ಮುಖ್ಯ ಸುದ್ದಿ
PWD ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಎ.ಹಸೇನ್ ನೇಮಕ

CHITRADURGA NEWS | 27 JANUARY 2025
ಚಿತ್ರದುರ್ಗ: ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘ ಚಿತ್ರದುರ್ಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಚಿತ್ರದುರ್ಗ ಲೋಕೋಪಯೋಗಿ ವಿಭಾಗದ ಪ್ರಥಮ ದರ್ಜೆ ಸಹಾಯಕ ಎ.ಹಸೇನ್ ಹಾಗೂ ಕಾರ್ಯದರ್ಶಿಯಾಗಿ ದ್ವಿತೀಯ ದರ್ಜೆ ಸಹಾಯಕ ಆರ್.ರಾಜೇಶ್ ಅವರನ್ನು ನೇಮಕ ಮಾಡಲಾಗಿದೆ.
Also Read: ಚಿತ್ರದುರ್ಗ, ಹೊಳಲ್ಕೆರೆ ತಾಲೂಕಿನಲ್ಲಿ ನಾಳೆ ಕರೆಂಟ್ ಇರಲ್ಲ
ಕರ್ನಾಟಕ ರಾಜ್ಯ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಾ.ಎ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಅಧಿಕಾರಿ, ನೌಕರರ ಸಭೆಯಲ್ಲಿ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಶ್ರೀನಿವಾಸ್ಗ, ಖಜಾಂಚಿ ಎಸ್.ವಿ.ಶ್ರೀನಿವಾಸ್, ಉಪಾಧ್ಯಕ್ಷರಾದ ಸಿ.ಎಸ್.ಸುಮಾ ಹಾಗೂ ಲೋಕೋಪಯೋಗಿ ಇಲಾಖೆ ಚಿತ್ರದುರ್ಗ ವಿಭಾಗ ಮತ್ತು ಉಪವಿಭಾಗಗಳ ವ್ಯಾಪ್ತಿಯ ಅಧಿಕಾರಿ, ಸಿಬ್ಬಂದಿ ವರ್ಗದವರು ಇದ್ದರು.
Also Read: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
