
CHITRADURGA NEWS | 23 APRIL 2026
ಚಿತ್ರದುರ್ಗ: ಈ ಬಾರಿ ವಾತಾವರಣದಲ್ಲಿ ಹೆಚ್ಚಿನ ವ್ಯತ್ಯಾಸವಾಗಿದ್ದು, ಬಿರು ಬೇಸಿಗೆ ಎಲ್ಲರನ್ನು ಕಾಡುತ್ತಿದೆ. ಇಂತಹ ಸಂದರ್ಭದಲ್ಲಿ ವೃದ್ಧರು, ಗರ್ಭಿಣಿಯರು, ಮತ್ತು ಮಕ್ಕಳು ವಿಶೇಷ ಕಾಳಜಿ ವಹಿಸುವುದು ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಜಿ.ಪಿ. ರೇಣುಪ್ರಸಾದ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಗುರುವಾರ ಹವಾಮಾನ ವೈಪರಿತ್ಯ ದಿಂದ ಆಗುವ ತೊಂದರೆಗಳನ್ನು ನಿಭಾಯಿಸುವ ಕುರಿತು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಇಲಾಖೆಯ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಆಯೋಜಿಸಲಾಗಿದ್ದ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಉಷ್ಣಾಂಶ ಹೆಚ್ಚಾಗುತ್ತಿರುವುದರಿಂದ ಸಾರ್ವಜನಿಕರಿಗೆ ಆಗುವ ಆರೋಗ್ಯ ಸಮಸ್ಯೆಗಳಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡುವ ಸಂಬಂಧ ಅವಶ್ಯಕ ಪೂರ್ವಸಿದ್ಧತೆ ಮಾಡಿಕೊಂಡು ವಿಶೇಷ ಕಾಳಜಿವಹಿಸಿ ಆರೋಗ್ಯ ಸೇವೆ ನೀಡಬೇಕು.ಬಿಸಿಲಾಘಾತ, ನಿರ್ಜಲೀಕರಣದಿಂದ ಬಳಲುವ ರೋಗಿಗಳಿಗೆ ತಕ್ಷಣವೇ ಚಿಕಿತ್ಸೆ ನೀಡಬೇಕು ಎಂದರು.
ಜಿಲ್ಲಾ ಜಾರಿ ಅಧಿಕಾರಿಗಳಾದ ಡಾ.ಡಿ.ಎಂ.ಅಭಿನವ ಮಾತನಾಡಿ, ಅಂತರ ಇಲಾಖೆಯ ಸಮನ್ವಯ ದೊಂದಿಗೆ ಸಭೆ ಸಮಾರಂಭಗಳಲ್ಲಿ ಸಾರ್ವಜನಿಕರು ತಾಪಮಾನದಿಂದ ರಕ್ಷಿಸಿಕೊಳ್ಳುವ ಬಗ್ಗೆ ಹಾಗೂ ದೇಹ ನಿರ್ಜಲೀಕರಣ ವಾಗದಂತೆ ಜಾಗೃತಿ ಮೂಡಿಸುವಂತೆ ಸೂಚನೆ ನೀಡಿದರು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
ಜಿಲ್ಲಾ ಯೋಜನಾಧಿಕಾರಿ ಡಾ.ಕಾಶಿ ಮಾತನಾಡಿ, ಸಾರ್ವಜನಿಕರು ಸೂರ್ಯಘಾತದಿಂದ ರಕ್ಷಿಸಿಕೊಳ್ಳಲು ಮಧ್ಯಾಹ್ನ ಶ್ರಮದಾಯಕ ಕೆಲಸ ಮಾಡಬಾರದು. ತಿಳಿ ಬಣ್ಣದ ಸಡಿಲವಾದ ಕಾಟನ್ ಬಟ್ಟೆಗಳನ್ನು ಧರಿಸಬೇಕು. ಹೊರಾಂಗಣದಲ್ಲಿ ಕೆಲಸ ನಿರ್ವಹಿಸುವಾಗ ವಿಶ್ರಾಂತಿ ಪಡೆಯಬೇಕು. ನಿರ್ಜಲೀಕರಣ ತಡೆಯಲು ಹೆಚ್ಚು ಸಕ್ಕರೆಯುತ್ತಾ ಅಥವಾ ಕಾರ್ಬೋನೇಟೆಡ್ ಪಾನೀಯಗಳನ್ನು ಕುಡಿಯಬಾರದು.
ಸೂರ್ಯಘಾತವಾದರೆ ತಣ್ಣಗಿನ ಸ್ಥಳದಲ್ಲಿ ವ್ಯಕ್ತಿಯನ್ನು ಮಲಗಿಸಿ ದೇಹವನ್ನು ಒದ್ದೆ ಬಟ್ಟೆಯಿಂದ ವರೆಸಬೇಕು, ಕುಡಿಯಲು ಆಗಾಗ್ಗೆ ನೀರು ಕೊಡುವುದು, ವ್ಯಕ್ತಿ ಚೇತರಿಸಿಕೊಂಡ ನಂತರ ನೀರಿನಂಶವಿರುವ ಪದಾರ್ಥಗಳನ್ನು ನೀಡಬೇಕೆಂದರು. ಆದಷ್ಟು ಜೀರ್ಣಕ್ರಿಯೆ ಆಗುವ ಆಹಾರ ಪದಾರ್ಥಗಳ ಬಳಕೆ ಮಾಡುತ್ತಾ ಮನೆಯಲ್ಲಿ ದೊರೆಯುವ ಮಜ್ಜಿಗೆ, ಎಳನೀರು, ನೀರಿನಂಶ ಇರುವ ಸೌತೆಕಾಯಿ ಮೂಲಂಗಿ, ಸೊಪ್ಪು ತರಕಾರಿ ಬಳಸಬೇಕು ಎಂದರು.
ಬೆಂಗಳೂರಿನ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ಉಪ ನಿರ್ದೇಶಕರು ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಡಾ.ಗೀತಾ ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರು ಲಭ್ಯ ಇರುವಂತೆ ಗಮನಹರಿಸಲು ನಿರ್ದೇಶನ ನೀಡಿದರು.
ಇದನ್ನೂ ಓದಿ: SSLC RESULT | ಚಿತ್ರದುರ್ಗ ಜಿಲ್ಲೆಗೆ ಜಿಲ್ಲೆ ಶೇ.92.25 ರಷ್ಟು ಫಲಿತಾಂಶ
ವೀಡಿಯೋ ಸಂವಾಧದಲ್ಲಿ ವೈದ್ಯಾಧಿಕಾರಿಗಳು ಮತ್ತು ವಿವಿಧ ವೃಂದದ ಅಧಿಕಾರಿಗಳು ಸಿಬ್ಬಂದಿ ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
