CHITRADURGA NEWS | 13 SEPTEMBER 2026
ಚಿತ್ರದುರ್ಗ: ಬಯಲು ಸೀಮೆಯಲ್ಲಿ ಜಲಕ್ರಾಂತಿಗೆ ಮುನ್ನುಡಿ ಬರೆಯಲಾಗಿದೆ. ಜಿಲ್ಲೆಯಲ್ಲಿ ಭದ್ರೆ ಸಂಭ್ರಮ ಮನೆ ಮಾಡಿದ್ದು, ಈ ಸಡಗರ, ಸಂತಸಕ್ಕೆ ಸಾವಿರಾರು ಜನರು ಅನೇಕ ದಶಕಗಳ ವೈಯಕ್ತಿಕ ಬದುಕು ನಿರ್ಲಕ್ಷಿಸಿ ನಿರಂತರ ಹೋರಾಟ ನಡೆಸಿದ ಫಲ ಆಗಿದೆ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ
ಭೋವಿ ಗುರುಪೀಠದ ವತಿಯಿಂದ ಗೋನೂರು ಬಳಿ ಭಾನುವಾರ ಆಯೋಜಿಸಿದ್ದ ಲಕ್ಷ ಮಂದಿಗೆ ಸಿಹಿ ಹಂಚಿಕೆಗೆ ಚಾಲನೆ ನೀಡಿ ಮಾತನಾಡಿದರು.
ಭದ್ರೆ ನೀರು ಹರಿಯುವ ಮೂಲಕ ಜಲಕ್ರಾಂತಿಗೆ ಮುನ್ನುಡಿ ಬರೆಯಲಾಗಿದ್ದು, ಈ ಮೂಲಕ ಆರ್ಥಿಕ, ಸಾಮಾಜಿಕ ಸ್ಥಾನಮಾನ ಲಭಿಸುವ ಜೊತೆಗೆ ಜಿಲ್ಲೆಯಲ್ಲಿ ಸರ್ವಾಂಗೀಣ ಅಭಿವೃದ್ಧಿಯ ಹೊಳೆ ಹರಿಯಲಿದೆ ಎಂದರು.
ನೀರು ಹರಿಯುವ ದೃಶ್ಯ ಜಿಲ್ಲೆಯ ಜನರಲ್ಲಿ ಸಿಹಿ ವಾತಾವರಣಕ್ಕೆ ಕಾರಣವಾಗಿದೆ. ಈ ಸಿಹಿ ಹಿಂದೆ ಅನೇಕ ಕಹಿ ಘಟನೆಗಳು ನಡೆದಿವೆ. ಹೋರಾಟದ ಹಾದಿಯಲ್ಲಿ ಅನೇಕ ಮಹನೀಯರು ನಮ್ಮನ್ನು ಅಗಲಿದ್ದು, ಭದ್ರೆ ನೀರು ಹರಿಯುವ ದೃಶ್ಯ ಕಣ್ತುಂಬಿಕೊಳ್ಳುವ ಭಾಗ್ಯದಿಂದ ವಂಚಿತರಾಗಿದ್ದಾರೆ. ಇನ್ನಷ್ಟು ಮಂದಿ ನಮ್ಮೊಂದಿಗೆ ಜೀವಂತವಾಗಿದ್ದಾರೆ. ಅವರೆಲರನ್ನೂ ನಮ್ಮ ಉಸಿರು-ಹಸಿರಿನಲ್ಲಿ ಸ್ಮರಿಸುವ ಕೆಲಸ ಆಗಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ವಿಶ್ವಮಾನವ ವಸತಿ ಶಾಲೆಗೆ ಚಾಂಪಿಯನ್ ಪಟ್ಟ
ಭದ್ರೆ ಜಾರಿಗಾಗಿ ಬದುಕು, ಪ್ರಾಣ, ವಯಸ್ಸು ಸಮರ್ಪಿಸಿದ ಹೋರಾಟಗಾರರು, ಪತ್ರಕರ್ತರನ್ನು ಸ್ಮರಿಸುವ ಹಿನ್ನೆಲೆಯಲ್ಲಿ ಸಿಹಿ ಹಂಚಿಕೆ ಮೂಲಕ ಭೋವಿ ಮಠ ಸಣ್ಣ ಪ್ರಯತ್ನ ಮಾಡುತ್ತಿದೆ. ಸಿಹಿ ಸವಿದ ಪ್ರತಿ ವ್ಯಕ್ತಿ ಭದ್ರೆ ನೀರಿನ ಹಿಂದೆ ಅಡಗಿರುವ ಚಳವಳಿಗಾರರ ತ್ಯಾಗ ಅರಿಯಬೇಕು. ಆಗ ಮಾತ್ರ ನಮ್ಮಗಳ ಬದುಕು ಸಾರ್ಥಕವಾಗಲಿದೆ ಎಂದರು.
