
CHITRADURGA NEWS | 07 SEPTEMBER 2026
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ಪ್ರಾಯೋಗಿಕವಾಗಿ ನೀರು ಹರಿಸುವ ಸಂದರ್ಭದಲ್ಲಿ ಉಂಟಾಗಿದ್ದ ಸಮಸ್ಯೆ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಟಿ.ರಘುಮೂರ್ತಿ ಅವರು ಇಂದು ತರೀಕೆರೆಗೆ ಭೇಟಿ ನೀಡಿ, ತರೀಕೆರೆ ಶಾಸಕರಾದ ಜಿ.ಹೆಚ್. ಶ್ರೀನಿವಾಸ್, ಮುಖ್ಯ ಇಂಜಿನಿಯರ್ ರವಿಶಂಕರ್, ಅಧೀಕ್ಷಕ ಇಂಜಿನಿಯರ್ ಕವಿತಾ ಹಾಗೂ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ರಾಮೇಂದ್ರ ಅವರೊಂದಿಗೆ ಚರ್ಚೆ ನಡೆಸಿದರು.
ಇದನ್ನೂ ಓದಿ: ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ನಂತರ ಸ್ಥಳದಲ್ಲಿಯೇ ರೈತರೊಂದಿಗೆ ಸಂವಾದ ನಡೆಸಿದ ಸಚಿವರು, ರೈತರ ಅಹವಾಲುಗಳು ಹಾಗೂ ನೀರಾವರಿ ಸಮಸ್ಯೆಗಳನ್ನು ಆಲಿಸಿದರು. ಕಾಲುವೆಯಲ್ಲಿ ಮಣ್ಣು ತುಂಬಿರುವುದು, ಏತ ನೀರಾವರಿ ವ್ಯವಸ್ಥೆ, ಪಂಪ್‌ಗಳ ಕಾರ್ಯಾಚರಣೆ ಸೇರಿದಂತೆ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸಮಸ್ಯೆಗಳನ್ನು ಪರಿಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು.
ರೈತರ ಹಿತಾಸಕ್ತಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಂಡು, ಭದ್ರಾ ಮೇಲ್ದಂಡೆ ಯೋಜನೆಯಡಿ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ನಿರಂತರವಾಗಿ ಹರಿಯುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ರೈತರಿಗೆ ಭರವಸೆ ನೀಡಿದರು.
ರೈತರೊಂದಿಗೆ ಸೌಹಾರ್ದಯುತವಾಗಿ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಂಡ ಬಳಿಕ, ಬೆಟ್ಟದ ತಾವರೆಕೆರೆ ಬಳಿಯ ಮತ್ತೊಂದು ಪಂಪ್‌ನಿಂದ ಚಿತ್ರದುರ್ಗ ಶಾಖಾ ಕಾಲುವೆಗೆ ನೀರು ಹರಿಸುವ ಕಾರ್ಯಕ್ಕೆ ಸಚಿವ ಟಿ. ರಘುಮೂರ್ತಿ ಅವರು ಪುನರ್ ಚಾಲನೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 07 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
ಸ್ಥಗಿತಗೊಂಡಿದ್ದ ನೀರು ಹರಿಸುವ ಪ್ರಕ್ರಿಯೆ ಮತ್ತೆ ಆರಂಭಗೊಂಡಿರುವುದು ತರೀಕೆರೆ ಹಾಗೂ ಚಿತ್ರದುರ್ಗ ಭಾಗದ ರೈತರಲ್ಲಿ ಸಂತಸ ಮತ್ತು ಆಶಾಭಾವನೆ ಮೂಡಿಸಿದೆ.
ಈ ಸಂದರ್ಭದಲ್ಲಿ ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

