CHITRADURGA NEWS | 17 MAY 2026
ಚಿತ್ರದುರ್ಗ: 2026-27ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ಕಲಿಕೆಗಾಗಿ 39 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಇದನ್ನೂ ಓದಿ: ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀಧಿ
ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್‍ನ್ನು ಒಂದು ವಿಷಯವಾಗಿ ಅಭ್ಯಸಿ ಉತ್ತೀರ್ಣರಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23ರ ವಯೋಮಿತಿಯಲ್ಲಿರಬೇಕು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳು 15 ರಿಂದ 25ರ ವಯೋಮಿತಿಯಲ್ಲಿರಬೇಕು.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿ ಪ್ರಕಾರ ಪ್ರತಿ ವಿದ್ಯಾರ್ಥಿಗೆ, ಪ್ರತಿ ತಿಂಗಳು ರೂ.2,500 ರೂ ಶಿಷ್ಯವೇತನ ನೀಡಲಾಗುವುದು, ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು.
ಡಿಪ್ಲೋಮಾ ಕೋರ್ಸ್‍ಗಳು ಲಭ್ಯವಿರುವ ಸಂಸ್ಥೆಗಳು:
ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಗದಗ-ಬೆಟಗೇರಿ (ಕರ್ನಾಟಕ) 22 ಅಭ್ಯರ್ಥಿಗಳು, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ. ಸೇಲಂ (ತಮಿಳನಾಡು) 12, ಎಸ್.ಪಿ.ಕೆ.ಎಂ. ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ವೆಂಕಟಗಿರಿ (ನಲ್ಲೂರು ಜಿಲ್ಲೆ, ಆಂದ್ರಪ್ರದೇಶ) 03, ಭಾರತಿಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಕಣ್ಣೂರು (ಕೇರಳ) 02 ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದು.
ಇದನ್ನೂ ಓದಿ: ಮೇ.18 ರಿಂದ SSLC ಪರೀಕ್ಷೆ-2 | ಜಿಲ್ಲೆಯಲ್ಲಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ADC ಸೂಚನೆ
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಭಾಗ್ಯ ಕಾಂಪ್ಲೆಕ್ಸ್, ಬಿ.ಡಿ ರಸ್ತೆ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-221426ಗೆ ಸಂಪರ್ಕಿಸಿ ಪಡೆಯಬಹುದು.
ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಚಿತ್ರದುರ್ಗ ಕಚೇರಿಗೆ ಮೇ 27 ರ ಒಳಗಾಗಿ ಅಥವಾ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ 582102, (ದೂರವಾಣಿ ಸಂಖ್ಯೆ-08372-259664, ಮೊಬೈಲ್ ಸಂಖ್ಯೆ 9916143619 ಇವರ ಕಚೇರಿಗೆ ನೇರವಾಗಿ ಮೇ 30 ರೊಳಗೆ ಸಲ್ಲಿಸುವುದು ಎಂದು ಕೈಮಗ್ಗ ಮತ್ತು ಜವಳಿ ಉಪನಿರ್ದೇಶಕರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
