
CHITRADURGA NEWS | 17 March 2026
ಚಿತ್ರದುರ್ಗ: ಬಿರು ಬೇಸಿಗೆಯಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಸೃಷ್ಟಿಯಾಗುತ್ತಿದ್ದ ಹೊತ್ತಿನಲ್ಲೇ ಜಿಲ್ಲೆಯ ವಿವಿಧೆಡೆ ಭರ್ಜರಿ ಮಳೆಯಾಗಿದೆ.
ಇದನ್ನೂ ಓದಿ: ದಿನ ಭವಿಷ್ಯ | ಮಾರ್ಚ್ 17 | ವ್ಯಾಪಾರಗಳಲ್ಲಿ ಹೊಸ ಹೂಡಿಕೆ, ದೀರ್ಘಕಾಲದ ಸಾಲಗಳ ಒತ್ತಡ
ಸೋಮವಾರ ಮಧ್ಯಾಹ್ನವೇ ಹೊಸದುರ್ಗ, ಹೊಳಲ್ಕೆರೆ ತಾಲೂಕಿನ ವಿವಿಧೆಡೆಗಳಲ್ಲಿ ಮಳೆ ಸುರಿಯಿತು.ರಾತ್ರಿಯಾಗುತ್ತಿದ್ದಂತೆ ಗುಡುಗಿನ ಆರ್ಭಟದೊಂದಿಗೆ ಆರಂಭವಾದ ಮಳೆ ಸುಮಾರು ಒಂದು ತಾಸು ಭರ್ಜರಿಯಾಗಿ ಸುರಿಯಿತು.
ವಾತಾವರಣದಲ್ಲಿ ಆಗಿರುವ ದಿಢೀರ್ ಬದಲಾವಣೆಯಿಂದ ರಾಜ್ಯದ ಕರಾವಳಿ, ದಕ್ಚಿಣ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ.
ಬೇಸಿಗೆಯಲ್ಲಿ ಸುರಿದ ಅಕಾಲಿಕ ಮಳೆ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಸೇರಿದಂತೆ ಹಲವೆಡೆ ರೈತರು ತೋಟಗಳನ್ನು ಉಖಿಸಿಕೊಳ್ಳಲು ಟ್ಯಾಂಕರ್ ಮೂಲಕ ನೀರು ಹಾಯಿಸುತ್ತಿದ್ದ ವೇಳೆ ವರವಾಗಿ ಬಂದಿದೆ.
ಇದನ್ನೂ ಓದಿ: ಜಿಲ್ಲೆಯಲ್ಲಿ ಗೃಹ ಬಳಕೆ LPG ಸಿಲಿಂಡರ್ ಕೊರತೆಯಿಲ್ಲ | ನಿಯಮಾನುಸಾರವೇ ಆನ್‍ಲೈನ್ ಬುಕ್ಕಿಂಗ್ ಮಾಡಿ | ಡಿಸಿ
ಬೇಸಿಗೆಯ ಬಿಸಿಲು ತೀವ್ರವಾಗಿದ್ದ ಕಾರಣಕ್ಕೆ ಯಾವಾಗ ಮಳೆ ಬರುತ್ತದೋ ಎನ್ನುವ ಆತಂಕ ಮನೆ ಮಾಡಿತ್ತು.ಈ ನಡುವೆ ಬೇಸಿಗೆಯಲ್ಲೇ ಅಕಾಲಿಕ ಮಳೆ ಜಿಲ್ಲೆಗೆ ಬಂದು ತಂಪೆರೆದಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಕೆಲವಡೆ ಮೆಕ್ಕೆಜೋಳ ಇತರೆ ಬೆಳೆಗಳ ಒಕ್ಕಣೆ ಮಾಡುತ್ತಿದ್ದ ರೈತರಿಗೆ ತೊಂದರೆ ಆಗಿರುವ ಘಟನೆಯೂ ವರದಿಯಾಗಿವೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

