
CHITRADURGA NEWS | 12 SEPTEMBER 2025
ಚಿತ್ರದುರ್ಗ: ಜಿಲ್ಲೆಯ ಹಿಂದೂ ಮಹಾಗಣಪತಿ ಏಷ್ಯಾದಲ್ಲೇ ಅತಿ ದೊಡ್ಡ ಶೋಭಾಯಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಈ ಬಾರಿ ಶೋಭಾಯಾತ್ರೆಯನ್ನು ಸಂಸದರು, ಮೈಸೂರಿನ ರಾಜಮನೆತನದ ಯದುವೀರ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ಬಜರಂಗದಳದ ದಕ್ಷಿಣ ಪ್ರಾಂತ ಸಂಯೋಜಕ ಪ್ರಬಂಜನ್ ತಿಳಿಸಿದ್ದಾರೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಶೊಭಾಯಾತ್ರೆಗೆ ಬಂದೋಬಸ್ತ್ | 151 ಕಡೆ ಸಿಸಿ ಟಿವಿ ಕ್ಯಾಮರಾ | 67 ಕ್ಯಾಮರಾಮೆನ್
ನಗರದ ಜೈನಧಾಮದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿಯಲ್ಲಿ ಮಾತನಾಡಿ, ಶೋಭಾಯಾತ್ರೆ ಪ್ರಯುಕ್ತ ಈಗಾಗಲೇ ನಗರದ ಪ್ರಮುಖ ಬೀದಿಯಲ್ಲಿ ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿದೆ. ಸಂಜೆ ವೇಳೆಗೆ ನಗರದಲ್ಲಿರುವ ಎಲ್ಲಾ ಪ್ರತಿಮೆಗಳಿಗೆ ಹೂವುಗಳಿಂದ ಸಿಂಗರಿಸಿ ಶೋಭಾಯಾತ್ರೆಗೆ ಆಗಮಿಸುವ ಜನರನ್ನು ಸ್ವಾಗತಿಸಲಾಗುವುದು ಎಂದರು.

ಮಂಗಳೂರಿನ ಚಂಡೀ ವಾದ್ಯ, ನಾಸಿಕ್ ಡೋಲ್, ದಾವಣಗೆರೆಯ ನಾಸಿಕ್ ಡೊಲ್, ಚಿತ್ರದುರ್ಗದ ಡೊಳ್ಳು ಕುಣಿತ, 10 ಕ್ಕೂ ಹೆಚ್ಚು ಸ್ಥಳೀಯ ಕಲಾ ತಂಡಗಳು ಭಾಗವಹಿಸಿಲಿವೆ. ಅಲ್ಲದೆ ಯಾರ ನಿರೀಕ್ಷೆಯು ಹುಸಿಗೊಳಿಸದಂತೆ ಕಾನೂನು ಪ್ರಕಾರವೇ 4 ವಾಹನಗಳಲ್ಲಿ ಧ್ವನಿವರ್ಧಕಗಳನ್ನು ಬಳಸಿ ಕಳೆದ ವರ್ಷಕ್ಕಿಂತ ಅತೀ ವಿಜೃಂಭಣೆಯಿಂದ ಶೋಭಾಯಾತ್ರೆ ನಡೆಸಲಿದ್ದೆವೆ ಎಂದರು.
ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದ ಜನರು ಕರೆ ಮಾಡಿ ಭಾಗವಹಿಸಲಿದ್ದು, ಸುಮಾರು 6-7 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ. ಪಕ್ಷಾತೀತವಾಗಿ ಗಣೇಶೋತ್ಸವ ನಡೆಯುತ್ತಿರುವುದರಿಂದ ಶೋಭಾಯಾತ್ರೆಯಲ್ಲಿ ರಾಜಕೀಯ ಪ್ರಮುಖರು ಹಾಗೂ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ ಎಂದರು.
