CHITRADURGA NEWS | 08 May 2026
ಚಿತ್ರದುರ್ಗ: 2024-25ನೇ ಸಾಲಿನ ಮುಖ್ಯಮಂತ್ರಿಗಳ ‘ಅಮೃತ ನಗರೋತ್ಥಾನ’ (ಹಂತ-4) ಯೋಜನೆಯಡಿ ಹಿರಿಯೂರು ನಗರಸಭೆಯ ವ್ಯಾಪ್ತಿಯಲ್ಲಿ ವಾಸಿಸುವ ವಿವಿಧ ವರ್ಗದ ಫಲಾನುಭವಿಗಳಿಗೆ ವಿಶೇಷ ಆರ್ಥಿಕ ನೆರವು ಹಾಗೂ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಮೇ 22 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಗ್ರಾ.ಪಂ. ಬಿಲ್ ಕಲೆಕ್ಟರ್ ಹುದ್ದೆ | ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಈ ಯೋಜನೆಯಡಿ ಶೇ.24.10, ಶೇ.7.25 ಹಾಗೂ ಶೇ.5ರಲ್ಲಿ ಹಾಗೂ ಮೀಸಲಿಸಿರುವ ಅನುದಾನದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ನೀಡಲಾಗುವುದು.
ಅಲ್ಲದೆ, ಸರ್ಕಾರಿ ಅಥವಾ ಅನುದಾನಿತ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದಡಿ ಸೀಟು ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರ ಸಮುದಾಯಗಳ ವಿದ್ಯಾರ್ಥಿಗಳಿಗೆ ಶೇಕಡಾ 50ರಷ್ಟು ಪ್ರವೇಶ ಶುಲ್ಕವನ್ನು ಮರುಪಾವತಿ ಮಾಡಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ನೀಡುವುದು.
ಹಿರಿಯೂರು ನಗರಸಭೆ ವ್ಯಾಪ್ತಿಯ ಅರ್ಹ ದಿವ್ಯಾಂಗ ವಿಕಲ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಪರಿಶಿಷ್ಟ ಜಾತಿಯ ಸಣ್ಣ ಉದ್ದಿಮೆದಾರರಿಗೆ ಆರ್ಥಿಕ ಉತ್ತೇಜನ ನೀಡಲು ಧನ ಸಹಾಯ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಸಾಣೇಹಳ್ಳಿ ಮಠಕ್ಕೆ ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮಸ್ಥರಿಂದ ದವಸ-ಧಾನ್ಯ ಸಮರ್ಪಣೆ
ಈ ಎಲ್ಲ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಮೇ 08 ರಿಂದ 22 ರವರೆಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹಿರಿಯೂರು ನಗರಸಭೆ ಪೌರಾಯುಕ್ತ ಎ.ವಾಸೀಂ ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

