CHITRADURGA NEWS | 01 OCTOBER 2026
ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲಾಗುವ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ವಿಸರ್ಜನಾ ಕಾರ್ಯಕ್ರಮದ ಪ್ರಯುಕ್ತ ಗುರುವಾರ ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಯಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆದ ರ‍್ಯಾಲಿಗೆ ಭಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಚಾಲನೆ ನೀಡಿದರು.
ಮಾದಾರ ಗುರುಪೀಠದ ಡಾ. ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಬಿಜೆಪಿಯ ಉಮೇಶ್ ಕಾರಜೋಳ, ಅನಿತ್ ಕುಮಾರ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಶಶಿಧರ್ ಬಸಮ್ಮ, ಬಿ.ಜಯ್ಯಪ್ಪ, ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಜಿ.ಆರ್.ಸುದೀರ್, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬದರಿನಾಥ್, ಅಶೋಕ್ ಕುಮಾರ್, ಕಾರ್ತಿಕ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕನಕ ವೃತ್ತದಿಂದ ಆರಂಭವಾದ ಬೈಕ್ ರ‍್ಯಾಲಿ ಸಂಗೊಳ್ಳಿ ರಾಯಣ್ಣ ವೃತ್ತ, ಬುರುಜನಹಟ್ಟಿ ಸರ್ಕಲ್, ಆನೆಬಾಗಿಲು, ಕೋಟೆ ರಸ್ತೆ, ಶ್ರೀ ಏಕನಾಥೇಶ್ವರಿ ಪಾದಗಟ್ಟೆ ವೃತ್ತ, ಕರುವಿನಕಟ್ಟೆ, ಜೋಗಿಮಟ್ಟಿ ರಸ್ತೆ, ಜಟ್‌ಪಟ್ ನಗರ, ಸ್ಟೇಡಿಯಂ ರಸ್ತೆ, ಬಿ.ಡಿ. ರಸ್ತೆ, ಮದಕರಿ ವೃತ್ತ, ಗಾಂಧಿ ವೃತ್ತ, ಎನ್‌ಎಚ್-4 ಸರ್ವಿಸ್ ರಸ್ತೆ, ಜೆ.ಸಿ.ಆರ್. ರಸ್ತೆ, ವಾಸವಿ ವೃತ್ತ, ಡಿಸಿ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮೂಲಕ ಸಾಗಿ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಮುಕ್ತಾಯಗೊಂಡಿತು.
ಇದನ್ನೂ ಓದಿ: ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
ರ‍್ಯಾಲಿಯಲ್ಲಿ ಸುಮಾರು 300ರಿಂದ 500 ಬೈಕ್‌ಗಳಲ್ಲಿ ಯುವಕರು ಭಾಗವಹಿಸಿದ್ದರು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

