರರಾದ ಜಗದೀಶ್, ರಾಕೇಶ್, ಹೊಳಲ್ಕೆರೆ ತಾ.ಪಂ ಇ.ಒ ಶಿವಪ್ರಕಾಶ್, ಜಿಲ್ಲಾ ಐಇಸಿ ಸಮಾಲೋಚಕ ಬಿ.ಸಿ.ನಾಗರಾಜ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸಾರ್ವಜನಿಕರು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
