ಮುಖ್ಯ ಸುದ್ದಿ
ಚಿತ್ರದುರ್ಗದಲ್ಲಿ HDK ಜನ್ಮ ದಿನಾಚರಣೆ | ಕೇಕ್ ಕತ್ತರಿಸಿ JDS ಕಾರ್ಯಕರ್ತರ ಸಂಭ್ರಮ
CHITRADURGA NEWS | 16 DECEMBER 2024
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ 65 ನೇ ವರ್ಷದ ಜನ್ಮ ದಿನಾಚರಣೆಯನ್ನು ನಗರದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಜೆಡಿಎಸ್ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು.
ಕ್ಲಿಕ್ ಮಾಡಿ ಓದಿ: ವಿದ್ಯುತ್ ವ್ಯತ್ಯಯ
ಈ ವೇಳೆ ಜೆಡಿಎಸ್ ಘಟಕದ ಅಧ್ಯಕ್ಷ ಎಂ.ಜಯ್ಯಣ್ಣ, ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆಗೆ ನೂತನವಾಗಿ ಸ್ಥಾಯಿ ಸಮಿತಿಗೆ ಅಧ್ಯಕ್ಷರುರಾಗಿ ಆಯ್ಕೆಯಾದ ನಸ್ರುಲ್ಲಾ ಅವರನ್ನು ಜೆಡಿಎಸ್ ವತಿಯಿಂದ ಸನ್ಮಾನಿಸಲಾಯಿತು.
ಕ್ಲಿಕ್ ಮಾಡಿ ಓದಿ: ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಸಿಲುಕಿ ಯುವಕ ಸಾವು
ಜೆಡಿಎಸ್‍ನ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಸಣ್ಣ ತಿಮ್ಮಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತಮ್ಮ, ಸದಸ್ಯ ಚಂದ್ರಶೇಖರ್, ಹೊಳಲ್ಕೆರೆ ಜೆಡಿಎಸ್ ಅಧ್ಯಕ್ಷ ಪರಮೇಶ್ವರಪ್ಪ, ರುದ್ರಣ್ಣ ಜಾಲಿಕಟ್ಟೆ, ಮಂಜುನಾಥ್ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.