Leopard Death: ಹೆದ್ದಾರಿಯಲ್ಲಿ ವಾಹನ ಡಿಕ್ಕಿ ಚಿರತೆ ಸಾವು

ವಾಹನ ಡಿಕ್ಕಿ ಚಿರತೆ ಸಾವು

CHITRADURGA NEWS | 14 AUGUST 2024

ಚಿತ್ರದುರ್ಗ: ಹೊಸದಾಗಿ ನಿರ್ಮಾಣವಾಗಿರುವ ರಾಷ್ಟ್ರೀಯ ಹೆದ್ದಾರಿ ಚಿತ್ರದುರ್ಗ ಬೈಪಾಸ್‍ನಲ್ಲಿ ಸಾಕಷ್ಟು ಪ್ರಾಣಿಗಳು ಅಪಘಾತದಿಂದ ಮೃತಪಡುತ್ತಿವೆ.

ಕಳೆದ 15 ದಿನಗಳ ಹಿಂದಷ್ಟೇ ಕರಡಿಯೊಂದು ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ ಮೃತಪಟ್ಟಿತ್ತು.

ಇದನ್ನೂ ಓದಿ: ತಡರಾತ್ರಿ ಸುರಿದ ಭಾರೀ ಮಳೆ | ತುಂಬಿ ಹರಿಯುತ್ತಿರುವ ಗುಂಡಿಹಳ್ಳ

ಈ ಘಟನೆ ಮಾಸುವ ಮುನ್ನವೇ ಅದೇ ಬೈಪಾಸ್ ರಸ್ತೆಯಲ್ಲಿ ಬುಧವಾರ ನಸುಕಿನಲ್ಲಿ ಚಿರತೆಗೆ (Leopard Death) ಅಪರಿಚಿತ ವಾಹನ ಡಿಕ್ಕಿಯಾಗಿದೆ.

ರಾಷ್ಟ್ರೀಯ ಹೆದ್ದಾರಿ ಬೈಪಾಸ್ ತಮಟಕಲ್ಲು ಬಳಿ ವಾಹನ ಡಿಕ್ಕಿಯಾದ ರಭಸಕ್ಕೆ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಅಪಘಾತದ ಬಳಿಕ ವಾಹನ ಸವಾರ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ವಿವಿ ಸಾಗರ ಡ್ಯಾಂ ಎಷ್ಟು ಸುರಕ್ಷಿತ | ತಪಾಸಣೆ ನಡೆಸಿದ ಅಧಿಕಾರಿಗಳು ಏನು ಹೇಳಿದ್ರು

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version