
CHITRADURGA NEWS | 01 January 2025
ಚಿತ್ರದುರ್ಗ: ಜನವರಿ 15 ರಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಹರಜಾತ್ರೆ ನಡೆಸಲು ನಿರ್ಧರಿಸಲಾಗಿದೆ ಎಂದು ಹರಿಹರ ಪಂಚಮಸಾಲಿ ಗುರುಪೀಠದ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ತಿಳಿಸಿದರು.
ಇದನ್ನೂ ಓದಿ: ಅಡಿಕೆ ಧಾರಣೆ | 2025ರ ಕೊನೆಯ ಅಡಿಕೆ ರೇಟ್

ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ 2026ನೇ ವರ್ಷದ ಜ.15 ರಂದು ನಡೆಯುವ ಹರ ಜಾತ್ರೆ ಪ್ರಚಾರ ಪರಿಕರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು,
ಶ್ರೀಗಳು ಸೂರ್ಯ ಪಥ ಬದಲಿಸುವ ಮಕರ ಸಂಕ್ರಾಂತಿಯ ಜನವರಿ 15 ರ ಹರಜಾತ್ರೆ, ಕಿತ್ತೂರು ರಾಣಿ ಚನ್ನಮ್ಮಾಜೀ ದ್ವಿಶತಮಾನ ವಿಜಯೋತ್ಸವ ಸಮಾರೋಪ ಸಮಾರಂಭ ಹಾಗೂ ಶ್ರೀ ಡಾ.ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 13ನೇ ವರ್ಷದ ಪುಣ್ಯ ಸ್ಮರಣೋತ್ಸವ ಹಾಗೂ ಯೋಗಸಿಂಹಾ ಸನಾಧೀಶ್ವರ, ಹರಪೀಠಾಧ್ಯಕ್ಷ, ಪಂಚಮಸಾಲಿ ಜಗದ್ಗುರು ಶ್ರೀಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳವರ ಅಷ್ಟಮ ವಾರ್ಷಿಕ ಪೀಠಾರೋಹಣ ಸಮಾರಂಭ ಅಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಕಿತ್ತೂರು ರಾಜ್ಯವನ್ನಾಳಿದ ವೀರ ರಾಣಿ-ಕಿತ್ತೂರು ಚನ್ನಮ್ಮಾಜಿ ಅವರ ದ್ವಿ ಶತಮಾನೋತ್ಸವ ಸಂಭ್ರಮಾಚರಣೆಯ ಸವಿ ನೆನಪಿಗಾಗಿ, ಅವರ ಹೆಸರಿನಲ್ಲಿ 200 ರೂ ಮುಖ ಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರಿಂದ, ಗೌರವಿಸಿರುವ ಕೇಂದ್ರ ಸರ್ಕಾರ ಕಳೆದ ವರ್ಷ ಸಂಸತ್ ಭವನದಲ್ಲಿ 200 ರೂ ಮುಖ ಬೆಲೆಯ ನಾಣ್ಯವನ್ನು ಬಿಡುಗಡೆಗೊಳಿಸಿದ್ದು ಸಂತಸದ ವಿಷಯವಾಗಿದೆ ಎಂದರು.
ಇದನ್ನೂ ಓದಿ: ಮಕ್ಕಳಿಗೆ ಅರೆಹೊಟ್ಟೆ ಊಟ | ಆಹಾರ ಆಯೋಗ ತೀವ್ರ ಆಕ್ಷೇಪ
ಈ ವರ್ಷದ ಹರ ಜಾತ್ರೆಯ ನಿಮಿತ್ತ ಸಮಾಜದ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಮಹನೀಯ ಸಾಧಕರನ್ನು ಗುರುತಿಸಿ, ಅವರುಗಳಿಗೆ ವೀರ ರಾಣಿ ಕಿತ್ತೂರು ಚನ್ನಮ್ಮಾಜಿ ಹೆಸರಿನಲ್ಲಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ.
2026ನೇ ವರ್ಷದ ಹರ ಜಾತ್ರೆಯ ಅಧ್ಯಕ್ಷರಾದ ಹಾವೇರಿಯ ವೈದ್ಯ ಡಾ.ಬಸವರಾಜ ವೀರಾಪುರ ಅವರು ಮಾತನಾಡಿ, ಕಿತ್ತೂರು ರಾಣಿ ಚನ್ನಮ್ಮಾಜೀ ದ್ವಿಶತಮಾನೋತ್ಸವದ ವಿಜಯೋತ್ಸವ ಸಮಾರೋಪ ಸಮಾರಂಭ ಹಾಗೂ ಲಿಂ.ಡಾ.ಮಹಾಂತ ಶಿವಾಚಾರ್ಯ ಮಹಾಸ್ವಾಮಿಗಳವರ 13ನೇ ವರ್ಷದ ಪುಣ್ಯ ಸ್ಮರಣೋತ್ಸವ, ಪೀಠಾಧೀಶ್ವರರಾದ ಯೋಗ ಸಿಂಹಾಸನಾಧೀಶ್ವರ, ವಚನಾನಂದ ಶ್ರೀಗಳ ಅಷ್ಟಮ ವಾರ್ಷಿಕ ಪೀಠಾರೋಹಣ ಸಮಾರಂಭವನ್ನು ಅದ್ದೂರಿಯಾಗಿ ನಡೆಸಲು ಸಕಲ ಸಿದ್ದತೆಗಳನ್ನು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ಇದನ್ನೂ ಓದಿ: ಚಿತ್ರದುರ್ಗ – ಚಿಕ್ಕಜಾಜೂರು ರೈಲು ಸೇವೆ ಭಾಗಶಃ ರದ್ದು | ಕಾರಣ ಏನು ಗೊತ್ತಾ ?
ಸುದ್ದಿಗೋಷ್ಠಿಯಲ್ಲಿ ರಾಜ್ಯಾಧ್ಯಕ್ಷರಾದ ಸೋಮನಗೌಡ ಪಾಟೀಲರು, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ, ಜಿಲ್ಲಾ ಘಟಕ ಜಿಲ್ಲಾಧ್ಯಕ್ಷ ಜೆ.ಶಿವಪ್ರಕಾಶ, ವೀರಶೈವ ಸಮಾಜದ ಅಧ್ಯಕ್ಷ ತಿಪ್ಪೇಸ್ವಾಮಿ, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಮಹಡಿ ಶಿವಮೂರ್ತಿ, ಆಶಾ ಕಲ್ಲಪ್ಪ, ಶಿವನಂದಗೌಡ ಪಾಟೀಲ್, ಬಸವರಾಜು, ಮಹಾದೇವ್, ಶಿವಕುಮಾರ್ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳ ಅಧ್ಯಕ್ಷರು ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
