By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Independence Day; ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ 
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Independence Day; ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ 

ಮುಖ್ಯ ಸುದ್ದಿ

Independence Day; ಸ್ವಾತಂತ್ರ್ಯೊತ್ಸವ | ಹರ್ ಘರ್ ತಿರಂಗಾ ಅಭಿಯಾನ 

News Desk Chitradurga News
Last updated: 12 August 2024 18:55
News Desk Chitradurga News
11 months ago
Share
SHARE
https://chat.whatsapp.com/Jhg5KALiCFpDwME3sTUl7x

CHITRADURGA  NEWS | 12 AUGUST 2024 

Contents
ಕ್ಲಿಕ್ ಮಾಡಿ ಓದಿ: Manjunath: ಜಿಲ್ಲಾ ಆಸ್ಪತ್ರೆ ಸಿ.ಟಿ.ಸ್ಕ್ಯಾನ್ ಟೆಕ್ನಿಶಿಯನ್ ಮಂಜುನಾಥ್ ಇನ್ನಿಲ್ಲಕ್ಲಿಕ್ ಮಾಡಿ ಓದಿ: Sirigere Matha: ಸಿರಿಗೆರೆ ಮಠದ ಟ್ರಸ್ಟ್ ಸಲಹಾ ಸಮಿತಿ ಪಟ್ಟಿ ಬಹಿರಂಗ | 20 ವರ್ಷಗಳ ಹಿಂದಿನ ದಾಖಲೆ ಮಠದ ವೆಬ್‍ಸೈಟ್‍ನಲ್ಲಿ ಪ್ರಕಟಬೈಕ್ ರ್ಯಾಲಿ ಹಾಗೂ ದೇಶಭಕ್ತಿ ಗೀತೆಗಳ ಗಾಯನ:ಕ್ಲಿಕ್ ಮಾಡಿ ಓದಿ: VV Sagara Inflow: ವಿವಿ ಸಾಗರಕ್ಕೆ ಈವರೆಗೆ ಬಂದ ನೀರೆಷ್ಟು | ಎಷ್ಟಿದೆ ಜಲಾಶಯದ ನೀರಿನ ಮಟ್ಟ

ಚಿತ್ರದುರ್ಗ: 78ನೇ ಸ್ವಾತಂತ್ರ್ಯೊತ್ಸವ “Independence Day” ಹಿನ್ನಲೆಯಲ್ಲಿ ಆ.13 ರಿಂದ 15 ವರೆಗೆ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕ್ಲಿಕ್ ಮಾಡಿ ಓದಿ: Manjunath: ಜಿಲ್ಲಾ ಆಸ್ಪತ್ರೆ ಸಿ.ಟಿ.ಸ್ಕ್ಯಾನ್ ಟೆಕ್ನಿಶಿಯನ್ ಮಂಜುನಾಥ್ ಇನ್ನಿಲ್ಲ

ಹರ್ ಘರ್ ತಿರಂಗಾ ಅಭಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು.

ಈ ಮೂರು ದಿನಗಳ ಕಾಲ ಜಿಲ್ಲೆಯ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮ ಮೆರೆಯಬೇಕು ಎಂದು ಮನವಿ ಮಾಡಿದ್ದಾರೆ.

ಹರ್ ಘರ್ ತಿರಂಗಾ ಅಭಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ 
ಹರ್ ಘರ್ ತಿರಂಗಾ ಅಭಿಯಾನ ಕುರಿತು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ

ಭಾರತದ ತ್ರಿವರ್ಣ ಧ್ವಜ ನಮ್ಮೆಲ್ಲರ ಅಸ್ಮಿತೆಯ ಪ್ರತೀಕ. ಇದಕ್ಕೆ ಚ್ಯುತಿ ಬಾರದ ಹಾಗೆ ಪ್ರತಿಯೊಬ್ಬರು ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಿ, ಅದರ ಸೆಲ್ಫೀ ಫೋಟೋವನ್ನು ವೆಬ್‍ಸೈಟ್ hargartiranga.com ನಲ್ಲಿ ಅಪ್‍ಲೋಡ್ ಮಾಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ತಿಳಿಸಿದರು.

ಆಗಸ್ಟ್ 13 ರಿಂದ 15 ರವರೆಗೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ, ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಸರ್ಕಾರಿ ಕಚೇರಿ, ನ್ಯಾಯಬೆಲೆ ಅಂಗಡಿ, ಸಂಘ-ಸಂಸ್ಥೆಗಳು, ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಿಸಬೇಕು. ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ ಬಾವುಟಕ್ಕೆ ಅಗೌರವ ತೋರಬಾರದು. ಕಡ್ಡಾಯವಾಗಿ ಧ್ವಜ ಸಂಹಿತೆಯನ್ನು ಪಾಲಿಸಬೇಕು.

