
ಚಿತ್ರದುರ್ಗ ನ್ಯೂಸ್.ಕಾಂ:
ವಿಶ್ವಹಿಂದೂ ಪರಿಷತ್, ಬಜರಂಗದಳ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯುವ ಹಿಂದೂ ಮಹಾಗಣಪತಿ ಮಹೋತ್ಸವದ ಮೊದಲ ಕಾರ್ಯಕ್ರಮ ಗೋ ಪೂಜೆ ಹಾಗೂ ಧ್ವಜ ಪೂಜಾ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ) ಭಾಗವಹಿಸಿದ್ದರು.
ಬೆಳಗ್ಗೆ 9 ಗಂಟೆಗೆ ಧ್ವಜ ಪೂಜೆ ಹಾಗೂ ಗೋ ಪೂಜೆ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಜರುಗಿತು. ಆನಂತರ ಆಗಮಿಸಿದ ಶಾಸಕರು, ಪೂಜೆ ಸಲ್ಲಿಸಿ, ಹಿಂದೂ ಮಹಾಗಣಪತಿ ಉತ್ಸವದ ಕಾರ್ಯಕ್ರಮಗಳು ಸುಸೂತ್ರವಾಗಿ ನೆರವೇರಲು ಪ್ರಾರ್ಥಿಸಿದರು.
ಇದನ್ನೂ ಓದಿ: ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಓಂಕಾರ | ಗೋ ಪೂಜೆ, ಧ್ವಜ ಪೂಜೆ
ಈ ವೇಳೆ ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಜಿ.ಎಂ.ಸುರೇಶ್, ವಿಎಚ್‍ಪಿ ಹಿರಿಯ ಮುಖಂಡರಾದ ಷಡಾಕ್ಷರಪ್ಪ, ರಂಗಸ್ವಾಮಿ, ಸಂದೀಪ್, ನಗರಸಭೆ ಮಾಜಿ ಸದಸ್ಯ ಸಿ.ಟಿ.ಕೃಷ್ಣಮೂರ್ತಿ, ಹಾಲಿ ಸದಸ್ಯ ಶಶಿಧರ್, ವಿಫುಲ್ ಜೈನ್, ಅಶೋಕ್ ಮತ್ತಿತರರಿದ್ದರು.
(ಚಿತ್ರದುರ್ಗ ಜಿಲ್ಲೆಯ ಸಮಗ್ರ ಸುದ್ದಿಗಳಿಗಾಗಿ WhatsApp Group ಸೇರಿ. https://chat.whatsapp.com/HOKagK96PgX5hCdhvtFLfw)
(ಚಿತ್ರದುರ್ಗದ ಕ್ಷಣ ಕ್ಷಣದ ಮಾಹಿತಿಗಾಗಿ ನಮ್ಮ Facebook page follow ಮಾಡಿ https://www.facebook.com/chitradurganews?mibextid=ZbWKwL)

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