ಇದನ್ನೂ ಓದಿ: ಗಣಪತಿ ಶೋಭಾಯತ್ರೆಯಲ್ಲಿ ಡ್ರೋನ್ ಹಾರಿಸಿದರೆ ಹುಷಾರ್ | ಪೊಲೀಸರು ಡ್ರೋನ್ ಜಪ್ತಿ ಮಾಡ್ತಾರೆ
ನಾಳೆ ಬೆಳಗ್ಗೆ 10 ಗಂಟೆಗೆ ಜೈನಧಾಮದ ಬಳಿ ಚಾಲನೆ ನೀಡಲಾಗುವುದು. ಈ ಬಾರಿ ಬೃಹತ್ ಶೋಭಾಯಾತ್ರೆಗೆ ಮೈಸೂರಿನ ರಾಜಮನೆತನದ ಯದುವೀರ್ ಒಡೆಯರ್ ಶೋಭಾಯಾತ್ರೆಯನ್ನು ಉದ್ಘಾಟನೆ ಮಾಡುವುದು ಈ ಬಾರಿಯ ವಿಶೇಷ ಎಂದರು.
ಶೋಭಾಯಾತ್ರೆ ಉದ್ಘಾಟನೆಯಲ್ಲಿ ಸಾಧು ಸಂತರು, ಪಕ್ಷಾತೀತವಾಗಿ ರಾಜಕೀಯ ಗಣ್ಯರು, ಹಿಂದೂ ಸಂಘಟನೆಗಳ ಮುಖಂಡರು ಭಾಗಿಯಾಗಲಿದ್ದಾರೆ.
ಈ ಬಾರಿ ತಿರುಪತಿ ತಿಮ್ಮಪ್ಪನ ಮಾಡೆಲ್, ಭಗವಾಧ್ವಜ, ಬೃಹತ್ ಹೂವಿನ ಹಾರಗಳ ಹರಾಜು ಇರುತ್ತದೆ ಎಂದು ಹೇಳಿದರು.
ಡಿಜೆಗೆ ಈ ಬಾರಿ ಸರ್ಕಾರ ಹಲವು ನಿಬಂಧನೆಗಳನ್ನು ಹೇರಿದ್ದು, ಸರ್ಕಾರದ ಆದೇಶ ಹಾಗೂ ಕಾನೂನಿನಲ್ಲಿ ಏನು ಅವಕಾಶ ಇದೆಯೋ ಅದೆಲ್ಲವನ್ನು ಸಂಪೂರ್ಣವಾಗಿ ಬಳಸಿಕೊಂಡು ಯಾರ ನಿರೀಕ್ಷೆಯನ್ನು ಹುಸಿಗೊಳಿಸಿದೆ ಶೋಭಾಯಾತ್ರೆ ಯಶಸ್ವಿಗೊಳಿಸಲಾಗುವುದು.
ಇದನ್ನೂ ಓದಿ: ನಗರಸಭೆ ನೂತನ ಅಧ್ಯಕ್ಷರಾಗಿ ಅನಿತಾ ರಮೇಶ್ ಆಯ್ಕೆ
4 ವಾಹನಗಳಲ್ಲಿ ಸ್ಪೀಕರ್ ಗಳನ್ನು ಅಳವಡಿಕೆ ಮಾಡುತ್ತೇವೆ. ಶೋಭಾಯಾತ್ರೆ ವೇಳೆ ಜನರಿಗೆ ಯಾವ ರೀತಿಯ ಸೌಂಡ್ ಬೇಕು ಅದಕ್ಕೆ ತಕ್ಕಂತೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ. ಜಿಲ್ಲಾಡಳಿತದ ವತಿಯಿಂದ ಸಹ ಅನುಮತಿ ಪಡೆದುಕೊಂಡು ಮುಂದುವರೆಯುತ್ತೇವೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಹಿಂದೂ ಮಹಾಗಣಪತಿ ಸೇವಾ ಸಮಿತಿಯ ಅಧ್ಯಕ್ಷ ಶರಣ್ ಕುಮಾರ್, ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಕೇಶವ್ ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
