By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    11 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    11 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    12 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    18 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
    12 minutes ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 day ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    19 minutes ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    23 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    1 day ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
Reading: ಹಿಂದೂ ಮಹಾಗಣಪತಿ ಶೊಭಾಯಾತ್ರೆಗೆ ಬಂದೋಬಸ್ತ್ | 151 ಕಡೆ ಸಿಸಿ ಟಿವಿ ಕ್ಯಾಮರಾ | 67 ಕ್ಯಾಮರಾಮೆನ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಿಂದೂ ಮಹಾಗಣಪತಿ ಶೊಭಾಯಾತ್ರೆಗೆ ಬಂದೋಬಸ್ತ್ | 151 ಕಡೆ ಸಿಸಿ ಟಿವಿ ಕ್ಯಾಮರಾ | 67 ಕ್ಯಾಮರಾಮೆನ್

News Desk Chitradurga News
Last updated: 11 September 2025 20:05
News Desk Chitradurga News
12 months ago
Share
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE

CHITRADURGA NEWS | 11 SEPTEMBER 2025

ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಇದೇ ಸೆ.13ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಮತ್ತು ಶೋಭಾಯಾತ್ರೆಗೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದ್ದು, 3869 ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ 30 ವಿಶೇಷ ತುಕಡಿಗಳ ನಿಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ಕಾರವಲ್ಲ, ವಿರೋಧ ಪಕ್ಷಗಳು ದಿವಾಳಿ ಆಗಿವೆ | ವಿನಯ್ ಕುಮಾರ್ ಸೊರಕೆ

ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ವತಿಯಿಂದ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಚಿತ್ರದುರ್ಗ ನಗರದಲ್ಲಿ ವ್ಯಾಪಕವಾದ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಚಿತ್ರದುರ್ಗ ಜಿಲ್ಲೆ ಹಾಗೂ ಬೆಂಗಳೂರು ನಗರ ಸೇರಿದಂತೆ ಹೊರಜಿಲ್ಲೆಗಳಿಂದ ಅಧಿಕಾರಿಗಳು ಮತ್ತು ಸಿಬ್ಬಂದಿ ಸೇರಿದಂತೆ 9 ಎಎಸ್‍ಪಿ, 28 ಡಿಎಸ್‍ಪಿ, 78 ಪಿಐ, 175 ಪಿಎಸ್‍ಐ, 401 ಎಎಸ್‍ಐ, 2678 ಹೆಚ್.ಸಿ, ಪಿಸಿ, 500 ಹೋಮ್ ಗಾರ್ಡ್ ಹಾಗೂ 16 ತುಕಡಿಗಳು ಕರ್ನಾಟಕ ರಾಜ್ಯ ಸಶಸ್ತ್ರ ಮೀಸಲು ಪಡೆ ಹಾಗೂ 14 ತುಕಡಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮತ್ತು ರ್ಯಾಪಿಡ್ ಅಕ್ಷನ್ ಪೋಸ್ಟ್ ನಿಯೋಜಿಸಲು ಕ್ರಮಕೈಗೊಳ್ಳಾಗಿದೆ.

ಬಂದೋಬಸ್ತ್ ಕರ್ತವ್ಯದ ಪ್ರಯುಕ್ತ ನಗರದಾದ್ಯಂತ ಪ್ರಮುಖ 151 ಸ್ಥಳಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳು ಮತ್ತು 26 ಕಣ್ಗಾವಲು ವೇದಿಕೆ (Watch Tower) ಗಳನ್ನು ನಿರ್ಮಿಸಲಾಗಿದ್ದು, ಮೆರವಣಿಗೆ ಮಾರ್ಗದಲ್ಲಿನ ವೀಡಿಯೋ ಚಿತ್ರೀಕರಣಕ್ಕೆಂದು 67 ವಿಡಿಯೋ ಕ್ಯಾಮೆರಾಗಳೊಂದಿಗೆ ಸಿಬ್ಬಂದಿಯವರನ್ನು ನಿಯೋಜಿಸಲಾಗಿರುತ್ತದೆ. 

