ಮುಖ್ಯ ಸುದ್ದಿ
BREAKING NEWS ಮಧುಗಿರಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಹನುಮಂತೇಗೌಡ ಆಯ್ಕೆ

CHITRADURGA NEWS | 14 JANUARY 2024
ಚಿತ್ರದುರ್ಗ: ಮಧುಗಿರಿ (ಸಂಘಟನಾತ್ಮಕ) ಜಿಲ್ಲೆಯ ಬಿಜೆಪಿ ಅಧ್ಯಕ್ಷರಾಗಿ ಬಿ.ಸಿ.ಹನುಮಂತೇಗೌಡ ಆಯ್ಕೆಯಾಗಿದ್ದಾರೆ.
ಚಿತ್ರದುರ್ಗ ಕಳೆದ ಅವಧಿಯಲ್ಲಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ಹನುಮಂತೇಗೌಡರಿಗೆ ಮಧುಗಿರಿ ಜಿಲ್ಲೆಯ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಂಕ್ರಾಂತಿ ಹಬ್ಬದ ದಿನವೇ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಿ ಪಟ್ಟಿ ಹೊರಬಿಟ್ಟಿದ್ದಾರೆ.
ಚಿತ್ರದುರ್ಗದ ಎಸ್‍ಜೆಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇಂಜಿನಿಯರಿಂಗ್ ಪದವಿ ಪೂರೈಸಿ, ಇದೇ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲ ವರ್ಷ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದರು.

ಇದನ್ನೂ ಓದಿ: ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎ.ಮುರುಳಿ ಪುನರಾಯ್ಕೆ
ವಿದ್ಯಾರ್ಥಿ ದೆಸೆಯಲ್ಲಿ ಎಬಿವಿಪಿ ಸಂಪರ್ಕಕ್ಕೆ ಬಂದ ಹನುಮಂತೇಗೌಡ ಆನಂತರ ಭಾಜಪ ಸೇರಿ ಹಲವು ಚುನಾವಣೆಗಳಲ್ಲಿ ಸಕ್ರೀಯರಾಗಿ ಕೆಲಸ ಮಾಡಿದ್ದರು.
ಕಳೆದ ವಿಧಾನಸಭೆ ಚುನಾವಣೆಗೆ ಹನುಮಂತೇಗೌಡರಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೇಟ್ ಸಿಗಲಿದೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಕೊನೆ ಕ್ಷಣದಲ್ಲಿ ಬೇರೆಯವರಿಗೆ ಕೊಡಲಾಗಿತ್ತು.
ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಆಗಿದ್ದ ಹನುಮಂತೇ ಗೌಡರಿಗೆ ಪಕ್ಷದ ಹಿರಿಯರು ಬೇರೆ ಬೇರೆ ಲೆಕ್ಕಾಚಾರ ಹಾಕಿ ಮಧುಗಿರಿ ಜಿಲ್ಲೆಯ ಜವಾಬ್ದಾರಿ ನೀಡಿದ್ದಾರೆ.
