
CHITRADURGA NEWS | 22 AUGUST 2024
ಚಿತ್ರದುರ್ಗ: ಮೊಳಕಾಲ್ಮೂರು ತಾಲೂಕಿನ ದೇವಸಮುದ್ರದಲ್ಲಿ ಬುಧವಾರ 71 ಮಿ.ಮೀ ಮಳೆ(Rain)ಯಾಗಿದ್ದು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: Raghavendra Swamy Maharathotsava;ರಾಘವೇಂದ್ರ ಸ್ವಾಮಿಗಳ ಮಹಾರಥೋತ್ಸವ | ಭಕ್ತಿಯಲ್ಲಿ ಮಿಂದೆದ್ದ ಅಪಾರ ಭಕ್ತ ಸಮೂಹ
ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 10.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 0.9 ಮಿ.ಮೀ, ಭರಮಸಾಗರ 8.3 ಮಿ.ಮೀ, ಹಿರೇಗುಂಟನೂರು 1.9 ಮಿ.ಮೀ, ತುರುವನೂರು 5.3 ಮಿ.ಮೀ ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 0.3 ಮಿ.ಮೀ, ನಾಯಕನಹಟ್ಟಿ 9.8 ಮಿ.ಮೀ, ಪರಶುರಾಂಪುರ 0.4 ಮಿ.ಮೀ, ತಳಕು 2.7 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಐಮಂಗಲ 0.5 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 1.6 ಮಿ.ಮೀ, ಬಿ.ದುರ್ಗ 1.4 ಮಿ.ಮೀ, ರಾಮಗಿರಿ 1 ಮಿ.ಮೀ, ತಾಳ್ಯ 0.3 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 0.6 ಮಿ.ಮೀ, ಮಾಡದಕೆರೆ 0.3 ಮಿ.ಮೀ, ಶ್ರೀರಾಂಪುರ 0.2 ಮಿ.ಮೀ ಮಳೆಯಾಗಿದೆ.
ಕ್ಲಿಕ್ ಮಾಡಿ ಓದಿ: BJP: ಹೊಸದುರ್ಗ ಪುರಸಭೆ ಅಧ್ಯಕ್ಷರಾಗಿ ರಾಜೇಶ್ವರಿ ಆನಂದ್ ಅವಿರೋಧ ಆಯ್ಕೆ | ಉಪಾಧ್ಯಕ್ಷರಾಗಿ ಗೀತಾ ಆಸಂಗಿ
33 ಮನೆಗಳು ಭಾಗಶಃ ಹಾನಿ:
ಬುಧವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 33 ಮನೆಗಳು ಭಾಗಶಃ ಹಾನಿ, 1 ಮನೆ ತೀವ್ರತರ ಮನೆಹಾನಿಯಾಗಿದ್ದು, 2 ಹೆಕ್ಟೇರ್ ತೋಟಗಾರಿಕೆ ಬೆಳೆ, 2 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ 21 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ ಹಾಗೂ 2 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿವೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 5 ಭಾಗಶಃ ಹಾನಿಯಾಗಿವೆ.
ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿವೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 3 ಮನೆಗಳು ಭಾಗಶಃ ಹಾನಿಯಾಗಿವೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
