Connect with us

hi-tech hospital; ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಎಂ.ಚಂದ್ರಪ್ಪ ಪ್ರಸ್ತಾವನೆ

ನೂತನ ಉಪ ಆರೋಗ್ಯ ಕೇಂದ್ರ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿ ಪೂಜೆ ಸಲ್ಲಿಸಿದರು.

ಹೊಳಲ್ಕೆರೆ

hi-tech hospital; ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಶಾಸಕ ಎಂ.ಚಂದ್ರಪ್ಪ ಪ್ರಸ್ತಾವನೆ

CHITRADURGA NEWS | 15 SEPTEMBER 2024

ಹೊಳಲ್ಕೆರೆ: ಹೈಟೆಕ್ ಆಸ್ಪತ್ರೆ(hi-tech hospital)ಕಟ್ಟಿಸಲು 2 ಎಕರೆ ಭೂಮಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇನೆಂದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.

ಕ್ಲಿಕ್ ಮಾಡಿ ಓದಿ: selfie stand; ಹಿಂದೂ ಮಹಾಗಣಪತಿ ಮಂಟಪದಲ್ಲಿ ಸೆಲ್ಫಿ ಸ್ಟ್ಯಾಂಡ್ ಉದ್ಘಾಟಿಸಿದ ಉಮೇಶ್ ಕಾರಜೋಳ

ತಾಲ್ಲೂಕಿನ ಹಿರೇಎಮ್ಮಿಗನೂರು ಗ್ರಾಮದಲ್ಲಿ 60 ಲಕ್ಷ ರೂ.ವೆಚ್ಚದಲ್ಲಿ ನೂತನ ಉಪ ಆರೋಗ್ಯ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಸಲ್ಲಿಸಿ ನಂತರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿದ ಅವರು,

ಈ ಭಾಗದಲ್ಲಿ ಪಬ್ಲಿಕ್ ಶಾಲೆಯನ್ನು ಕಟ್ಟಿದರೆ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಮಕ್ಕಳಿಗೆ ಅನುಕೂಲವಾಗುತ್ತದೆ. ಎಲ್.ಕೆ.ಜಿ.ಯಿಂದ ಹಿಡಿದು ಪಿ.ಯು.ಸಿ.ವರೆಗೆ ಶಿಕ್ಷಣವನ್ನು ಪಡೆದು ಬಡ ಮಕ್ಕಳು ಸಹ ಇಂಜಿನಿಯರ್ ಡಾಕ್ಟರ್‍ ಗಳಾಗಬಹುದು.

ಕಾಶಿಪುರದಲ್ಲಿ ಈಗಾಗಲೆ ಪಬ್ಬಿಕ್ ಶಾಲೆ ಕಟ್ಟಿದ್ದು, ಸಾವಿರಾರು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಒಂದೇ ಕಟ್ಟಡದಲ್ಲಿ 45 ಕೊಠಡಿಗಳನ್ನು ನಿರ್ಮಿಸಲಾಗಿದೆ.

ಸರ್ಕಾರಿ ಶಾಲೆಯ ಮಕ್ಕಳಿಗೆ ಊಟ, ಬಟ್ಟೆ, ಪುಸ್ತಕ, ಕಂಪ್ಯೂಟರ್, ಶೂಗಳನ್ನು ನೀಡುತ್ತಿದೆ. ಹೊಳಲ್ಕೆರೆ ಪಟ್ಟಣದ ಎಂ.ಎಂ. ಪ್ರೌಢಶಾಲೆಯಲ್ಲಿ ಕೇವಲ ಇನ್ನೂರು ಮಕ್ಕಳಿದ್ದರು. ಅಲ್ಲಿಯೂ ಪಬ್ಲಿಕ್ ಶಾಲೆ ಕಟ್ಟಿದ್ದು, ಸಾವಿರಕ್ಕೂ ಹೆಚ್ಚು ಮಕ್ಕಳು ದಾಖಲಾಗಿದ್ದಾರೆಂದು ಹೇಳಿದರು.

ಕ್ಲಿಕ್ ಮಾಡಿ ಓದಿ: Karaway protest; ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರವೇ ಪ್ರತಿಭಟನೆ

ಕ್ಷೇತ್ರದಲ್ಲಿನ ಸರ್ಕಾರಿ ಶಾಲೆಯ ಬಡ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಾರದೆನ್ನುವ ಕಾರಣಕ್ಕಾಗಿ ಬಸ್‍ಗಳ ವ್ಯವಸ್ಥೆ ಕಲ್ಪಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನು 5 ಲೈಲಾಂಡ್ ಬಸ್‍ಗಳನ್ನು ಸರ್ಕಾರಿ ಶಾಲೆ ಮಕ್ಕಳಿಗೆ ನೀಡುತ್ತೇನೆ. ಚಿಕ್ಕಜಾಜೂರು ಸಮೀಪ 15 ಕೋಟಿ ರೂ.ವೆಚ್ಚದಲ್ಲಿ ಹೈಟೆಕ್ ಆಸ್ಪತ್ರೆ ಕಟ್ಟಿಸಿದ್ದೇನೆ.

ವೈದ್ಯರುಗಳು ತಂಗಲು ವಸತಿ ಗೃಹ ನಿರ್ಮಾಣಕ್ಕಾಗಿ 2 ಕೋಟಿ ರೂ.ಗಳನ್ನು ನೀಡಿದ್ದೇನೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದು ಅರ್ಥಮಾಡಿಕೊಂಡು ಕ್ಷೇತ್ರದಲ್ಲಿ ಯಾರು ಏನೆ ಕೇಳಲಿ ಬಿಡಲಿ ಎಲ್ಲೆಲ್ಲಿ ಏನೇನು ಸಮಸ್ಯೆಗಳಿದೆ ಎನ್ನುವುದನ್ನು ಹುಡುಕಿ ಹಗಲು-ರಾತ್ರಿ ಪ್ರಾಮಾಣಿಕವಾಗಿ ಕೆಲಸ ಮಾಡುತಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಪಂಚಾಯಿತಿ ಸದಸ್ಯ ತಿಪ್ಪೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ತಾಲ್ಲೂಕು ಆರೋಗ್ಯಾಧಿಕಾರಿ ರೇಖಾ, ಎಸ್.ಡಿ.ಎಂ.ಸಿ.ಅಧ್ಯಕ್ಷ ಲಿಂಗರಾಜು ಸೇರಿದಂತೆ ಗ್ರಾಮದ ಮುಖಂಡರುಗಳು ಇದ್ದರು.

Click to comment

Leave a Reply

Your email address will not be published. Required fields are marked *

More in ಹೊಳಲ್ಕೆರೆ

To Top
Exit mobile version