ಶೋಭಾಯಾತ್ರೆ ಸಾಗುವ ಮಾರ್ಗದಲ್ಲಿನ ಎತ್ತರದ ಕಟ್ಟಡಗಳ ಮೇಲೆ 49 ಸ್ಕೈ ಸೆಂಟ್ರಿಗಳನ್ನು ನಿಯೋಜಿಸಲಾಗಿರುತ್ತದೆ. ಅಲ್ಲದೇ 08 ದ್ರೋಣ್ ಕ್ಯಾಮೆರಾಗಳನ್ನು ನಿಯೋಜಿಸಲಾಗಿರುತ್ತದೆ.  

ಶೋಭಾಯಾತ್ರೆ ಮಾರ್ಗದಲ್ಲಿ ಅಳವಡಿಸಲಾಗಿರುವ ಸಿ.ಸಿ.ಕ್ಯಾಮೆರಾಗಳಲ್ಲಿನ ದೃಶ್ಯಾವಳಿಗಳನ್ನು ದಿನದ 24 ಗಂಟೆಗಳ ಕಾಲ ಒಂದೇ ಕಡೆ ವೀಕ್ಷಿಸುವ ಸಲುವಾಗಿ ಎಸ್.ಜೆ.ಎಂ. ಡೆಂಟಲ್ ಕಾಲೇಜ್‍ನಲ್ಲಿ ಕಮಾಂಡ್ ಸೆಂಟರ್ ತೆರೆಯಲಾಗಿರುತ್ತದೆ.  

ಇದನ್ನೂ ಓದಿ: ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ | ವಿವಿಧ ಕೋರ್ಸ್ ಗೆ ಅರ್ಜಿ ಅಹ್ವಾನ 

ಬಂದೋಬಸ್ತ್‍ನ ಸೆಕ್ಟರ್ ಅಧಿಕಾರಿಗಳ ಸಂವಹನಕ್ಕಾಗಿ ಹೆಚ್ಚುವರಿ ಕಂಟ್ರೋಲ್ ರೂಂ ತೆರೆಯಲಾಗಿರುತ್ತದೆ. ಶೋಭಾಯಾತ್ರೆಗೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಂಬಂಧವಾಗಿ 03 ಸೆಕ್ಟರಲ್ ಮ್ಯಾಜಿಸ್ಟ್ರೇಟ್‍ಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ.

ಶೋಭಾಯಾತ್ರೆಯ ಹಿನ್ನಲೆಯಲ್ಲಿ ಸೆ.13ರಂದು ಚಿತ್ರದುರ್ಗ ನಗರದಲ್ಲಿ ಸಂಚರಿಸಲಿರುವ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

ಪಾರ್ಕಿಂಗ್ ವ್ಯವಸ್ಥೆ: ಶಿವಮೊಗ್ಗ ಮತ್ತು ಹೊಳಲ್ಕೆರೆಯಿಂದ ಬರುವ ವಾಹನಗಳಿಗೆ ಚಂದ್ರವಳ್ಳಿ ಕ್ರಾಸ್ ಮೈದಾನ ಮತ್ತು ಎಸ್.ಜೆ.ಎಂ ಕಾಲೇಜ್ ಮುಂಭಾಗದ ಮೈದಾನ ಮತ್ತು ಧವಳಗಿರಿ ಬಡಾವಣೆಯ ಡಬಲ್ ರೋಡ್‍ನಲ್ಲಿ ವಾಹನಗಳ ನಿಲುಗಡೆ ವ್ಯವಸ್ಥೆ ಮಾಡಿರುತ್ತದೆ. ದಾವಣಗೆರೆ ಕಡೆಯಿಂದ ಬರುವ ವಾಹನಗಳಿಗೆ ಎ.ಪಿ.ಎಂ.ಸಿ ಯಾರ್ಡ್‍ನಲ್ಲಿ ವ್ಯವಸ್ಥೆ ಮಾಡಿರುತ್ತದೆ. ಎನ್.ಹೆಚ್-13 ರಸ್ತೆಯಿಂದ ಬರುವ ವಾಹನಗಳಿಗೆ ಪೊಲೀಸ್ ಸಮುದಾಯ ಭವನದ ಮುಂದಿನ ಮೈಧಾನದಲ್ಲಿ ನಿಲುಗಡೆ ವ್ಯವಸ್ಥೆ ಮಾಡಿರುತ್ತದೆ.

