CHITRADURGA NEWS | 13 SEPTEMBER 2026
ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ನಡೆಯುತ್ತಿರುವ ಹಿಂದೂ ಮಹಾಗಣಪತಿ ಮಹೋತ್ಸವದ ಅಂಗವಾಗಿ ಸೆ.14ರಂದು ಹಿಂದೂ ಮಹಾಗಣಪತಿ ಮೂರ್ತಿಯ ಪ್ರತಿಷ್ಠಾಪನೆ ನೆರವೇರಲಿದೆ.
ಇದನ್ನೂ ಓದಿ: ಐಮಂಗಲ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಸಚಿವ ಮುನಿಯಪ್ಪ ಭೇಟಿ | ವಸತಿ ಶಾಲೆಗಳಲ್ಲಿ ಓದಿ ಉನ್ನತ ಸಾಧನೆ ಮಾಡಿ
ಮುರುಘರಾಜೇಂದ್ರ ಕ್ರೀಡಾಂಗಣದ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ)ದಲ್ಲಿ ಸೋಮವಾರ ಬೆಳಿಗ್ಗೆ 9.18ರಿಂದ 10.45ರವರೆಗೆ ನಿಗದಿಯಾಗಿರುವ ಶುಭ ಮುಹೂರ್ತದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ್ ತಿಳಿಸಿದ್ದಾರೆ.
ಮಹೋತ್ಸವದ ಅಂಗವಾಗಿ ಆ.26ರಂದು ಗೋಪೂಜೆ ಹಾಗೂ ಧ್ವಜಪೂಜೆ ನೆರವೇರಿಸಲಾಗಿದ್ದು, ಸೆ.9ರಂದು ಹಿಂದೂ ಮಹಾಗಣಪತಿಯ ಪುರಪ್ರವೇಶ ಕಾರ್ಯಕ್ರಮ ನಡೆಸಲಾಗಿದೆ. ಸೆ.14ರಂದು ಪ್ರತಿಷ್ಠಾಪನೆ ಬಳಿಕ ಅ.3ರಂದು ವೈಭವದ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.
ಚಿತ್ರದುರ್ಗ ನಗರ ಸೇರಿದಂತೆ ಚಳ್ಳಕೆರೆ, ಹೊಳಲ್ಕೆರೆ, ಹಿರಿಯೂರು, ಹೊಸದುರ್ಗ, ಭರಮಸಾಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿಯೂ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಸಹಯೋಗದಲ್ಲಿ ಹಿಂದೂ ಮಹಾಗಣಪತಿ ಉತ್ಸವ ನಡೆಯಲಿದೆ. ಆಯಾ ತಾಲೂಕುಗಳ ಶೋಭಾಯಾತ್ರೆಗಳು ಚಿತ್ರದುರ್ಗದ ಮುಖ್ಯ ಶೋಭಾಯಾತ್ರೆಗೂ ಮುನ್ನವೇ ಮುಕ್ತಾಯಗೊಳ್ಳಲಿವೆ.
ಇದನ್ನೂ ಓದಿ: ಶಾಂತಿಯುತ ಗೌರಿ ಗಣೇಶ ಹಬ್ಬ ಆಚರಿಸಲು ಪೊಲೀಸ್ ಇಲಾಖೆ ಮನವಿ
ದೇಶದ ಎರಡನೇ ಅತಿ ದೊಡ್ಡ ಹಿಂದೂ ಮಹಾಗಣಪತಿ ಉತ್ಸವ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಕಾರ್ಯಕ್ರಮವನ್ನು ಹಲವು ವರ್ಷಗಳಿಂದ ವೈಭವದಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಚನ್ನಕೇಶವ್ ಮನವಿ ಮಾಡಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

