By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರೋಟರಿ ಕ್ಲಬ್ ನಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ.
    ರೋಟರಿ ಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ | ಡಾ.ತ್ರಿವಿಕ್ರಮ್ ಜೋಷಿ
    8 hours ago
    PM ವಿಶ್ವಕರ್ಮ ಯೋಜನೆ
    PM ವಿಶ್ವಕರ್ಮ ಯೋಜನೆ | ಜುಲೈ 14 ರಿಂದ 24 ರವರೆಗೆ ಸಾಲ ಸಂಪರ್ಕ ಶಿಬಿರ
    8 hours ago
    ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ
    ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ
    10 hours ago
    ಡಿ.ಕೆ.ಶಿವಕುಮಾರ್‌
    ಚಿತ್ರದುರ್ಗಕ್ಕಿಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ | DCM ಡಾ.ಜಿ.ಪರಮೇಶ್ವರ ಆಗಮನ
    20 hours ago
    ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    20 hours ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    1 month ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    19 hours ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    5 days ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 month ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    1 month ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 13 | ವ್ಯಾಪಾರದಲ್ಲಿ ಆರ್ಥಿಕ ಪ್ರಗತಿ, ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ
    21 hours ago
    today bhavishya
    ದಿನ ಭವಿಷ್ಯ | ಜುಲೈ 12 | ಕೈಗೊಂಡ ವ್ಯವಹಾರಗಳಲ್ಲಿ ಅಡೆತಡೆಗಳು, ದೂರ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಜುಲೈ 11 | ಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಎಚ್ಚರ
    3 days ago
    today bhavishya
    ದಿನ ಭವಿಷ್ಯ | ಜುಲೈ 10 | ಆತುರದ ನಿರ್ಧಾರ ಬೇಡ, ಶುಭ ಸುದ್ದಿ
    4 days ago
    today bhavishya
    ದಿನ ಭವಿಷ್ಯ | ಜುಲೈ 09 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಋಣಾತ್ಮಕ ವಾತಾವರಣ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
    14 hours ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    3 days ago
    ಮಾರುಕಟ್ಟೆ ಧಾರಣೆ | ಜುಲೈ 10 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ | ಜುಲೈ 09 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 08 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    9 hours ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    2 days ago
    ಸಿಸಿ ರಸ್ತೆ ಕಾಮಗಾರಿಗೆ ಭೂಮಿಪೂಜೆ
    2 ಕೋಟಿ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಎಂ. ಚಂದ್ರಪ್ಪ ಭೂಮಿಪೂಜೆ 
    2 weeks ago
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    ಮಳೆಗಾಗಿ ಕತ್ತೆಗಳಿಗೆ ಮದುವೆ, ಮೆರವಣಿಗೆ 
    2 weeks ago
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    65 ಲಕ್ಷದ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    3 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 weeks ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    4 weeks ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    1 month ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    1 month ago
  • Life Style
    Life StyleShow More
    pregnant women to eat gourd
    ಗರ್ಭಿಣಿಯರು ಸೋರೆಕಾಯಿ ತಿನ್ನುವುದು ಸುರಕ್ಷಿತವೇ? 
    20 hours ago
    magnesium-rich foods
    ಮಧುಮೇಹ ರೋಗಿಗಳು ಪ್ರತಿದಿನ ಈ ಮೆಗ್ನೀಸಿಯಮ್ ಭರಿತ ಆಹಾರ ಸೇವಿಸಿ ಆರೋಗ್ಯವಾಗಿರಿ
    21 hours ago
    Tip of the hair
    ಕೂದಲಿನ ತುದಿ ಕವಲೊಡೆಯುವುದನ್ನು ತಡೆಯಲು ಅಕ್ಕಿಯ ಜೊತೆ ಈ ಬೀಜವನ್ನು ಬೆರೆಸಿ ತಯಾರಿಸಿದ ಹೇರ್ ಟೋನರ್ ಬಳಸಿ
    2 days ago
    Lychee fruit
    ಖಾಲಿ ಹೊಟ್ಟೆಯಲ್ಲಿ ಲಿಚಿ ತಿಂದರೆ ಏನಾಗುತ್ತದೆ ಗೊತ್ತಾ?
    2 days ago
    kidney stone problems to eat banana
    ಕಿಡ್ನಿ ಕಲ್ಲಿನ ಸಮಸ್ಯೆ ಇರುವವರು ಬಾಳೆಹಣ್ಣು ತಿನ್ನುವುದು ಒಳ್ಳೆಯದೇ?
    3 days ago
Reading: ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ | ಸಿಎಂ ಡಿಕೆಶಿ ಗೌರವ ನಮನ

