
CHITRADURGA NEWS | 25 AUGUST 2026
ಚಿತ್ರದುರ್ಗ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ತುಮಕೂರು ವಲಯದ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಹಾಗೂ ತುಮಕೂರು ವಲಯ ಸಮಿತಿಯ ಪ್ರತಿನಿಧಿಯಾಗಿ ಭದ್ರಾ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಎಚ್.ರಾಜು ಅವರನ್ನು ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಗೋರಕ್ಷಕರ ಮೇಲಿನ ದಾಳಿ ಖಂಡಿಸಿ ವಿಹಿಂಪ ಪ್ರತಿಭಟನೆ
KSCA ತುಮಕೂರು ವಲಯದ ಕನ್ವೀನರ್ ಹಾಗೂ ಮ್ಯಾನೇಜಿಂಗ್ ಕಮಿಟಿ ಸದಸ್ಯ ಸಿ.ಆರ್.ಹರೀಶ್ ಅವರು ಆ.24ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳ ಸುಗಮ ನಿರ್ವಹಣೆ ಹಾಗೂ ಪರಿಣಾಮಕಾರಿ ಸಮನ್ವಯದ ದೃಷ್ಟಿಯಿಂದ ಈ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಭದ್ರಾ ಕ್ರಿಕೆಟ್ ಕ್ಲಬ್ ಅಧ್ಯಕ್ಷರಾಗಿ ಜಿಲ್ಲೆಯಲ್ಲಿ ಕ್ರಿಕೆಟ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಎಚ್.ರಾಜು ಅವರು KSCA, ತುಮಕೂರು ವಲಯ ಹಾಗೂ ಸಂಬಂಧಪಟ್ಟ ಕ್ರೀಡಾ ಸಂಘಟನೆಗಳು ಮತ್ತು ಮಧ್ಯಸ್ಥಗಾರರೊಂದಿಗೆ ಸಮನ್ವಯ ಸಾಧಿಸಿ ಜಿಲ್ಲೆಯಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಶ್ರಮಿಸಲಿದ್ದಾರೆ ಎಂದು ಆದೇಶದಲ್ಲಿ ವಿಶ್ವಾಸ ವ್ಯಕ್ತಪಡಿಸಲಾಗಿದೆ.
ಇದನ್ನೂ ಓದಿ: ಕುಡಿಯುವ ನೀರಿನ ಸಮಸ್ಯೆ ತಕ್ಷಣ ಪರಿಹರಿಸಿ | ಡಿಸಿ ಟಿ.ವೆಂಕಟೇಶ್
ಮುಂದಿನ ದಿನಗಳಲ್ಲಿ ತುಮಕೂರು ವಲಯ ಸಮಿತಿಯ ಸಭೆಗಳು ಹಾಗೂ ವಿವಿಧ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಅಗತ್ಯ ಸಹಕಾರ ನೀಡುವಂತೆ ಎಚ್.ರಾಜು ಅವರಿಗೆ ಸೂಚಿಸಲಾಗಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

