CHITRADURGA NEWS | 01 OCTOBER 2026
ಚಿತ್ರದುರ್ಗ: ನಗರದ ಬಿ.ಡಿ. ರಸ್ತೆಯ ಶ್ರೀ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ವಿಗ್ರಹದ ವಿಸರ್ಜನಾ ಮೆರವಣಿಗೆಯು ಅಕ್ಟೋಬರ್ 3 ಶನಿವಾರ ನಡೆಯಲಿದ್ದು, ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಮೆರವಣಿಗೆ ಸಾಗುವ ಮಾರ್ಗದಲ್ಲಿರುವ ಕಟ್ಟಡ ಹಾಗೂ ಅಂಗಡಿಗಳ ಮೇಲೆ ಜನರು ಹತ್ತದಂತೆ ‘ಬೆಸ್ಕಾಂ‘ ಮುನ್ನೆಚ್ಚರಿಕೆ ನೀಡಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ವಿಸರ್ಜನೆಗೆ 4 ಸಾವಿರ ಪೊಲೀಸರ ಭಾರಿ ಬಂದೋಬಸ್ತ್
ಗಣೇಶ ವಿಸರ್ಜನಾ ಮೆರವಣಿಗೆಯು ಚಳ್ಳಕೆರೆ ಗೇಟ್ನಿಂದ ಪ್ರಾರಂಭವಾಗಿ ಬಿ.ಡಿ. ರಸ್ತೆ, ಗಾಂಧಿ ವೃತ್ತ, ಹೊಳಲ್ಕೆರೆ ರಸ್ತೆ, ಗಾಯತ್ರಿ ಸರ್ಕಲ್, ಶಾರದಮ್ಮ ಕಲ್ಯಾಣ ಮಂಟಪ ಹಾಗೂ ಕನಕ ವೃತ್ತದ ಮುಖಾಂತರ ಚಂದ್ರವಳ್ಳಿವರೆಗೆ ಸಾಗಲಿದೆ.
ಮೆರವಣಿಗೆ ಸಾಗುವ ರಸ್ತೆಯ ಬದಿಯಲ್ಲಿ ವಿದ್ಯುತ್ ಮಾರ್ಗಗಳು (ಲೈನ್ಗಳು) ಹಾದುಹೋಗಿವೆ.
ಸಾರ್ವಜನಿಕರು ಮೆರವಣಿಗೆ ವೀಕ್ಷಿಸಲು ರಸ್ತೆ ಬದಿಯ ಮನೆ, ಅಂಗಡಿ-ಮುಂಗಟ್ಟುಗಳ ಛಾವಣಿ (ಮೇಲ್ಚಾವಣಿ) ಏರಿದಾಗ, ಆಕಸ್ಮಿಕವಾಗಿ ವಿದ್ಯುತ್ ತಂತಿಗಳನ್ನು ಸ್ಪರ್ಶಿಸಿ ಅನಾಹುತ ಸಂಭವಿಸುವ ಸಾಧ್ಯತೆಯಿರುತ್ತದೆ. ಆದ್ದರಿಂದ ಸಾರ್ವಜನಿಕರು ಕಟ್ಟಡಗಳ ಮೇಲೆ ಹತ್ತದಂತೆ ಮನೆ ಹಾಗೂ ಅಂಗಡಿ ಮಾಲೀಕರು ಸೂಕ್ತ ನಿಗಾ ವಹಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.
ಇದನ್ನೂ ಓದಿ: ಹಿಂದೂ ಮಹಾಗಣಪತಿ ವಿಸರ್ಜನೆ | ನಗರದಲ್ಲಿ ಬೃಹತ್ ಬೈಕ್ ರ್ಯಾಲಿ
ಒಂದು ವೇಳೆ ಕಟ್ಟಡಗಳ ಮೇಲೆ ಸಾರ್ವಜನಿಕರು ಹತ್ತಿ ಯಾವುದೇ ಅಹಿತಕರ ಅಥವಾ ವಿದ್ಯುತ್ ಅನಾಹುತ ಸಂಭವಿಸಿದಲ್ಲಿ, ಅದರಿಂದಾಗುವ ಪರಿಣಾಮಗಳಿಗೆ ಸಂಬಂಧಿಸಿದ ಮನೆ ಹಾಗೂ ಅಂಗಡಿ ಮಾಲೀಕರೇ ನೇರ ಹೊಣೆಗಾರರಾಗಲಿದ್ದಾರೆ ಎಂದು ಬೆಸ್ಕಾಂ ನಗರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್ಚರಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

