CHITRADURGA NEWS | 29 NOVEMBER 2025
ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಹೆಗ್ಗೆರೆ ಗ್ರಾಮ ಪಂಚಾಯಿತಿಯು ಕಾಯಕ ಗ್ರಾಮವಾಗಿ ಆಯ್ಕೆಯಾಗಿದ್ದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಸಮಗ್ರ ಅಭಿವೃದ್ಧಿ ಸಾಧಿಸಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕರಾದ ಕೆ.ಜಯಲಕ್ಷ್ಮಿ ಹೇಳಿದರು.
ಇದನ್ನೂ ಓದಿ: ಪದವೀಧರ ಮತದಾರರ ಸಂಖ್ಯೆ ಹೆಚ್ಚಿಸಲು ವಿಶೇಷ ಕ್ರಮ | ಸುಮನ್ ಕುಮಾರ್ ದಾಸ್
ಹೊಸದುರ್ಗ ತಾಲ್ಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಗುರುವಾರ ಕಾಯಕ ಗ್ರಾಮ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಹೆಗ್ಗೆರೆ ಗ್ರಾಮ ಪಂಚಾಯಿತಿ ಸಮಗ್ರ ಅಭಿವೃದ್ಧಿಗೆ ಎಲ್ಲ ಇಲಾಖೆಗಳು ಒಗ್ಗೂಡಿ ಕಾರ್ಯನಿರ್ವಹಿಸುವುದು ಅಗತ್ಯವಾಗಿದೆ. ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳ ಸಹಕಾರ ತುಂಬಾ ಅವಶ್ಯಕವಾಗಿದೆ ಎಂದರು.
ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ, ಶಾಲೆ, ಅಂಗನವಾಡಿ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಗ್ರಂಥಾಲಯ, ಕುಡಿಯುವ ನೀರಿನ ಒವರ್ ಹೆಡ್ ಟ್ಯಾಂಕ್, ನಳ ಸಂಪರ್ಕ ಪರಿಶೀಲನೆ ನಡೆಸಿದರು.
ಇದನ್ನೂ ಓದಿ: ಬೇಡರೆಡ್ಡಿಹಳ್ಳಿ ಮಾದರಿ ಗ್ರಾಪಂ ಸಂಕಲ್ಪ | ಡಾ.ಎಸ್.ಆಕಾಶ್
ಈ ಸಂದರ್ಭದಲ್ಲಿ ಹೊಸದುರ್ಗ ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ನಿಯಾಜ್, ಯೋಜನಾಧಿಕಾರಿ ಕರಿಯಪ್ಪ, ಜಿಲ್ಲಾ ಹೆಚ್‍ಆರ್‍ಡಿ ಸಮಾಲೋಚಕ ವಿನಯ್ ಕುಮಾರ್, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಸಹಾಯಕ ಅಭಿಯಂತರ ಹನುಮಂತಪ್ಪ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