ಇದನ್ನೂ ಓದಿ: ಅರಣ್ಯ ಹುತಾತ್ಮರ ದಿನಾಚರಣೆ | ಹಸಿರು ಯೋಧರು ಕೂಡ ನಮ್ಮ ರಕ್ಷಕರು | ನ್ಯಾ.ರೋಣ ವಾಸುದೇವ್

 ಜಿಲ್ಲಾಸ್ಪತ್ರೆಗೆ ಬರುವಂತಹ ಅಂಬ್ಯೂಲೆನ್ಸ್‍ಗಳು ತುರುವನೂರು ರಸ್ತೆ ಮುಖಾಂತರ ಹಾಗೂ ಚಳ್ಳಕೆರೆ ಕ್ರಾಸ್, ಸರಸ್ವತಿಪುರಂ ಮಾರ್ಗವಾಗಿ ಜೋಗಿಮಟ್ಟಿ ರಸ್ತೆ ಮುಖಾಂತರ ಸಂಚರಿಸಲು ವ್ಯವಸ್ಥೆ ಮಾಡಿರುತ್ತದೆ. ತುರ್ತು ಸಂದರ್ಭಕ್ಕೆಂದು ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ಮಾರ್ಗದ 06 ಕಡೆಗಳಲ್ಲಿ ಆಗ್ನಿಶಾಮಕ ವಾಹನಗಳನ್ನು ಸಿಬ್ಬಂದಿಯವರೊಂದಿಗೆ ನಿಯೋಜಿಸಲಾಗಿರುತ್ತದೆ. 

ಶೋಭಾಯಾತ್ರೆಗೆ ಸಮಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಂಬಂಧವಾಗಿ ನಗರದೊಳಗೆ ಪ್ರವೇಶಿಸುವ ವಾಹನಗಳನ್ನು ಚೆಕ್ ಮಾಡುವ ಸಲುವಾಗಿ ನಗರದ ಹೊರವಲಯದ 09 ಕಡೆಗಳಲ್ಲಿ ಚೆಕ್‍ಪೋಸ್ಟ್‍ಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿರುತ್ತದೆ.

 ಮೊಬೈಲ್ ಪೆಟ್ರೋಲಿಂಗ್‍ಗೆ ಸಂಬಂಧಿಸಿದಂತೆ 18 ಸೆಕ್ಟರ್‍ಗಳಾಗಿ ವಿಂಗಡಿಸಿ ಭದ್ರತೆಯನ್ನು ಕೈಗೊಳ್ಳಲಾಗಿರುತ್ತದೆ. ದಿನಾಂಕ: 12.09.2025 ರಂದು ಸಂಜೆ 6.00 ಗಂಟೆಯಿಂದ ದಿನಾಂಕ: 13.09.2025 ರಂದು ಮಧ್ಯರಾತ್ರಿ 12-00 ಗಂಟೆಯವರೆಗೆ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಮತ್ತು ಚಳ್ಳಕೆರೆ ತಾಲ್ಲೂಕಿನದ್ಯಾಂತ ಎಲ್ಲ ಮದ್ಯ ಮಾರಾಟ ನಿಷೇಧಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.

