CHITRADURGA NEWS | 12 JUNE 2026
ಚಿತ್ರದುರ್ಗ: ಹಿರಿಯೂರು ನಗರಸಭೆ ವತಿಯಿಂದ 2026-27ನೇ ಸಾಲಿನ ನಗರಸಭೆ ನಿಧಿಯಡಿ ವಿವಿಧ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜೂನ್ 30 ಅರ್ಜಿ ಸಲ್ಲಿಸಲು ಕೊನೆಯ ದಿನ.
ಇದನ್ನೂ ಓದಿ: ಪ್ರಾಥಮಿಕ ಹಾಗೂ ಪ್ರೌಢ ಬಿಐಇಆರ್ ಟಿ ಹುದ್ದೆಗೆ ಅರ್ಜಿ ಅಹ್ವಾನ
ನಗರಸಭೆಯ ಶೇ. 24.10, ಶೇ. 7.25 ಹಾಗೂ ಶೇ. 5ರ ಯೋಜನೆಯಡಿ ಮೀಸಲಿರಿಸಿರುವ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈ ಯೋಜನೆಯಡಿ ನಗರಸಭೆ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ವಿದ್ಯಾರ್ಥಿಗಳಿಗೆ ವಿಶೇಷ ಆರ್ಥಿಕ ನೆರವು ನೀಡಲಾಗುತ್ತದೆ. ಜೊತೆಗೆ ಎಂ.ಬಿ.ಬಿ.ಎಸ್ ಹಾಗೂ ಬಿ.ಇ ವ್ಯಾಸಾಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಖರೀದಿಸಲು ಸಹಾಯಧನ ವಿತರಿಸಲಾಗುತ್ತದೆ.
ಅರ್ಹ ದಿವ್ಯಾಂಗ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಕಾರ್ಯಕ್ರಮವೂ ಇದರಲ್ಲಿದೆ. ಅಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಜನಾಂಗದ ಸಾರ್ವಜನಿಕರಿಗೆ ನಿವೇಶನ ಖರೀದಿಸಲು ಆರ್ಥಿಕ ಸಹಾಯಧನ ನೀಡಲಾಗುತ್ತದೆ.
ಇದನ್ನೂ ಓದಿ: ಡಿಪ್ಲೋಮಾ ಲ್ಯಾಟರಲ್ ಪ್ರವೇಶ | ಅರ್ಜಿ ಆಹ್ವಾನ
ಇದರೊಂದಿಗೆ ನಗರಸಭೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಖಾಯಂ, ನೇರಪಾವತಿ, ಕ್ಷೇಮಾಭಿವೃದ್ಧಿ ಹಾಗೂ ಹೊರಗುತ್ತಿಗೆ ಪೌರಕಾರ್ಮಿಕರು, ಲೋಡರ್ಸ್ ಮತ್ತು ಡ್ರೈವರ್‍ಗಳಿಗೂ ಸಹ ನಿವೇಶನ ಖರೀದಿಸಲು ಸಹಾಯಧನ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಫಲಾನುಭವಿಗಳು ಇದೇ ಜೂನ್ 12 ರಿಂದ 30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಹಿರಿಯೂರು ನಗರಸಭೆ ವ್ಯಾಪ್ತಿಯ ಅರ್ಹ ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಕಾರ್ಮಿಕರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಈ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಲು ಕೋರಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಾರ್ವಜನಿಕರು ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯೂರು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

