
CHITRADURGA NEWS | 01 AUGUST 2025
ಚಿತ್ರದುರ್ಗ: ವಿಶ್ವಹಿಂದು ಪರಿಷತ್, ಬಜರಂಗದಳದಿಂದ ನಗರದಲ್ಲಿ ಪ್ರತಿಷ್ಠಾಪಿಸುವ ಹಿಂದೂ ಮಹಾಗಣಪತಿ ಮಹೋತ್ಸವದ 18ನೇ ವರ್ಷದ ಉತ್ಸವಕ್ಕೆ ಗುರುವಾರ ಗೋಪೂಜೆ, ಧ್ವಜ ಪೂಜೆ ಮೂಲಕ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಕೃಷಿ ಪ್ರಶಸ್ತಿ | ರೈತರಿಂದ ಅರ್ಜಿ ಅಹ್ವಾನ

ಈ ವರ್ಷದ ಉತ್ಸವ ಸಮಿತಿ ಅಧ್ಯಕ್ಷರಾದ ಶರಣ್ ಕುಮಾರ್ ನೇತೃತ್ವದಲ್ಲಿ ಮಹಾಗಣಪತಿ ಮಂಟಪಕ್ಕೆ ಪೂಜೆ ಸಲ್ಲಿಸಲಾಯಿತು.
ಈ ವೇಳೆ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಕಬೀರಾನಂದ ಮಠದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ವಿಶ್ವಹಿಂದೂ ಪರಿಷತ್ ಜಿಲ್ಲಾ ಅಧ್ಯಕ್ಷ ಷಡಾಕ್ಷರಪ್ಪ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