ಡಿ.ಜೆ. ಬಳಕೆ, ಪೇಪರ್ ಬ್ಲಾಸ್ಟಿಂಗ್, ಮತ್ತು ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ. ಶೋಭಾಯಾತ್ರೆ ಸಮಯದಲ್ಲಿ ಡಿ.ಜೆ.ಬಳಕೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ. ಶೋಭಾಯಾತ್ರೆ ಮಾರ್ಗದಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣದಲ್ಲಿ 20 ವರ್ಷ ಜೈಲು ಶಿಕ್ಷೆ | ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ

ವಿಸರ್ಜನಾ ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡಿಂಗ್ ವ್ಯವಸ್ಥೆ ಕೈಗೊಂಡಿದ್ದು, ಸ್ಥಳದಲ್ಲಿ ಅಗ್ನಿಶಾಮಕದಳದ ವಾಹನವನ್ನು ಸಿಬ್ಬಂದಿಯವರೊಂದಿಗೆ ಕಾಯ್ದಿರಿಸಲು ಕ್ರಮ ಕೈಗೊಂಡಿರುತ್ತದೆ. ಸಾಮಾಜಿಕ ಜಾಲತಾಣದ ಮೇಲೆ ನಿಗಾವಹಿಸಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ಧಿ, ಚಿತ್ರಗಳು ಇತರೆ ವಿವರಗಳನ್ನು ಪೋಸ್ಟ್ ಮಾಡುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು.  

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ 509 ರೌಡಿ ಅಸಾಮಿಗಳು, 63 ಮತೀಯ ಗೂಂಡಾ ಅಸಾಮಿಗಳು, ಸಮಾಜಘಾತುಕ ವ್ಯಕ್ತಿಗಳ ಭದ್ರತಾ ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಂಡಿದ್ದು, ಈ ವ್ಯಕ್ತಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ.

ಶೋಭಾಯಾತ್ರೆಯಲ್ಲಿ ಹೆಚ್ಚಿನ ಜನಸಂದಣಿ ಸೇರುವುದರಿಂದ, ಯಾವುದೇ ಕಾಲ್ತುಳಿತ ಇನ್ನಿತರೆ ಅವಘಡಗಳು ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಶೋಭಾಯಾತ್ರೆ ಸಾಗುವ ಮಾರ್ಗದ 05 ಸ್ಥಳಗಳಲ್ಲಿ (Emergency Response Team) ಎಸ್.ಡಿ.ಅರ್.ಎಫ್ ತಂಡವನ್ನು ಸನ್ನದ್ಧವಾಗಿಡಲಾಗಿದೆ.  

05 ಕಡೆಗಳಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳು, 06 ಕಡೆಗಳಲ್ಲಿ ಪೊಲೀಸ್ ಸಹಾಯ ವಾಣಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿರುತ್ತದೆ. ವೈದ್ಯರು, ಪೊಲೀಸ್ ಅಧಿಕಾರಿಗಳು, ಬೆಸ್ಕಾಂ, ರೆಡ್ ಕ್ರಾಸ್, ಗೃಹ ರಕ್ಷಕ, ಅಗ್ನಿಶಾಮಕ ದಳ ಮತ್ತು ನಗರಸಭೆಯ ತರಬೇತಿ ಹೊಂದಿದ ಸಿಬ್ಬಂದಿಯವರನ್ನು ತುರ್ತು ಸ್ವಂದನ ತಂಡಗಳಲ್ಲಿ ನಿಯೋಜಿಸಿದೆ. 

ಇದನ್ನೂ ಓದಿ: ಚಿತ್ರದುರ್ಗ ನಗರಸಭೆ | ಸೆ.12ರಂದು ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ

ಮೆರವಣಿಗೆ ಸಾಗುವ ಮಾರ್ಗದ ಇಕ್ಕೆಲಗಳಲ್ಲಿರುವ ಸಾರ್ವಜನಿಕ ವಾಸ ಸ್ಥಳಗಳು (Bylane) ಗಳಲ್ಲಿ ಬಂದೋಬಸ್ತ್‍ಗಾಗಿ ಸಿಬ್ಬಂದಿಯವರನ್ನು ನೇಮಿಸಲಾಗಿರುತ್ತದೆ. ಮೆರವಣಿಗೆ ಸಾಗುವ ಮಾರ್ಗದ ಇಕ್ಕೆಲಗಳಲ್ಲಿನ ಶಿಥಿಲ ಕಟ್ಟಡಗಳ ಮೇಲೆ ಜನರು ನಿಂತು ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಕಟ್ಟಡಗಳ ಮಾಲೀಕರಿಗೆ ನೋಟೀಸ್ ನೀಡಲಾಗಿದೆ.

