ಮುಖ್ಯ ಸುದ್ದಿ
ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ | ಮೇ.18 ರಿಂದ 22 ರವರೆಗೆ ಧಾರಾಕಾರ ಮಳೆ

CHITRADURGA NEWS | 17 MAY 2024
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.
ಭೀಕರ ಬರಕ್ಕೆ ತತ್ತರಿಸಿದ್ದ ಕರುನಾಡಿಗೆ ವರುಣನ ಆಗಮನ ಸಮಾಧಾನ ತರಿಸಿದೆ. ಈಗ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುತ್ತಿದ್ದು, ಹಳ್ಳ, ಕೊಳ್ಳಗಳು ತುಂಬಿ ಹರಿಯುವಂತೆ, ಕೆರೆ ಕಟ್ಟೆಗಳಿಗೆ ನೀರು ಬರುವಂತಹ ಮಳೆಯ ಅಗತ್ಯವಿದೆ.

ಇದನ್ನೂ ಓದಿ: ಅಸ್ಥಿಪಂಜರ ಸಿಕ್ಕ ಮನೆಯಲ್ಲಿ ತನಿಖೆ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳೆಷ್ಟು ಗೊತ್ತಾ
ಈ ಹಿನ್ನೆಲೆಯಲ್ಲಿ ಮೇ.18, 19 ಮತ್ತು 20 ರಂದು ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಎಲ್ಲೋ ಹಾಗೂ ಅರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಈ ವೇಳೆಗೆ ಪೂರ್ವ ಮುಂಗಾರು ಹದವಾಗಿ ಸುರಿದು ಬಿತ್ತನೆ ಕಾರ್ಯಗಳು ಪ್ರಾರಂಭವಾಗಬೇಕಿತ್ತು. ಆದರೆ, ಸರಿಯಾದ ಮಳೆಯಾಗದ ಕಾರಣ ಈಗ ಸುರಿಯಲಿರುವ ಕೃತಿಕಾ ಮಳೆಯಿಂದಾಗಿ ಕೃಷಿ ಚಟುವಟಿಕೆಗಳು ಚುರುಕಾಗಬಹುದು ಎನ್ನುವ ರೈತರ ನಿರೀಕ್ಷೆ ಗರಿಗೆದರಿದೆ.
ಇದನ್ನೂ ಓದಿ: ನಿಮ್ಮ ಮನೆಗೆ ಕೊರಿಯರ್ ಬಂದರೆ ಎಚ್ಚರ | ಸ್ವೀಕರಿಸುವ ಮುನ್ನ ಯೋಚಿಸಿ
ವಿಶೇಷವಾಗಿ ಶನಿವಾರ, ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಲಿದ್ದು, ಸಾರ್ವಜನಿಕರು ಗಾಳಿ, ಮಳೆ, ಗುಡುಗು ಮತ್ತು ಸಿಡಿಲಿನ ಕಾರಣಕ್ಕೆ ಎಚ್ಚರಿಕೆಯಿಂದ ಇರಲಿ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಈ ಮೂರು ದಿನಗಳ ಕಾಲ ಬೆಂಗಳೂರು, ಕೊಡಗು, ಚಿತ್ರದುರ್ಗ, ಕೋಲಾರ, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ.
ಇದನ್ನೂ ಓದಿ: ಮೊರಾರ್ಜಿ ದೇಸಾಯಿ ವಸತಿ ಕಾಲೇಜುನಲ್ಲಿ 1st ಪಿಯುಸಿಗೆ ಉಚಿತ ಪ್ರವೇಶ | ಅರ್ಜಿ ಆಹ್ವಾನ