ಒಂದೂವರೆ ಸಾವಿರ ಅಡಿ ಕೊಳವೆಬಾವಿ ಕೊರೆಯಿಸಿ ಕೃಷಿ ಚಟುವಟಿಕೆ ಕೈಗೊಳ್ಳುವ, ಫ್ಲೋರೈಡ್ ನೀರು ಸೇವೆಸಿ ಚಿಕ್ಕ ವಯಸ್ಸಿನಲ್ಲಿಯೇ ಮೂಳೆ ರೋಗಕ್ಕೆ ತುತ್ತಾಗಿದ್ದು, ನೂರಾರು ವರ್ಷಗಳ ಕಾಲ ಬರಗಾಲ ಉಂಡು, ಮಳೆ ನಂಬಿ ಬೆಳೆ ಇಟ್ಟು ಕೈಸುಟ್ಟುಗೊಂಡು ಕಣ್ಣೀರಧಾರೆಯಲ್ಲಿಯೇ ಕೃಷಿ ಬದುಕು ನಡೆಸಿದ ಅನ್ನದಾತರ ಕಹಿ ಘಟನೆಗಳ ಕಥಾನಕದ ನೆನಪು ಇರಬೇಕು. ಆಗ ಮಾತ್ರ ನೀರನ್ನು ಸದ್ಬಳಕೆ ಮಾಡಿಕೊಂಡು ಬದುಕು ಹಸನುಗೊಳಿಸಿಕೊಳ್ಳಲು ಸಾಧ್ಯ ಎಂದರು.
ಬಯಲುಸೀಮೆ ಪ್ರದೇಶದ ಜನರ ಪಾಲಿಗೆ ಮುಂಗಾರು ಮುಗಿಲಲ್ಲಿ ಉಳಿಯುತ್ತಿತ್ತು. ಹಿಂಗಾರು ಕೈಹಿಡಿದರೆ ಬದುಕೆಂಬ ಸ್ಥಿತಿ ಸಾಮಾನ್ಯವಾಗಿತ್ತು. ಈ ಕಾರಣಕ್ಕೆ ಇಲ್ಲಿನ ಕೃಷಿಕರು ಇಬ್ಬನಿ ನಂಬಿ ಕಡ್ಲೆ, ಈರುಳ್ಳಿ ಅಂತಹ ಬೆಳೆ ಬೆಳೆಯುವ ಬುದ್ಧಿವಂತಿಕೆ ಹೊಂದಿದ್ದರು. ಈಗ ನೀರು ಯಥೆಚ್ಚವಾಗಿ ಹರಿಯುತ್ತಿದೆ. ಈ ಸಂದರ್ಭ ಅನ್ನದಾತರು ನೀರನ್ನು ಮಿತ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ಇದನ್ನೂ ಓದಿ: ಹಿರಿಯೂರಿನಲ್ಲಿ ಸಮುದಾಯ ಭವನ, ವಸತಿ ಶಾಲೆಗಳ ಅಭಿವೃದ್ಧಿಗೆ ಆದ್ಯತೆ | ಸಚಿವ ಕೆ.ಹೆಚ್.ಮುನಿಯಪ್ಪ
ಮಠದ ಸಿಇಒ ಗೌನಹಳ್ಳಿ ಗೋವಿಂದಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಮಹಾಲಿಂಗ ಸ್ವಾಮೀಜಿ, ಶ್ರೀ ಸಿದ್ಧಬಸವ ಕಬೀರಾ ಸ್ವಾಮೀಜಿ, ಶ್ರೀ ಕುಂಬಾರ ಗುಂಡಯ್ಯ ಸ್ವಾಮೀಜಿ, ಶ್ರೀ ಬಸವ ಭೃಂಗೇಶ ಸ್ವಾಮೀಜಿ, ಶ್ರೀ ತಿಪ್ಪೇರುದ್ರ ಸ್ವಾಮೀಜಿ ಸಮ್ಮುಖ ವಹಿಸಿದ್ದರು.
ಸಿಹಿ ವಿತರಣೆ ದಾಸೋಹಿಗಳಾದ ಗೋಡೆಮನೆ ಹನುಮಂತಪ್ಪ, ತಾಪಂ ಇಒ ವೈ.ರವಿಕುಮಾರ್, ಮಾಜಿ ಸದಸ್ಯ ಎಚ್.ಆಂಜನೇಯ, ನಗರಸಭೆ ಮಾಜಿ ಸದಸ್ಯ ಈ.ಮಂಜುನಾಥ್, ಗ್ರಾಪಂ ಮಾಜಿ ಅಧ್ಯಕ್ಷ ನಿರಂಜನ್, ಎಚ್.ಲಕ್ಷ್ಮಣ್, ಜಿಲ್ಲಾ ನೀರಾವರಿ ಹೋರಾಟ ಸಮಿತಿ ಸಂಚಾಲಕ ಜೋಗಿಮಟ್ಟಿ ಈ.ಮಹೇಶಬಾಬು, ಪ್ರಹ್ಲಾದ್, ಪತ್ರಕರ್ತ ಸಂಘದ ರಾಜ್ಯ ಸಮಿತಿ ಸದಸ್ಯ ಸಿದ್ದರಾಜು, ನಿರ್ದೇಶಕ ಕೋಗುಂಡೆ ಮಠ, ಟಿ.ಎಂ.ಪ್ರದೀಪ್‌ಕುಮಾರ್, ಫಣಿಯಪ್ಪ, ಕೆಪಿಎಂ ಗಣೇಶಯ್ಯ, ಆನಂದ್, ಇಂಜಿನಿಯರ್ ಗಂಗೇಶ್ ಇತರರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