News Desk Chitradurga News
Last updated: 13 July 2026 18:33
News Desk Chitradurga News
10 hours ago
Share
ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ
ಸಕಲ ಸರ್ಕಾರಿ ಗೌರವದೊಂದಿಗೆ ಎಚ್.ಹನುಮಂತಪ್ಪ ಅಂತಿಮ ವಿದಾಯ
SHARE

CHITRADURGA NEWS | 13 JULY 2026

ಚಿತ್ರದುರ್ಗ: ಚಿತ್ರದುರ್ಗದಂತಹದ ಸದಾ ಬರಪೀಡಿತ ಒಣಭೂವಿಗೆ ನೀರುಣಿಸಬೇಕೆಂಬ ಹಂಬಲದೊಂದಿಗೆ ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಹೋರಾಡಿದ ನೀರಾವರಿ ಹೋರಾಟಗಾರ, ರಾಜ್ಯಸಭಾ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಮರಿಸಿದರು.

ಇದನ್ನೂ ಓದಿ: ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ

ನಗರದ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಸೋಮವಾರ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದ್ದ ರಾಜ್ಯಸಭಾ ಮಾಜಿ ಸಂಸದ ಹೆಚ್.ಹನುಮಂತಪ್ಪ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ, ಅಂತಿಮ ನಮನ ಸಲ್ಲಿಸಿದ ಬಳಿಕ ಅವರು ಮಾಧ್ಯಮದರೊಂದಿಗೆ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯ ಏಳಿಗೆಗೆ ಹನುಮಂತಪ್ಪ ಅವರ ಕೊಡುಗೆ ಅಪಾರ. ಜಿಲ್ಲೆಯ ಹಲವು ಪ್ರಮುಖ ಕೃಷಿ ಯೋಜನೆಗಳಿಗೆ, ಭದ್ರಾ ಮೇಲ್ದಂಡೆಯಂತಹ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ರೈತರ ಹಿತದೃಷ್ಟಿಯ ಹೋರಾಟಗಳಿಗೆ ಅವರು ಪ್ರಮುಖ ಶಕ್ತಿಯಾಗಿದ್ದರು. 

ಸಂಸತ್ತಿನಲ್ಲಿ ಮತ್ತು ಸರ್ಕಾರದ ಮಟ್ಟದಲ್ಲಿ ಸದಾ ಧ್ವನಿ ಎತ್ತುತ್ತಾ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದ ಭಗೀರಥ ಅವರು ಎಂದು ಗುಣಗಾನ ಮಾಡಿದರು.

1979-80 ರಿಂದಲೂ ನನಗೆ ಅವರ ಜೊತೆ ನಿಕಟವಾದ ಒಡನಾಟವಿತ್ತು. ಆಗ ನಾನು ವಿದ್ಯಾರ್ಥಿ ನಾಯಕನಾಗಿದ್ದೆ. ಆ ಸಂದರ್ಭದಲ್ಲಿ ನಾವು ಅವರ ಪಕ್ಕದ ಮನೆಯಲ್ಲೇ ವಾಸವಿದ್ದು, ಒಟ್ಟಿಗೆ ಬೆಳೆದವರು. ಅವರ ಜೊತೆಯಲ್ಲಿ ರಾಜಕಾರಣ ಮಾಡುತ್ತಾ ಬೆಳೆದ ನಮಗೆ ಅವರ ಸಾವು ವೈಯಕ್ತಿಕವಾಗಿಯೂ ತೀವ್ರ ನೋವು ತಂದಿದೆ ಎಂದು ಮುಖ್ಯಮಂತ್ರಿಗಳ ಹಳೆಯ ದಿನಗಳನ್ನು ನೆನಪಿಸಿಕೊಂಡರು.

