
ಚಿತ್ರದುರ್ಗ ನ್ಯೂಸ್. ಕಾಂ: ಲೋಕಸಭೆ ಚುನಾವಣೆಗೆ ನಾನು ಆಕಾಂಕ್ಷಿ ಅಲ್ಲ, ಟಿಕೇಟಿಗೆ ಅರ್ಜಿಯನ್ನೂ ಹಾಕುವುದಿಲ್ಲ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷ ಯಾರನ್ನು ಗುರುತಿಸಿ ಟಿಕೇಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ ಎಂದರು.
ಲೋಕಸಭಾ ಚುನಾವಣೆ ದೂರ ಇದೆ. ಅನೇಕ ಆಕಾಂಕ್ಷಿಗಳು ಇದ್ದಾರೆ ಎಂದ ಅವರು, ನನಗೆ ಈವರೆಗೆ ಅನೇಕ ಸ್ಥಾನ ಮಾನ ಹುಡುಕಿ ಬಂದಿವೆ. ಜನರ ಜೈಕಾರ ಹಾಕಿಕೊಂಡು ಲಾಬಿ ಮಾಡುವುದಿಲ್ಲ.
ಪಕ್ಷ ಗುರುತಿಸಿ ಅವಕಾಶ ಕಲ್ಪಿಸಿದೆ. ಜನರ ಪರವಾಗಿ ಕಾಳಜಿ ಇರುವ, ಪಕ್ಷ ನಿಷ್ಠೆ ಹೊಂದಿದವರಿಗೆ ಟಿಕೆಟ್ ನೀಡುತ್ತದೆ.
ಎಐಸಿಸಿ ವತಿಯಿಂದ ಸಮೀಕ್ಷೆ ನಡೆಯುತ್ತಿದೆ. ಪಕ್ಷದ ಕಾರ್ಯಕರ್ತರು ಹಾಗೂ ಜನರ ಅಭಿಪ್ರಾಯ ಪಡೆಯುತ್ತಿದ್ದಾರೆ. ದೇಶದಲ್ಲಿ ಬದಲಾವಣೆ ಅಗತ್ಯ ಇದೆ. ಬಡವರ ಪರವಾದ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
