ಮುಖ್ಯ ಸುದ್ದಿ
ಮುಖ್ಯಮಂತ್ರಿ ಸಿದ್ದರಾಮಯ್ಯ ವಜಾ ಮಾಡಲು ಎಚ್‍ಡಿಕೆ ಆಗ್ರಹ | ರಾಷ್ಟ್ರಪತಿ ದ್ರೌಪದಿ ಮುರ್ಮು ಬಗ್ಗೆ ಏಕವಚನ ಬಳಕೆ

CHITRADURGA NEWS | 28 JANUARY 2024
ಚಿತ್ರದುರ್ಗ: ತಮ್ಮ ಭಾಷಣದ ಓಘದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಏಕವಚನ ಬಳಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಜಾಗೃತಿ ಸಮಾವೇಶದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯುವಾಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹೆಸರನ್ನು ಬಳಕೆ ಮಾಡಿಕೊಂಡರು. ಈ ವೇಳೆ ಏಕವಚನದಲ್ಲಿ ಸಂಬೋಧಿಸಿದ ವೀಡಿಯೋ ಈಗ ವೈರಲ್ ಆಗಿದೆ.

ಇದನ್ನೂ ಓದಿ: ದಿವ್ಯಪ್ರಭು ಜಿ.ಆರ್.ಜೆ ಧಾರವಾಡ ಜಿಲ್ಲಾಧಿಕಾರಿ
ಸಂವಿಧಾನದ ಮುಖ್ಯಸ್ಥರಾಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಬಿಜೆಪಿಯವರು ನೂತನ ಸಂಸತ್ ಭವನದ ಉದ್ಘಾಟನೆಗೆ ಆಹ್ವಾನ ಮಾಡಲಿಲ್ಲ. ಅಯೋಧ್ಯೆಯ ಶ್ರೀರಾಮ ದೇವಸ್ಥಾನದ ಉದ್ಘಾಟನೆಗೂ ಆಹ್ವಾನ ಮಾಡಲಿಲ್ಲ ಎಂದು ಹೇಳಿದರು.

ಈ ವೇಳೆ ದ್ರೌಪದಿ ಮುರ್ಮು ಅವರನ್ನು ಎನ್ನುವ ಜಾಗದಲ್ಲಿ ಏಕವಚನ ಬಳಕೆ ಮಾಡಿದ ವಿಡಿಯೋ ಅನ್ನು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ತಮ್ಮ ಎಕ್ಸ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ.
