By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬೆಸ್ಕಾ
    ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ | ಕಟ್ಟಡಗಳ ಮೇಲೇರದಂತೆ ಬೆಸ್ಕಾಂ ಎಚ್ಚರಿಕೆ
    29 minutes ago
    ಎಸ್‌ಪಿ ಕುಶಾಲ್ ಚೌಕ್ಸೆ
    ಹಿಂದೂ ಮಹಾಗಣಪತಿ ವಿಸರ್ಜನೆಗೆ 4 ಸಾವಿರ ಪೊಲೀಸರ ಭಾರಿ ಬಂದೋಬಸ್ತ್
    33 minutes ago
    Prabhanjan Surya, the South Zone Coordinator, spoke at the press conference
    ಅ.3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಅರುಣ್ ಶ್ಯಾಮ್ ಉದ್ಘಾಟನೆ | 6 ಲಕ್ಷಕ್ಕೂ ಅಧಿಕ ಭಕ್ತರ ನಿರೀಕ್ಷೆ
    47 minutes ago
    Huge bike rally in the city
    ಹಿಂದೂ ಮಹಾಗಣಪತಿ ವಿಸರ್ಜನೆ | ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ
    1 hour ago
    Meeting of the District Disaster Management Authority
    ಟ್ಯಾಂಕರ್ ನೀರು ಪೂರೈಕೆಯಲ್ಲಿ ಪಾರದರ್ಶಕತೆ ಕಡ್ಡಾಯ | ಬರ ಪರಿಸ್ಥಿತಿ ಎದುರಿಸಲು ಅಧಿಕಾರಿಗಳಿಗೆ ಡಿಸಿ ಸೂಚನೆ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    6 hours ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    5 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    4 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    4 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    4 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 01 | ವ್ಯವಹಾರದಲ್ಲಿ ಹೂಡಿಕೆ ಬೇಡ, ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ
    13 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 30 | ಉದ್ಯೋಗಗಳಲ್ಲಿ ನಿರುತ್ಸಾಹ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 29 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡುತ್ತವೆ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 29 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 28 | ಸೂರ್ಯಕಾಂತಿ, ಶೇಂಗಾ ರೇಟ್….
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 days ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    4 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    4 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    5 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    Nerve weakness problem
    ನರ ದೌರ್ಬಲ್ಯ ಸಮಸ್ಯೆಯನ್ನು ನಿವಾರಿಸಲು ಈ ಆಹಾರ ಸೇವಿಸಿ
    11 hours ago
    Lemon seed
    ನಿಂಬೆ ಬೀಜವನ್ನು ನುಂಗುವುದು ಅಪಾಯಕಾರಿಯೇ? 
    12 hours ago
    Korean glass skin
    ಕೊರಿಯನ್ ಗ್ಲಾಸ್ ಸ್ಕಿನ್ ನಿಮ್ಮದಾಗಬೇಕಾ? ಹಾಗಾದ್ರೆ ಜಸ್ಟ್ ಹೀಗೆ ಮಾಡಿ ಸಾಕು
    1 day ago
    Turmeric leaf
    ಅರಿಶಿನದ ಎಲೆಗಳನ್ನು ಬಳಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ?
    2 days ago
    Washing hair with shampoo
    ಶಾಂಪೂಗೆ ಈ ಒಂದು ವಸ್ತು ಸೇರಿಸಿ ಕೂದಲು ತೊಳೆದರೆ, ಕೂದಲು ಉದುರುವುದು ಕಡಿಮೆಯಾಗುತ್ತದೆಯಂತೆ
    2 days ago
Reading: ಅ.3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಅರುಣ್ ಶ್ಯಾಮ್ ಉದ್ಘಾಟನೆ | 6 ಲಕ್ಷಕ್ಕೂ ಅಧಿಕ ಭಕ್ತರ ನಿರೀಕ್ಷೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಅ.3ರಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ | ಅರುಣ್ ಶ್ಯಾಮ್ ಉದ್ಘಾಟನೆ | 6 ಲಕ್ಷಕ್ಕೂ ಅಧಿಕ ಭಕ್ತರ ನಿರೀಕ್ಷೆ

News Desk Chitradurga News
Last updated: 1 October 2026 18:58
News Desk Chitradurga News
47 minutes ago
Share
Prabhanjan Surya, the South Zone Coordinator, spoke at the press conference
ಸುದ್ದಿಗೋಷ್ಠಿಯಲ್ಲಿ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಮಾತನಾಡಿದರು
SHARE

