CHITRADURGA NEWS | 07 APRIL 2026
ಚಿತ್ರದುರ್ಗ: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ಜಿಲ್ಲಾ ವಲಯ (ಎಂಎಂಆರ್) ಯೋಜನೆಯಡಿ ಕೈಮಗ್ಗ ಉದ್ದಿಮೆಗಳಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 15 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಲಿಖಿತಾ ಆತ್ಮಹತ್ಯೆ ತನಿಖೆ ನಡೆಸಿ ನ್ಯಾಯ ಕೊಡಿಸಲು ಎಬಿವಿಪಿ ಒತ್ತಾಯ
ಈ ಯೋಜನೆಯಡಿ ನೇಕಾರರಿಗೆ ದುಡಿಯುವ ಬಂಡವಾಳ ಸಾಲ, ಅಧ್ಯಯನ ಪ್ರವಾಸ ಹಾಗೂ ಕೈಮಗ್ಗ ಮತ್ತು ಸಲಕರಣೆಗಳ ಖರೀದಿಗೆ ಸಹಾಯಧನ ಒದಗಿಸಲಾಗುತ್ತದೆ.
ಜಿಲ್ಲೆಯ ಅರ್ಹ ಕಾರ್ಯನಿರತ ಕೈಮಗ್ಗ ನೇಕಾರ ಸಹಕಾರ ಸಂಘದವರು ತಮ್ಮ ಬೇಡಿಕೆ ಅನುಸಾರ ಸಹಾಯಧನ ಮಂಜೂರಾತಿಗಾಗಿ ಸೂಕ್ತ ಪ್ರಸ್ತಾವನೆಗಳನ್ನು ಅಗತ್ಯ ದಾಖಲಾತಿಗಳೊಂದಿಗೆ 2026ರ ಏಪ್ರಿಲ್ 15 ರೊಳಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆ ಕಚೇರಿಗೆ ಸಲ್ಲಿಸಬೇಕು.
ಇದನ್ನೂ ಓದಿ: ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
ಹೆಚ್ಚಿನ ಮಾಹಿತಿಗಾಗಿ ಆಸಕ್ತರು ಕಚೇರಿಯ ದೂರವಾಣಿ ಸಂಖ್ಯೆ 08194-221426ಕ್ಕೆ ಸಂಪರ್ಕಿಸಬಹುದು ಅಥವಾ ಖುದ್ದಾಗಿ ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
