CHITRAUDRGA NEWS | 13 APRIL 2026
ಹಿರಿಯೂರು: ಹಿರಿಯೂರು-ಚಿತ್ರದುರ್ಗ ಸರ್ವಿಸ್ ರಸ್ತೆಯ ಮೂಲಕ ಸಂಚರಿಸಿ ಕಾಲೇಜು ಮುಂಭಾಗ ನಿಲುಗಡೆ ಮಾಡಲು ಬಸ್ ಸೌಲಭ್ಯವನ್ನು ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
ಹಿರಿಯೂರು ತಾಲೂಕಿನಲ್ಲಿ ಪ್ರತಿ ಹೋಬಳಿ ಗ್ರಾಮ ಪಂಚಾಯಿತಿ, ಗ್ರಾಮೀಣ ಪ್ರದೇಶಗಳಿಂದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ತಾಲೂಕು ಕೇಂದ್ರಕ್ಕೆ ಆಗಮಿಸುತ್ತಾರೆ.
ಧರ್ಮಪುರ ಹೋಬಳಿ, ಜವಗೊಂಡನಹಳ್ಳಿ, ಐಮಂಗಲ ಈ ಪ್ರದೇಶಗಳಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಎದುರಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜುಗಳಿಗೆ ತಲುಪಲು ಸಾಧ್ಯವಾಗುತ್ತಿಲ್ಲ.
ಹಿರಿಯೂರು ನಗರದಲ್ಲಿ ವಾಣಿ ಕಾಲೇಜಿನ ಬಳಿ ಬಸ್ ನಿಲ್ಲಿಸುವುದಿಲ್ಲ ಹಾಗೂ ನಗರದ ಸರ್ವಿಸ್ ರೋಡಿನಲ್ಲಿ ನಿಲ್ಲಿಸದೆ ಹೈವೇ ಮಧ್ಯದಲ್ಲಿ ಗಾಡಿಯನ್ನು ನಿಲ್ಲಿಸುತ್ತಾರೆ. ಧರ್ಮಪುರದಿಂದ – ಶಿರಾ ಮಾರ್ಗವಾಗಿ ತುಮಕೂರು ಮತ್ತು ಬೆಂಗಳೂರಿನತ್ತ ಸಂಚರಿಸುವ ಮಾರ್ಗ ಹಿರಿಯೂರು ಚಿತ್ರದುರ್ಗಕ್ಕೆ ನಿತ್ಯ ಸಂಚರಿಸುವ ಮಾರ್ಗಗಳ ಸರಕಾರಿ ಬಸ್ನಲ್ಲಿ ಸೀಟ್ ಸಿಗುವುದಿರಲಿ ಒಳಗಡೆ ಕಾಲಿಡಲೂ ಆಗದ ಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದಿ: ಅಂಬೇಡ್ಕರ್ ಜಯಂತಿ ಪ್ರಯುಕ್ತ ರಕ್ತದಾನ ಶಿಬಿರ
ಸರ್ಕಾರಿ ಪಾಲಿಟೆಕ್ನಿಕ್ ಹಿರಿಯೂರು, ಸಂಸ್ಥೆಯಲ್ಲಿ 2026-27ನೇ ಸಾಲಿನಲ್ಲಿ ಸುಮಾರು 500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕಾಲೇಜು ನಗರದಿಂದ ಸುಮಾರು 7 ಕಿಲೋಮೀಟರ್ ದೂರದಲ್ಲಿ ಇರುತ್ತದೆ. ಸಂಸ್ಥೆಯಲ್ಲಿ ತರಗತಿಗಳು ಪ್ರತಿ ದಿನ ಬೆಳಗ್ಗೆ 9:30 ರಿಂದ ಪ್ರಾರಂಭವಾಗಿ ಸಂಜೆ 5ಕ್ಕೆ ಮುಕ್ತಾಯವಾಗುತ್ತದೆ.
ಹಿರಿಯೂರು ನಗರದಿಂದ ಸಂಸ್ಥೆಗೆ ಬಂದು ಹೋಗುವ ಸಲುವಾಗಿ ಬೆಳಗ್ಗೆ 8:45 ಕ್ಕೆ 9 ಗಂಟೆಗೆ 9:15ಕ್ಕೆ ಹಾಗೂ ಸಂಜೆ 4:15ಕ್ಕೆ 4:30 ಮತ್ತು 5 ಗಂಟೆಗೆ ಬಸ್ ಗಳನ್ನು ಹಿರಿಯೂರು-ಚಿತ್ರದುರ್ಗ ಸರ್ವಿಸ್ ರಸ್ತೆಯ ಮೂಲಕ ಸಂಚರಿಸಿ ಕಾಲೇಜು ಮುಂಭಾಗ ನಿಲುಗಡೆ ಮಾಡಲು ಬಸ್ ಸೌಲಭ್ಯವನ್ನು ಕಲ್ಪಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಒತ್ತಾಯಿಸಿತು.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
ಈ ವೇಳೆ ನಗರ ಕಾರ್ಯದರ್ಶಿ ವೀರೇಶ್ ಯಾದವ್, ರಾಜ್ಯಕಾರಣಿ ಸದಸ್ಯ ಕುಬೇರ್ ಯಾದವ್, ಸುದೀಪ್, ಕನಕ ರಾಜ್ ಕೋಡಿಹಳ್ಳಿ, ಟಿ.ತರುಣ್ ಕುಮಾರ್, ಚೇತನ್, ಅಕ್ಷಯ್ ಕುಮಾರ್, ರಮೇಶ್, ಓಬಳೇಶ್, ತಿಪ್ಪೇಸ್ವಾಮಿ, ರಂಗನಾಥ್, ಚಿದಾನಂದ, ಪುರುಷೋತ್ತಮ್, ಕಾವ್ಯ, ರಕ್ಷಿತಾ, ಭೂಮಿಕಾ, ಭವಾನಿ ಹಾಗೂ ಕಾರ್ಯಕರ್ತರುಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
