
CHITRAUDRGA NEWS | 10 APRIL 2026
ಚಿತ್ರದುರ್ಗ: ಬಂದಿನಿವಾಸಿಗಳು ತಮ್ಮ ಆರೋಗ್ಯ ಸಮಸ್ಯೆಗಳನ್ನು ಮರೆಮಾಚದೆ ಸಂಬಂಧಿಸಿದ ತಜ್ಞ ವೈದ್ಯರಿಂದ ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಸೂಕ್ತ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ದರಾಮ ಪಾಟೀಲ್ ತಿಳಿಸಿದರು.
ಇದನ್ನೂ ಓದಿ: ಏ.15 ರವರೆಗೆ ಆನ್‍ಲೈನ್ ಮೂಲಕ ಸ್ವಯಂ ಗಣತಿಗೆ ಅವಕಾಶ | ಜಿಲ್ಲಾಧಿಕಾರಿ
ನಗರದ ಜಿಲ್ಲಾ ಕಾರಾಗೃಹದಲ್ಲಿ ಆರೋಗ್ಯ ಇಲಾಖೆ ಹಾಗೂ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ವತಿಯಿಂದ ಬಂದಿನಿವಾಸಿಗಳಿಗಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ. ಬಿ.ವಿ. ಗಿರೀಶ್ ಮಾತನಾಡಿ, ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕವಾಗಿ ಸದೃಢವಾಗಿರುವುದೇ ನೈಜ ಆರೋಗ್ಯವಾಗಿದೆ. ಆರೋಗ್ಯ ಕೈತಪ್ಪಿದರೆ ಮಾನಸಿಕ ನೆಮ್ಮದಿ ಇಲ್ಲದೆ ಊಟ, ನಿದ್ರೆ ಮತ್ತು ವಿರಾಮ ಪಡೆಯಲು ಅಡಚಣೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಯಾವುದೇ ಮುಜುಗರ ಪಡದೆ ತಜ್ಞ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಂಡು ಶಿಬಿರದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಬಿ. ಮೂಗಪ್ಪ ಮಾತನಾಡಿ, ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ಪ್ರತಿಯೊಬ್ಬರೂ ಬದಲಾಗಬೇಕೆಂಬ ಮನೋಭಾವ ಬೆಳೆಸಿಕೊಳ್ಳಬೇಕು. ದುಶ್ಚಟಗಳಿಗೆ ದಾಸರಾಗದೆ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಿ, ಸುಸಂಸ್ಕøತ ನಡವಳಿಕೆಯೊಂದಿಗೆ ಜೀವನ ಶೈಲಿಯನ್ನು ಬದಲಾಯಿಸಿಕೊಂಡು ಇತರರಿಗೆ ಮಾರ್ಗದರ್ಶಕರಾಗಬೇಕು ಎಂದು ಕರೆ ನೀಡಿದರು.
ಇದನ್ನೂ ಓದಿ: ಚಿಕ್ಕಜಾಜೂರು ಪಿಎಸ್‌ಐ ನೇತ್ರಾವತಿ ತಾತ್ಕಾಲಿಕ ವರ್ಗಾವಣೆ
ಶಿಬಿರದಲ್ಲಿ 176 ಬಂದಿನಿವಾಸಿಗಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಇದೇ ಸಂದರ್ಭದಲ್ಲಿ ಹೊಸದಾಗಿ ಮೂವರು ಮಧುಮೇಹ ರೋಗಿಗಳನ್ನು ಪತ್ತೆ ಹಚ್ಚಿ ಅವರಿಗೆ ತಕ್ಷಣದಿಂದಲೇ ಚಿಕಿತ್ಸೆ ಪ್ರಾರಂಭಿಸಲಾಯಿತು. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಸ್ಥಳದಲ್ಲೇ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿರುವವರನ್ನು ಜಿಲ್ಲಾ ಆಸ್ಪತ್ರೆಗೆ ಶಿಫಾರಸು ಮಾಡಲಾಯಿತು.
ಕಾರ್ಯಕ್ರಮದಲ್ಲಿ ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಡಾ. ಅಕ್ಷತಾ, ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯದ ಮೂಳೆ ತಜ್ಞರಾದ ಡಾ. ಬಸಣ್ಣ, ಡಾ. ರಾಹುಲ್, ಜನರಲ್ ಮೆಡಿಸಿನ್ ತಜ್ಞರಾದ ಡಾ. ಗಿರೀಶ್ ಗೌಡ, ಡಾ. ನಾಗಚಂದ್ರ, ಚರ್ಮರೋಗ ತಜ್ಞ ಡಾ. ಅಭಿನವ, ನೇತ್ರ ತಜ್ಞ ಡಾ. ಶಿವಕುಮಾರ್, ಜೈಲರ್ ರಾಜೇಂದ್ರ, ಕಾರಾಗೃಹದ ಶಿಕ್ಷಕ ಶ್ರೀರಾಮ ರೆಡ್ಡಿ ಹಾಗೂ ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
