CHITRADURGA NEWS | 26 AUGUST 2026
ಚಿತ್ರದುರ್ಗ: ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ನಗರದಲ್ಲಿ ಪ್ರತಿವರ್ಷ ವಿಜೃಂಭಣೆಯಿಂದ ಆಚರಿಸಲಾಗುವ ಹಿಂದೂ ಮಹಾಗಣಪತಿ ಮಹೋತ್ಸವಕ್ಕೆ ಬುಧವಾರ ಶ್ರೀ ಮುರುಘಾರಾಜೇಂದ್ರ ಕ್ರೀಡಾಂಗಣದಲ್ಲಿ ಗೋಪೂಜೆ ಹಾಗೂ ಧ್ವಜಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು.
ಇದನ್ನೂ ಓದಿ: ಚಿತ್ರದುರ್ಗ ಶಾಖಾ ಕಾಲುವೆಗೆ 3 ಟಿಎಂಸಿ ನೀರು | ನೀರಾವರಿ ಹೋರಾಟ ಸಮಿತಿ ಸ್ವಾಗತ
ವಿವಿಧ ಮಠಾಧೀಶರು, ಚುನಾಯಿತ ಪ್ರತಿನಿಧಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಭಾಗವಹಿಸಿದ್ದರು.
ಚಿತ್ರದುರ್ಗದಲ್ಲಿ ಕಳೆದ 18 ವರ್ಷಗಳಿಂದ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆ ಹಾಗೂ ಶೋಭಾಯಾತ್ರೆ ನಡೆಸಿಕೊಂಡು ಬರಲಾಗುತ್ತಿದೆ. ಈ ಬಾರಿಯೂ ಮಹೋತ್ಸವದ ಯಶಸ್ಸಿಗಾಗಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.
ಸೆಪ್ಟೆಂಬರ್ 14ರಂದು ಬೆಳಿಗ್ಗೆ 9.18ರಿಂದ 10.45ರವರೆಗೆ ನಿಗದಿಪಡಿಸಿರುವ ಶುಭ ಮುಹೂರ್ತದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನೆರವೇರಲಿದೆ. ಸೆಪ್ಟೆಂಬರ್ 9 ಅಥವಾ 13ರಂದು ಸಮಯ ಹಾಗೂ ನಕ್ಷತ್ರವನ್ನು ಆಧರಿಸಿ ಹಿಂದೂ ಮಹಾಗಣಪತಿಯ ಪುರಪ್ರವೇಶ ಕಾರ್ಯಕ್ರಮದ ದಿನಾಂಕವನ್ನು ಅಂತಿಮಗೊಳಿಸಲಾಗುವುದು. ಅಕ್ಟೋಬರ್ 3ರಂದು ಅತ್ಯಂತ ವಿಜೃಂಭಣೆಯಿಂದ ಶೋಭಾಯಾತ್ರೆ ಹಾಗೂ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: ವಿಜೃಂಭಣೆಯಿಂದ ನಡೆದ ಈದ್ ಮಿಲಾದ್ ಮೆರವಣಿಗೆ
ಕಾರ್ಯಕ್ರಮದಲ್ಲಿ ಶ್ರೀ ಮಾದಾರ ಗುರುಪೀಠದ ಶ್ರೀ ಮಾದಾರ ಚನ್ನಯ್ಯ ಬಸವಮೂರ್ತಿ, ಭಗೀರಥ ಪೀಠದ ಪುರುಷೋತ್ತಮಾನಂದ ಶ್ರೀಗಳು, ಯಾದವ ಗುರುಪೀಠದ ಶ್ರೀ ಕೃಷ್ಣಯಾದವಾನಂದ ಶ್ರೀಗಳು, ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು, ಹೊಸದುರ್ಗದ ಶ್ರೀ ಶಾಂತವೀರ ಶ್ರೀಗಳು, ಸರ್ದಾರ ಸೇವಾಲಾಲ್ ಶ್ರೀಗಳು, ಸಂಸದ ಗೋವಿಂದ ಕಾರಜೋಳ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್.ಕೆ.ಬಸವರಾಜನ್, ಜಿ.ಪಂ. ಮಾಜಿ ಅಧ್ಯಕ್ಷೆ ಸೌಭಾಗ್ಯ ಬಸವರಾಜನ್ ಸೇರಿದಂತೆ ಹಲವು ಗಣ್ಯರು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಸುಧೀರ್ ಜಿ., ಪ್ರಧಾನ ಕಾರ್ಯದರ್ಶಿ ಚನ್ನಕೇಶವ್, ಗೌರವಾಧ್ಯಕ್ಷ ಷಡಕ್ಷರಪ್ಪ, ವಿಶ್ವ ಹಿಂದೂ ಪರಿಷತ್ನ ಪ್ರಾಂತ ಸತ್ಸಂಗ ಪ್ರಮುಖ್ ಚಂದ್ರಶೇಖರ್, ಪ್ರಾಂತ ಉಪಾಧ್ಯಕ್ಷ ಡಾ. ಮಂಜುನಾಥ್, ಶ್ರೀಮತಿ ರೇಖಾ, ನಗರಸಭೆ ಮಾಜಿ ಸದಸ್ಯರಾದ ಸುರೇಶ್, ನಾಗರಾಜ್, ವೆಂಕಟೇಶ್ ಯಾದವ್, ಬದರಿನಾಥ್, ಕೊಲ್ಲಿಲಕ್ಷ್ಮೀ, ಪ್ರಶಾಂತ್, ಶರಣ್ ಕುಮಾರ್, ಶ್ರೇಣಿಕ್ ಬಸಮ್ಮ, ನಾಗರಾಜ್ ಬೇದ್ರೇ ಸೇರಿದಂತೆ ಹಲವರು ಭಾಗವಹಿಸಿದ್ದರು.
ಇದನ್ನೂ ಓದಿ: ಸೆ.2ರಂದು ಬಾಪೂಜಿ ಪ್ರಬಂಧ ಸ್ಪರ್ಧೆ | ವಿದ್ಯಾರ್ಥಿಗಳಿಗೆ ಸಿಇಒ ಡಾ.ಆಕಾಶ್ ಕರೆ
ಮಳೆಯ ನಡುವೆಯೂ ಭಕ್ತರ ಉತ್ಸಾಹ
ಗೋಪೂಜೆ ಹಾಗೂ ಧ್ವಜಪೂಜೆ ನಡೆಯುತ್ತಿದ್ದ ಸಂದರ್ಭದಲ್ಲಿ ಮಳೆ ಸುರಿಯಿತು. ಮಹೋತ್ಸವಕ್ಕೆ ವರುಣದೇವನ ಆಶೀರ್ವಾದವೆಂಬಂತೆ ಭಕ್ತರು ಮಳೆಯನ್ನು ಲೆಕ್ಕಿಸದೆ ಪೂಜಾ ಕಾರ್ಯಕ್ರಮದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಮಳೆಯ ನಡುವೆಯೂ ಸಾವಿರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