CHITRADURGA NEWS | 01 OCTOBER 2026

ಚಿತ್ರದುರ್ಗ: ಹಿಂದೂ ಮಹಾಗಣಪತಿ ಮಹೋತ್ಸವ ಯಾವುದೇ ಸ್ಪರ್ಧೆಯಲ್ಲ, ಬದಲಿಗೆ ಇಡೀ ಸಮಾಜ ಹಾಗೂ ರಾಜ್ಯದ ಜನತೆಯ ಸಾಮೂಹಿಕ ಉತ್ಸವವಾಗಿದೆ. ಶೋಭಾಯಾತ್ರೆಯು ಯಾವುದೇ ವಿಘ್ನಗಳಿಲ್ಲದೆ ಶಾಂತಿಯುತವಾಗಿ ಹಾಗೂ ವಿಜೃಂಭಣೆಯಿಂದ ನಡೆಯಲು ಸಾರ್ವಜನಿಕರು ಮತ್ತು ಮಾಧ್ಯಮಗಳ ಸಂಪೂರ್ಣ ಸಹಕಾರ ಅಗತ್ಯ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಂಯೋಜಕ ಪ್ರಭಂಜನ್ ಸೂರ್ಯ ಮನವಿ ಮಾಡಿದರು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ವಿಸರ್ಜನೆ | ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ

ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ನಡೆಯುತ್ತಿರುವ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ಗುರುವಾರ ಗಣಪತಿ ಸಭಾಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಶೋಭಾಯಾತ್ರೆಗೆ ಪೂರ್ವಭಾವಿಯಾಗಿ ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ ಯಶಸ್ವಿಯಾಗಿ ನಡೆಸಲಾಗಿದೆ. ದುರ್ಗಾ ಹೋಮ, ನವಗ್ರಹ ಹೋಮ, ಗಣಪತಿ ಹೋಮ ಹಾಗೂ ಮೃತ್ಯುಂಜಯ ಹೋಮಗಳು ನೆರವೇರಿವೆ. ಶೋಭಾಯಾತ್ರೆಯ ಹಿನ್ನೆಲೆಯಲ್ಲಿ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಕನಕ ವೃತ್ತ ಹಾಗೂ ಒನಕೆ ಓಬವ್ವ ವೃತ್ತಗಳಲ್ಲಿ ಕೇಸರಿ ಅಲಂಕಾರ ಮತ್ತು ದೀಪಾಲಂಕಾರದ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದು ತಿಳಿಸಿದರು.

ಬೆಳಿಗ್ಗೆ 10ಕ್ಕೆ ಶೋಭಾಯಾತ್ರೆ ಆರಂಭ

ಅ.3ರಂದು ಬೆಳಿಗ್ಗೆ 10 ಗಂಟೆಗೆ ಗಣಪತಿ ಪೆಂಡಾಲ್ ಎದುರಿನ ವೇದಿಕೆಯಿಂದ ಶೋಭಾಯಾತ್ರೆ ಆರಂಭವಾಗಲಿದೆ. ಹೈಕೋರ್ಟ್ ವಕೀಲ ಅರುಣ್ ಶ್ಯಾಮ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಿಶ್ವ ಹಿಂದೂ ಪರಿಷತ್ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಗೋಪಾಲ್ ಮುಖ್ಯ ಭಾಷಣ ಮಾಡಲಿದ್ದಾರೆ. ನಗರದ ವಿವಿಧ ಮಠಾಧೀಶರು ಹಾಗೂ ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.

ಇದನ್ನೂ ಓದಿ: ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ

ಶೋಭಾಯಾತ್ರೆಯಲ್ಲಿ ತಮಟೆ, ನಾಸಿಕ್ ಢೋಲ್ ಸೇರಿದಂತೆ 6ರಿಂದ 8 ಕಲಾತಂಡಗಳು ಭಾಗವಹಿಸಲಿವೆ. ಗಾಂಧಿ ವೃತ್ತದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಮ್ಮುಖದಲ್ಲಿ ವಿಶೇಷ ಆರತಿ ಹಾಗೂ ಕನಕ ವೃತ್ತದಲ್ಲಿ ಬೃಹತ್ ದೀಪಾರಾಧನೆ ಮತ್ತು ದೀಪಾಲಂಕಾರ ನಡೆಯಲಿದೆ ಎಂದರು.

ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಶೋಭಾಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಜಾನಪದ ಕಲಾ ತಂಡಗಳು, ನಾಸಿಕ್ ಢೋಲ್ ಹಾಗೂ ಸ್ಥಳೀಯ ಕಲಾವಿದರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಿತಿ ಡಿಜೆ ಬಳಸುವುದಿಲ್ಲ. ಸಾಂಪ್ರದಾಯಿಕವಾಗಿ ಹಾಗೂ ನಿಯಮಾವಳಿಗಳಿಗೆ ಅನುಗುಣವಾಗಿ ಸ್ಪೀಕರ್‌ಗಳನ್ನು ಬಳಸಲಾಗುವುದು ಎಂದು ಪ್ರಭಂಜನ್ ಸೂರ್ಯ ಸ್ಪಷ್ಟಪಡಿಸಿದರು.

