CHITRADURGA NEWS | 24 January 2026
ಚಿತ್ರದುರ್ಗ: ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ ಆಯೋಜಿಸುತ್ತಿದ್ದು, ಜ.31 ರಂದು ಚಿತ್ರದುರ್ಗದ ಜೋಗಿಮಟ್ಡಿ ರಸ್ತೆಯಲ್ಲಿ ನಡೆಯುವ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ಪೂಜೆ ಸಲ್ಲಿಸುವ ಮೂಲಕ ಸಿದ್ಧತೆ ಆರಂಭಿಸಲಾಯಿತು.
ಇದನ್ನೂ ಓದಿ: ADC ಕುಮಾರಸ್ವಾಮಿ, ಶಿಕ್ಷಕಿ ಅಂಬಿಕಾ ಅವರಿಗೆ ಚುನಾವಣಾ ಆಯೋಗದ ಪ್ರಶಸ್ತಿ
ಜೋಗಿಮಟ್ಟಿ ಉಪನಗರದ ಹಿಂದೂ ಸಂಗಮದ ತಯಾರಿಯ ಭಾಗವಾಗಿ ಜೋಗಿಮಟ್ಡಿ ರಸ್ತೆಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಕರಪತ್ರ ಮತ್ತು ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖಂಡರಾದ ಲಿಂಗಪ್ಪ, ನಿವೃತ್ತ ಶಿಕ್ಷಕ ಕೃಷ್ಣಮೂರ್ತಿ, ಜಿತೇಂದ್ರ ಎನ್ ಹುಲಿಕುಂಟೆ, ಓಂಕಾರ್, ಡಾ.ರಾಜೀವಲೋಚನ, ಛಲವಾದಿ ತಿಪ್ಪೇಸ್ವಾಮಿ, ಅಶೋಕ್, ಪಟಾಕಿ ಸತೀಶ್, ಜಿಮ್ಮಿ, ಭರತ್, ಹೇಮಂತ್, ನಾಗರಾಜ್, ಶ್ರೀನಾಥ್ ಇತರರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