ಕ್ಲಿಕ್ ಮಾಡಿ ಓದಿ: Sirigere Matha: ಸಿರಿಗೆರೆ ಮಠದ ಟ್ರಸ್ಟ್ ಸಲಹಾ ಸಮಿತಿ ಪಟ್ಟಿ ಬಹಿರಂಗ | 20 ವರ್ಷಗಳ ಹಿಂದಿನ ದಾಖಲೆ ಮಠದ ವೆಬ್‍ಸೈಟ್‍ನಲ್ಲಿ ಪ್ರಕಟ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸಬೇಕು. ಧ್ಜಜ ಸಂಹಿತೆಯಂತೆ ಪ್ರತಿದಿನ ಸಂಜೆ ಸೂರ್ಯಾಸ್ತದ ಮೊದಲು ಧ್ವಜವನ್ನು ಇಳಿಸಬೇಕು. ಈ ಮೂಲಕ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಬೈಕ್ ರ್ಯಾಲಿ ಹಾಗೂ ದೇಶಭಕ್ತಿ ಗೀತೆಗಳ ಗಾಯನ:

ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಸ್ಥಳೀಯ ಸಂಸ್ಥೆಗಳು, ನಗರಸಭೆ, ಕ್ರೀಡಾ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಯೋಗದೊಂದಿಗೆ ಆಗಸ್ಟ್ 13 ರಂದು ಬೈಕ್ ರ್ಯಾಲಿ ಆಯೋಜಿಸಬೇಕು. ಆಗಸ್ಟ್ 14 ರಂದು ಬೆಳಿಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಿರಂಗಾ ಯಾತ್ರೆ ಕೈಗೊಳ್ಳಬೇಕು.

ಶಾಲಾ ಕಾಲೇಜುಗಳಲ್ಲಿ ಸ್ವಾತಂತ್ರ್ಯ ಹೋರಾಟದ ಮಹತ್ವ ಸಾರಲು ಚಿತ್ರಕಲೆ, ದೇಶ ಭಕ್ತಿ ಗೀತೆ, ಆಶುಭಾಷಣ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು. ಆಗಸ್ಟ್ 14 ರಂದು ಸಂಜೆ 5:30ಕ್ಕೆ ನಗರದ ಒನಕೆ ಓಬವ್ವ ವೃತ್ತದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರ ಸಭೆ ವತಿಯಿಂದ ದೇಶಭಕ್ತಿ ಗೀತೆಗಳ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದೆ.

ಜಿಲ್ಲಾ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ಕಚೇರಿಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ನಿರ್ದೇಶನ ನೀಡಿದರು.

ಕ್ಲಿಕ್ ಮಾಡಿ ಓದಿ: VV Sagara Inflow: ವಿವಿ ಸಾಗರಕ್ಕೆ ಈವರೆಗೆ ಬಂದ ನೀರೆಷ್ಟು | ಎಷ್ಟಿದೆ ಜಲಾಶಯದ ನೀರಿನ ಮಟ್ಟ

ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ 5000 ರಾಷ್ಟ್ರಧ್ವಜಗಳು ಲಭ್ಯವಿದ್ದು, ಪ್ರತಿ ರಾಷ್ಟ್ರಧ್ವಜಕ್ಕೆ ರೂ.26 ದರ ನಿಗದಿಪಡಿಸಲಾಗಿದೆ. ಧ್ವಜ ಬೇಕಾದವರು ಖರೀದಿಸಬಹುದು. ಎಲ್ಲರಿಗೂ ಸುಲಭವಾಗಿ ಲಭ್ಯವಾಗುವ ರೀತಿಯ ಪ್ರತಿ ಅಂಚೆ ಕಚೇರಿ ಹಾಗೂ ರೈಲ್ವೇ ನಿಲ್ದಾಣಗಳಲ್ಲಿಯೂ ರಾಷ್ಟ್ರಧ್ವಜ ಮಾರಾಟ ಮಾಡಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ಮಾಹಿತಿ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿ.ಪಂ. ಉಪಕಾರ್ಯದರ್ಶಿ ತಿಮ್ಮಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಸುಬ್ರಾನಾಯ್ಕ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:CampaignChitradurgaChitradurga newsHar Ghar TirangaIndependence DayKannada Latest Newsಅಭಿಯಾನಕನ್ನಡ ಲೇಟೆಸ್ಟ್ ನ್ಯೂಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಸ್ವಾತಂತ್ರ್ಯೊತ್ಸವಹರ್ ಘರ್ ತಿರಂಗಾ
Share This Article
Facebook Email Print
Previous Article NPEP competition NPEP competition: ಶಾಲೆಗಳಲ್ಲಿ ಎನ್‌ಪಿಇಪಿ ಸಹಪಠ್ಯ ಸ್ಪರ್ಧೆ | ಪೋಸ್ಟರ್‌ ಅನಾವರಣ
Next Article GOVT EMPLYESS Government employees: ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗೆ ಸನ್ಮಾನ | ದಿನಾಂಕ ಘೋಷಿಸಿದ ಸಿ.ಎಸ್‌.ಷಡಾಕ್ಷರಿ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up