
CHITRADURGA NEWS | 17 MAY 2024
ಚಿತ್ರದುರ್ಗ: ಜಿಲ್ಲೆಯಾದ್ಯಂತ ನಿಧಾನಗತಿಯಲ್ಲಿ ಮಳೆ ಚುರುಕಾಗಿದೆ. ಶುಕ್ರವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಮೂಡಿದೆ. ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುರುವಾರ ಮಧ್ಯಾಹ್ನ ಅರ್ಧ ಗಂಟೆಗೂ ಹೆಚ್ಚು ಸಮಯ ಹದ ಮಳೆಯಾಗಿದ್ದು, ರೈತರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.
ಚಿಕ್ಕಜಾಜೂರಿನಲ್ಲಿ ಹತ್ತು ನಿಮಿಷಗಳ ಕಾಲ ಸಾಧಾರಣ ಮಳೆಯಾಗಿದೆ. ಸಮೀಪದ ಚನ್ನಪಟ್ಟಣ, ಅಪ್ಪರಸನಹಳ್ಳಿ, ಪಾಡಿಗಟ್ಟೆ, ಆಡನೂರು, ಬಾಣಗೆರೆ ಗ್ರಾಮಗಳಲ್ಲೂ 15-20 ನಿಮಿಷಗಳ ಕಾಲ ಹದ ಮಳೆಯಾಗಿದೆ. ಮಧ್ಯಾಹ್ನ 1.15ರ ಸುಮಾರಿನಲ್ಲಿ ಸಾಸಲು, ಸಾಸಲುಹಳ್ಳ, ಕಾಳಘಟ್ಟ, ಕಾಳಘಟ್ಟ ಲಂಬಾಣಿಹಟ್ಟಿ, ಐಯ್ಯನಹಳ್ಳಿ ಗ್ರಾಮಗಳಲ್ಲಿ 10 ನಿಮಿಷಗಳ ಕಾಲ ಸಾಧಾರಣ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: ನಿಮ್ಮ ಮನೆಗೆ ಕೊರಿಯರ್ ಬಂದರೆ ಎಚ್ಚರ | ಸ್ವೀಕರಿಸುವ ಮುನ್ನ ಯೋಚಿಸಿ
ಸಾಸಲು, ಸಾಸಲುಹಳ್ಳ, ಮುತ್ತುಗದೂರು, ಹಿರಿಯೂರು ಸುತ್ತಮುತ್ತ ನಲವತ್ತು ನಿಮಿಷಗಳ ಕಾಲ ಮಳೆಯಾಗಿದೆ. ಈ ಭಾಗದಲ್ಲಿ ಈ ವರ್ಷದಲ್ಲಿ ಇದೇ ಮೊದಲ ಬಾರಿಗೆ ಹದ ಮಳೆಯಾಗಿದೆ. ಕಾಗಳಗೆರೆ, ಬಂಡೆಬೊಮ್ಮೇನಹಳ್ಳಿ, ಕಾಳಘಟ್ಟ ಮೊದಲಾದ ಕಡೆ ಸಾಧಾರಣ ಸುರಿದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
