
CHITRADURGA NEWS | 23 APRIL 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಚಿತ್ರದುರ್ಗ ನಗರಕ್ಕೆ ಮಂಗಳವಾರ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್ ಅನ್ನು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಮಂಗಳವಾರ ಪರಿಶೀಲನೆ ನಡೆಸಿದರು.
ಕ್ಲಿಕ್ ಮಾಡಿ ಓದಿ: ಗಡಿ ದಾಟಿದ್ರೂ ಮೂರು ದಿನ ‘ಎಣ್ಣೆ’ ಸಿಗಲ್ಲ | ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಮಂಗಳವಾರ ಮಧ್ಯಾಹ್ನ 3.25ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಚಿತ್ರದುರ್ಗ ನಗರದ ಎಂ.ಕೆ.ಹಟ್ಟಿಯ ಎಸ್‍ಜೆಎಂ ಆಂಗ್ಲ ಮಾಧ್ಯಮ ಶಾಲಾ ಆವರಣದ ಹೆಲಿಪ್ಯಾಡ್‌ಗೆ ಆಗಮಿಸಿದರು.
ಈ ವೇಳೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್, ತಹಶೀಲ್ದಾರ್ ಡಾ.ನಾಗವೇಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅನಂತರಾಜು ಸೇರಿದಂತೆ ಎಫ್‌ಎಸ್‌ಟಿ ತಂಡದ ಅಧಿಕಾರಿಗಳು ಇದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
