ಮೊಳಕಾಳ್ಮೂರು
Hindu Maha Ganapati: ಹಿಂದೂ ಮಹಾ ಗಣಪತಿ ಶೋಭಾಯಾತ್ರೆ | ಸಿಂಗಾರಗೊಂಡ ಮುಖ್ಯರಸ್ತೆ | ಪೊಲೀಸ್ ಬಿಗಿ ಭದ್ರತೆ
CHITRADURGA NEWS | 15 SEPTEMBER 2024
ಮೊಳಕಾಲ್ಮೂರು: ಮೊಳಕಾಲ್ಮುರಿನಲ್ಲಿ ಭಾನುವಾರ ಹಿಂದೂ ಮಹಾ ಗಣಪತಿ ಶೋಭಾಯಾತ್ರೆ ನಡೆಯಲಿದೆ. ಈಗಾಗಲೇ ಮುಖ್ಯರಸ್ತೆ ಕೇಸರಿ ಬಂಟಿಗ್ಸ್, ತೋರಣಗಳಿಂದ ಸಿಂಗಾರಗೊಂಡಿದ್ದು, ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಮೊಳಕಾಲ್ಮುರು ಪಟ್ಟಣದ ಬಿಇಒ ಕಚೇರಿ ಸ್ಥಳೀಯ ಮಹಾ ಗಣಪತಿ ಸೇವಾ ಸಮಿತಿ ಹಿಂದೂ ಮಹಾಗಣಪತಿ ಪ್ರತಿಷ್ಠಾಪಿಸಿದ್ದು, ಭಾನುವಾರ ಶೋಭಾಯಾತ್ರಯೊಂದಿಗೆ ವಿಸರ್ಜನೆ ಕಾರ್ಯ ನಡೆಯಲಿದೆ.
ಕಳೆದ 9 ದಿನಗಳಿಂದ ವಿಶೇಷ ಪೂಜೆ, ಪ್ರಸಾದ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಶೋಭಾಯಾತ್ರೆ ಬಗ್ಗೆ ಜಾಗೃತಿ ಮೂಡಿಸಲು ಶನಿವಾರ ಜಾಥಾ ಹಮ್ಮಿಕೊಳ್ಳಲಾಗಿತ್ತು. ನೂರಾರು ದ್ವಿಚಕ್ರ ವಾಹನಗಳು ಇದರಲ್ಲಿ ಭಾಗವಹಿಸಿದ್ದವು.
ಕ್ಲಿಕ್ ಮಾಡಿ ಓದಿ: ದಿನ ಭವಿಷ್ಯ | ಸೆಪ್ಟೆಂಬರ್ 15 | ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ , ಪ್ರಯಾಣದ ವೇಳೆ ಎಚ್ಚರ
ಭಾನುವಾರ ಮಧ್ಯಾಹ್ನ 2 ಗಂಟೆಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಶೋಭಾಯಾತ್ರೆಗೆ ಚಾಲನೆ ನೀಡಲಿದ್ದಾರೆ. ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವ ಬಿ. ಶ್ರೀರಾಮುಲು, ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಭಾಗವಹಿಸಲಿದ್ದಾರೆ. ವಿವಿಧ ಕಲಾತಂಡಗಳ ವ್ಯವಸ್ಥೆ ಮಾಡಲಾಗಿದೆ. ಶಾಂತಿಯುತ ಶೋಭಾಯಾತ್ರೆ ನಡೆಸುವ ನಿಟ್ಟಿನಲ್ಲಿ 130 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.
ತಾಲ್ಲೂಕಿನ ರಾಂಪುರದ ಕುಬೇರ ನಗರದಲ್ಲಿ ಸ್ಥಳೀಯ ಹಿಂದೂ ಮಹಾಗಣಪತಿ ಹಾಗೂ ವಿನಾಯಕ ಮಿತ್ರ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿರುವ ಮಹಾ ಗಣಪತಿಯ ಶೋಭಾಯಾತ್ರೆ ಸೆ.15 ರಂದು ನಡೆಯಲಿದೆ.
ಭಾನುವಾರ 12ಕ್ಕೆ ಕುಬೇರ ನಗರದಿಂದ ಆರಂಭವಾಗುವ ಮೆರವಣಿಗೆ ಮುಖ್ಯಬೀದಿಗಳಲ್ಲಿ ಸಂಚರಿಸಲಿದೆ. ಕೆರೆ ಕೊಂಡಾಪುರ ಬಳಿಯ ಕೃಷಿ ಹೊಂಡದಲ್ಲಿ ಮೂರ್ತಿ ವಿಸರ್ಜನೆ ಮಾಡಲಾಗುವುದು. ಮೆರವಣಿಗೆಯಲ್ಲಿ ವೀರಗಾಸೆ, ಗೊಂಬೆ ಕುಣಿತ, ಚಂಡೆಮೇಳ ಸೇರಿದಂತೆ ಹಲವು ಕಲಾತಂಡಗಳು ಭಾಗವಹಿಸಲಿವೆ.