CHITRADURGA NEWS | 30 January 2026
ಚಿತ್ರದುರ್ಗ: ನಗರದ ಜೋಗಿಮಟ್ಟಿ ರಸ್ತೆಯಲ್ಲಿ ಜ.31 ಶನಿವಾರ ಸಂಜೆ ನಡೆಯುವ ಹಿಂದು ಸಂಗಮ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಧ್ವಜ ಪೂಜೆ ಹಾಗೂ ವೇದಿಕೆ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.

ಇದನ್ನೂ ಓದಿ: ಅಡಿಕೆ ಧಾರಣೆ | 30 ಜನವರಿ | ಯಾವ ಅಡಿಕೆಗೆ ಎಷ್ಟು ರೇಟ್
ಜ.31 ಶನಿವಾರ ಮಧ್ಯಾಹ್ನ 3.30ಕ್ಕೆ ರಂಗಯ್ಯನ ಬಾಗಿಲು ಬಳಿಯಿರುವ ಗಣಪತಿ ದೇವಸ್ಥಾನದಿಂದ ಶೋಭಾಯಾತ್ರೆ ಪ್ರಾರಂಭವಾಗಲಿದ್ದು, ಸಂಜೆ 5.30ಕ್ಕೆ ಜೋಗಿಮಟ್ಟಿ ರಸ್ತೆಯ 4ನೇ ಕ್ರಾಸ್ ಸೇತುವೆ ಬಳಿ ಇರುವ ಮೈದಾನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
ಶಾರದಾ ರಾಮಕೃಷ್ಣಾಶ್ರಮದ ಶ್ರೀ ಬ್ರಹ್ಮನಿಷ್ಠಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಎಬಿವಿಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಮುಖ್ಯ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರೆಸ್ಸೆಸ್ಸ್‌ಗೆ) ನೂರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಹಿಂದೂ ಸಂಗಮ ಆಯೋಜನೆ ಮಾಡುತ್ತಿದ್ದು, ಇದೊಂದು ಧಾರ್ಮಿಕ ಉತ್ಸವವಾಗಿರದೆ ಸಮಾಜದಲ್ಲಿ ಏಕತೆ, ಸಹಕಾರ ಮನೋಭಾವನೆ, ಸ್ವಾಭಿಮಾನಿ ಹಿಂದೂ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮಗಳನ್ನು ಸಂಘಟಿಸಲಾಗುತ್ತಿದೆ.
ಇದನ್ನೂ ಓದಿ: ಕೃಷಿಕ ಸಮಾಜದ ಸಭೆ | ಬಜೆಟ್ ನಲ್ಲಿ ನೀರಾವರಿ, ಕೃಷಿಗೆ ಆದ್ಯತೆ ನೀಡಲು ಪ್ರಸ್ತಾಪ
ಹಿಂದೂ ಸಮಾಜದಲ್ಲಿ ಧಾರ್ಮಿಕ ಜಾಗೃತಿ ಮೂಡಿಸುವುದು, ಸಂಸ್ಕೃತಿ ಉಳಿಸುವುದು, ಯುವ ಜನರಿಗೆ ಧಾರ್ಮಿಕ ಮೌಲ್ಯ ಪರಿಚಯಿಸುವ ಉದ್ದೇಶದಿಂದ ಹಿಂದೂ ಸಂಗಮ ಆಯೋಜಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.
ಧ್ವಜಪೂಜೆ ಹಾಗೂ ವೇದಿಕೆ ನಿರ್ಮಾಣಕ್ಕೆ ಚಾಲನೆ ನೀಡುವ ವೇಳೆ, ಮುಖಂಡರಾದ ಜಿತೇಂದ್ರ ಎನ್ ಹುಲಿಕುಂಟೆ, ಓಂಕಾರ್ , ಕೃಷ್ಣಮೂರ್ತಿ, ಬಸವರಾಜ್, ವೆಂಕಟೇಶ, ಛಲವಾದಿ ತಿಪ್ಪೇಸ್ವಾಮಿ, ಗೀತಮ್ಮ, ವೀಣಾ, ಅಶೋಕ್, ವೇದಮೂರ್ತಿ ಉಪಸ್ಥಿತರಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