ಅ.3ರಂದು ಶುಕ್ರವಾರ ರಜೆ ಇರುವ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 6 ಲಕ್ಷಕ್ಕೂ ಅಧಿಕ ಭಕ್ತರು ಗ್ರಾಮಗಳಿಂದ ಟ್ರ್ಯಾಕ್ಟರ್‌ಗಳು ಹಾಗೂ ವಿವಿಧ ವಾಹನಗಳಲ್ಲಿ ಚಿತ್ರದುರ್ಗಕ್ಕೆ ಆಗಮಿಸುವ ನಿರೀಕ್ಷೆಯಿದೆ. ಭಕ್ತರಿಗೆ ಅನ್ನಪ್ರಸಾದ ವಿತರಿಸಲು ಆಯೋಜಕರೊಂದಿಗೆ ಸಭೆ ನಡೆಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ವಿವಿಧೆಡೆ ಪ್ರಸಾದ ವ್ಯವಸ್ಥೆ

ಹಿಂದೂ ಮಹಾಗಣಪತಿ ಸಮಿತಿ ಅಧ್ಯಕ್ಷ ಜಿ.ಆರ್.ಸುದೀರ್ ಮಾತನಾಡಿ, ಗಣೇಶೋತ್ಸವ ಯಶಸ್ವಿಯಾಗಿ ನಡೆಯುತ್ತಿದ್ದು, ಪ್ರತಿದಿನ ಸಾವಿರಾರು ಭಕ್ತರು ಆಗಮಿಸಿ ಗಣಪತಿ ದರ್ಶನ ಪಡೆಯುತ್ತಿದ್ದಾರೆ. ಶೋಭಾಯಾತ್ರೆಯ ಅಂಗವಾಗಿ ನಗರದ ವಿವಿಧೆಡೆ ಭಕ್ತರು ಹಾಗೂ ಸಂಘಟನೆಗಳ ವತಿಯಿಂದ ಪ್ರಸಾದ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?

ಮದಕರಿ ವೃತ್ತ, ಕಾರು ಸ್ಟ್ಯಾಂಡ್, ಮಹಾವೀರ ಸರ್ಕಲ್‌ (ಜೈನ್ ಮಂದಿರದ ಬಳಿ), ಬರಿಗೇರಮ್ಮನ ದೇವಸ್ಥಾನ ಹಾಗೂ ವಿವಿಧ ಕಲ್ಯಾಣ ಮಂಟಪಗಳಲ್ಲಿ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಿಂದ ಅಗತ್ಯ ಸಹಕಾರ ಮತ್ತು ನಿಯಮಾವಳಿಗಳ ಬೆಂಬಲ ದೊರೆತಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಉಪಾಧ್ಯಕ್ಷ ಅಶೋಕ್ ಕುಮಾರ್, ಸಲಹಾ ಸಮಿತಿ ಸದಸ್ಯರಾದ ಶರಣ್ ಕುಮಾರ್, ಜಿ.ಎಂ.ಸುರೇಶ್, ಸಂದೀಪ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article Huge bike rally in the city ಹಿಂದೂ ಮಹಾಗಣಪತಿ ವಿಸರ್ಜನೆ | ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ
Next Article ಎಸ್‌ಪಿ ಕುಶಾಲ್ ಚೌಕ್ಸೆ ಹಿಂದೂ ಮಹಾಗಣಪತಿ ವಿಸರ್ಜನೆಗೆ 4 ಸಾವಿರ ಪೊಲೀಸರ ಭಾರಿ ಬಂದೋಬಸ್ತ್
Leave a Comment

Leave a Reply Cancel reply

Your email address will not be published. Required fields are marked *

ಬೆಸ್ಕಾ
ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ | ಕಟ್ಟಡಗಳ ಮೇಲೇರದಂತೆ ಬೆಸ್ಕಾಂ ಎಚ್ಚರಿಕೆ
ಮುಖ್ಯ ಸುದ್ದಿ
ಎಸ್‌ಪಿ ಕುಶಾಲ್ ಚೌಕ್ಸೆ
ಹಿಂದೂ ಮಹಾಗಣಪತಿ ವಿಸರ್ಜನೆಗೆ 4 ಸಾವಿರ ಪೊಲೀಸರ ಭಾರಿ ಬಂದೋಬಸ್ತ್
ಮುಖ್ಯ ಸುದ್ದಿ
Huge bike rally in the city
ಹಿಂದೂ ಮಹಾಗಣಪತಿ ವಿಸರ್ಜನೆ | ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ | ಅಕ್ಟೋಬರ್ 01 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up