ಇದನ್ನೂ ಓದಿ: ರಾಜ್ಯಸಭೆ ಮಾಜಿ ಸದಸ್ಯ ಎಚ್.ಹನುಮಂತಪ್ಪ ಇನ್ನಿಲ್ಲ

ಹೆಚ್. ಹನುಮಂತಪ್ಪ ಅವರು ರೈಲ್ವೆ ಕಮಿಷನ್ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಆ ನಂತರ ರಾಜ್ಯಸಭಾ ಸದಸ್ಯರಾಗಿ ಅತ್ಯಂತ ಯಶಸ್ವಿಯಾಗಿ ಕರ್ತವ್ಯ ನಿಭಾಯಿಸಿದರು. 

ಇಂದಿರಾ ಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾಗಾಂಧಿ ಅವರಿಗೂ ಅತ್ಯಂತ ಆಪ್ತರಾಗಿದ್ದುಕೊಂಡು, ರಾಷ್ಟ್ರಮಟ್ಟದಲ್ಲಿ ಮಾರ್ಗದರ್ಶಕರಾಗಿ ಗುರುತಿಸಿಕೊಂಡಿದ್ದರು. ಮೂರು ಬಾರಿ ರಾಜ್ಯಸಭೆಗೆ ಆಯ್ಕೆಯಾಗಿ ಅಪಾರ ಜನಸೇವೆ ಮಾಡಿದ್ದಾರೆ ಎಂದರು.

ಹನುಮಂತಪ್ಪ ಅವರು ಅತ್ಯಂತ ಸರಳ ಸಜ್ಜನಿಕೆಯ ಜೀವನ ನಡೆಸಿದವರು. ಎಸ್. ನಿಜಲಿಂಗಪ್ಪ ಅವರ ತತ್ವ ಆದರ್ಶಗಳನ್ನು ಮತ್ತು ತಮ್ಮದೇ ಆದ ವೈಚಾರಿಕ ನಿಲುವುಗಳನ್ನು ಗಟ್ಟಿಯಾಗಿ ಪ್ರತಿಪಾದಿಸುತ್ತಿದ್ದರು. ಜಿಲ್ಲೆಯಲ್ಲಿ ಪಕ್ಷಕ್ಕೆ ಭದ್ರ ಬುನಾದಿ ಹಾಕುವಲ್ಲಿ ಹಾಗೂ ಪಕ್ಷದ ಸ್ವಂತ ಕಚೇರಿ ನಿರ್ಮಾಣ ಮಾಡುವಲ್ಲಿ ಅವರ ಪಾತ್ರ ದೊಡ್ಡದಿದೆ. ಯಾರನ್ನೂ ವೈಯಕ್ತಿಕವಾಗಿ ಹಳಿಯದ ಅವರು, ಸದಾ ಪಕ್ಷದ ಕಾರ್ಯಕರ್ತರ ಏಳಿಗೆಗೆ ಚಿಂತಿಸುತ್ತಿದ್ದರು. 

ಸರ್ಕಾರದಿಂದ ಅವರಿಗೆ ಸಲ್ಲಬೇಕಾದ ಎಲ್ಲಾ ಸಕಲ ಗೌರವಗಳನ್ನು ಸಲ್ಲಿಸಲು ನಾವು ಬದ್ಧರಾಗಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ: ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ

ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ನಾವು ಬೆಂಗಳೂರು ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ಶೀಘ್ರದಲ್ಲೇ ಹಮ್ಮಿಕೊಳ್ಳಲಿದ್ದೇವೆ. ಈ ಬಗ್ಗೆ ಉಪ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ: 

ಪೊಲೀಸ್ ಇಲಾಖೆ ವತಿಯಿಂದ ಮೃತರ ಗೌರವಾರ್ಥ ಮೂರು ಸುತ್ತಿನ ಕುಶಾಲತೋಪು ಸಿಡಿಸುವ ಮೂಲಕ ಗೌರವ ವಂದನೆ ಸಲ್ಲಿಸಲಾಯಿತು. ಎರಡು ನಿಮಿಷದ ಮೌನಾಚರಣೆ ಆಚರಿಸಲಾಯಿತು. ದಿವಗಂತ ಹೆಚ್.ಹನುಮಂತಪ್ಪ ಅವರ ಪಾರ್ಥಿವ ಶರೀರದ ಮೇಲೆ ಹೊದಿಸಲಾದ ರಾಷ್ಟ್ರಧ್ವಜವನ್ನು ಪುತ್ರ ಜಿ.ಹೆಚ್.ಮೋಹನ್ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಸ್ತಾಂತರಿಸಿದರು. ನಂತರ ಜೋಗಿಮಟ್ಟಿಯ ಮುಕ್ತಿಧಾಮದಲ್ಲಿ ಮೃತರ ಅಂತ್ಯಕ್ರಿಯೆ ನಡೆಸಲಾಯಿತು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…

ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಂಸದ ಗೋವಿಂದ ಎಂ ಕಾರಜೋಳ, ಚಳ್ಳಕೆರೆ ಶಾಸಕ ಹಾಗೂ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಟಿ.ರಘಮೂರ್ತಿ, ಮೊಳಕಾಲ್ಮೂರು ಶಾಸಕ ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಮಗದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ರಾಜ್ಯ ದ್ರಾಕ್ಷಾ ಮಂಡಳಿ ಅಧ್ಯಕ್ಷ ಡಾ.ಯೋಗಿಶ್ ಬಾಬು, ಮಾಜಿ ಸಚಿವ ಹಾಗೂ ಮುಧೋಳ ಶಾಸಕ ಆರ್.ಬಿ.ತಿಮ್ಮಾಪುರ, ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಖ್ಯಾತ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ, ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಅಬ್ಬಯ್ಯ ಪ್ರಸಾದ್, ಮಾಯಕೊಂಡ ಶಾಸಕ ಬಸಂತಪ್ಪ, ವಿಧಾನ ಪರಿಷತ್ ಸದಸ್ಯ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಮಾಜಿ ಸಚಿವ ಹೆಚ್.ಆಂಜನೇಯ, ಮಾಜಿ ಸಂಸದ ಚಂದ್ರಪ್ಪ, ದಾವಣಗೆರೆ ಮಾಜಿ ಸಂಸದ ಜಿ.ಎಂ.ಸಿದ್ದೇಶ್, ಮೊಳಕಾಲ್ಮೂರು ತಾಲ್ಲೂಕು ಸಿದ್ದಯ್ಯನಕೋಟೆ ಮಠದ ಬಸವಲಿಂಗ ಸ್ವಾಮೀಜಿ, ಕಂಠೀರವ ಸ್ಟೋಡಿಯೋ ಅಧ್ಯಕ್ಷ ಮೆಹಬೂಬ್ ಪಾಷ, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್‍ಪೀರ್, ದಾವಣಗೆರೆ ಪೂರ್ವ ವಲಯ ಐಜಿಪಿ ರವಿಕಾಂತೇ ಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಡಾ.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೇರಿದಂತೆ ಜನಪತ್ರಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಹೆಚ್.ಹನುಮಂತಪ್ಪ ಅವರ ಅಂತಿಮ ದರ್ಶನ ಪಡೆದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCmDCMH. Hanumanthappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಿಸಿಎಂಸಿಎಂಹೆಚ್.ಹನುಮಂತಪ್ಪ
Share This Article
Facebook Email Print
Previous Article ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
Next Article ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
Leave a Comment

Leave a Reply Cancel reply

Your email address will not be published. Required fields are marked *

ರೋಟರಿ ಕ್ಲಬ್ ನಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭ.
ರೋಟರಿ ಕ್ಲಬ್ ಸೇವೆ, ಜಾಗತಿಕ ಶಾಂತಿ ಆಶಯವಾಗಿದೆ | ಡಾ.ತ್ರಿವಿಕ್ರಮ್ ಜೋಷಿ
ಮುಖ್ಯ ಸುದ್ದಿ
PM ವಿಶ್ವಕರ್ಮ ಯೋಜನೆ
PM ವಿಶ್ವಕರ್ಮ ಯೋಜನೆ | ಜುಲೈ 14 ರಿಂದ 24 ರವರೆಗೆ ಸಾಲ ಸಂಪರ್ಕ ಶಿಬಿರ
ಮುಖ್ಯ ಸುದ್ದಿ
ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
ಹೊಳಲ್ಕೆರೆ
ಮಾರುಕಟ್ಟೆ ಧಾರಣೆ | ಜುಲೈ 13 | ಮೆಕ್ಕೆಜೋಳ ರೇಟ್…
ಮಾರುಕಟ್ಟೆ ಧಾರಣೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up