ನಗರದ ಎಲ್ಲಾ ಧಾರ್ಮಿಕ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಮೆರವಣಿಗೆ ಸಮಯದಲ್ಲಿ ಗಲಾಟೆಯಲ್ಲಿ ತೊಡಗುವಂತಹ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಅಂತಹ ವ್ಯಕ್ತಿಗಳನ್ನು ಪಿಕಪ್ ಮಾಡಲು 05 ಪಿಕಪ್ ಸ್ವ್ಕಾಡ್‍ಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. 

ತುರ್ತು ಸಂದರ್ಭಕ್ಕೆಂದು ಮುಂಜಾಗ್ರತಾ ಕ್ರಮವಾಗಿ ಮೆರವಣಿಗೆ ಮಾರ್ಗದ 10 ಕಡೆಗಳಲ್ಲಿ ಅಂಬ್ಯೂಲೆನ್ಸ್‍ಗಳನ್ನು ನಿಯೋಜಿಸಲಾಗಿರುತ್ತದೆ.

 ನಗರದ ಜಿಲ್ಲಾಸ್ಪತ್ರೆ ಮತ್ತು ಬಸವೇಶ್ವರ ಅಸ್ಪತ್ರೆಗಳಲ್ಲಿ ತಜ್ಞ ವೈದ್ಯರನ್ನು ಒಳಗೊಂಡ ತಂಡಗಳು ಹಾಗೂ 30 ಹಾಸಿಗೆಗಳನ್ನು ಕಾಯ್ದಿರಿಸಲು ಕ್ರಮ ಕೈಗೊಂಡಿರುತ್ತದೆ. 

ಮೆರವಣಿಗೆ ಮಾರ್ಗದಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿಧ ತಂಡಗಳಲ್ಲಿ ನುರಿತ 15 ವೈದ್ಯರನ್ನು ನಿಯೋಜಿಸಲಾಗಿರುತ್ತದೆ. ಸಾರ್ವಜನಿಕರಲ್ಲಿ ಪೊಲೀಸ್ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿ ಕೊಡದೇ ಸಾಮಾಜಿಕ ಜಾಲತಾಣಗಳಲ್ಲಿ ಬಿಡುವ ಸಂದೇಶಗಳಿಗೆ ಗಮನ ಕೊಡದೇ ಶಾಂತಿಯುತವಾಗಿ ಗಣೇಶ ಉತ್ಸವವನ್ನು ಆಚರಿಸಲು ಕೋರಲಾಗಿದೆ.  

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 11 | ಹತ್ತಿ ರೇಟ್ ಎಷ್ಟಿದೆ? 

ಶಾಂತಿ ಕದಡುವ ಬಗ್ಗೆ ಮಾಹಿತಿ ಇದ್ದರೆ, ಇ.ಅರ್.ಎಸ್.ಎಸ್. ದೂರವಾಣಿ ಸಂಖ್ಯೆ:112, ಜಿಲ್ಲಾ ನಿಸ್ತಂತು ಕೇಂದ್ರ ಮೊ.ನಂ: 9480803100 ಮತ್ತು ದೂರವಾಣಿ ಸಂಖ್ಯೆ: 08194-222782 ಗಳಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

Share This Article
Facebook Email Print
Previous Article ಸರ್ಕಾರವಲ್ಲ, ವಿರೋಧ ಪಕ್ಷಗಳು ದಿವಾಳಿ ಆಗಿವೆ | ವಿನಯ್ ಕುಮಾರ್ ಸೊರಕೆ
Next Article ಹೊಸದಾಗಿ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ 
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ಸೆಪ್ಟೆಂಬರ್ 07 | ಉದ್ಯೋಗದಲ್ಲಿ ಅಧಿಕಾರಿಗಳಿಂದ ಬೆಂಬಲ, ಅರೋಗ್ಯದಲ್ಲಿ ಎಚ್ಚರ
Dina Bhavishya
Pineapple
ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
Life Style
ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up