Connect with us

    sports; ಹೊಳಲ್ಕೆರೆ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಎಂ. ಚಂದಪ್ಪ ಚಾಲನೆ 

    CHANDRAPA SPORTS

    ಹೊಳಲ್ಕೆರೆ

    sports; ಹೊಳಲ್ಕೆರೆ ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಶಾಸಕ ಎಂ. ಚಂದಪ್ಪ ಚಾಲನೆ 

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 19 AUGUST 2024

    ಹೊಳಲ್ಕೆರೆ: ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಭರಮಸಾಗರದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆ, ಚಿತ್ರದುರ್ಗ ಬಾಪೂಜಿ ಪ್ರೌಢಶಾಲೆ, ಭರಮಸಾಗರ ಅಕ್ಕಮಹಾದೇವಿ ಬಾಲಿಕಾ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಸೋಮವಾರ ನಡೆದ ಹೋಬಳಿ ಮಟ್ಟದ ಕ್ರೀಡಾಕೂಟ(sports)ಕ್ಕೆ ಶಾಸಕ ಎಂ.ಚಂದ್ರಪ್ಪ ಚಾಲನೆ ನೀಡಿದರು.

    ಕ್ಲಿಕ್ ಮಾಡಿ ಓದಿ: ಮಹನೀಯರ ತತ್ವಾದರ್ಶ ಬದುಕಿಗೆ ದಾರಿದೀಪ | ತಹಶೀಲ್ದಾರ್ ಡಾ.ನಾಗವೇಣಿ

    ಈ ವೇಳೆ ಮಾತನಾಡಿ ಅವರು, ಸರ್ಕಾರ ಕ್ರೀಡೆಗೆ ಅಗತ್ಯವಾಗಿರುವ ಸಾಮಾಗ್ರಿಗಳನ್ನು ಪೂರೈಸಿ ಪ್ರೋತ್ಸಾಹ ನೀಡುತ್ತಿದ್ದರೂ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ನಿರೀಕ್ಷೆಯಂತೆ ಪದಕಗಳನ್ನು ಗೆಲ್ಲಲು ಆಗುತ್ತಿಲ್ಲದಿರುವುದು ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

    ಹೋಬಳಿ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳು, ತಾಲ್ಲೂಕು, ಜಿಲ್ಲಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವಂತೆ ದೈಹಿಕ ಶಿಕ್ಷಕರುಗಳು ತಯಾರು ಮಾಡಬೇಕೆಂಬುದು ಸರ್ಕಾರದ ಉದ್ದೇಶ. ಎಲ್ಲಾ ರೀತಿಯ ನೆರವು ನೀಡುತ್ತಿದ್ದರು ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟೀಯ ಮಟ್ಟದಲ್ಲಿ ಭಾಗವಹಿಸಿ ಪದಕಗಳನ್ನು ಗೆಲ್ಲಲು ಆಗುತ್ತಿಲ್ಲ.

    ಭಾರತಕ್ಕಿಂತ ಚಿಕ್ಕ ರಾಷ್ಟ್ರ ಅಮೇರಿಕಾ 113 ಕ್ಕಿಂತ ಹೆಚ್ಚು ಪದಕಗಳನ್ನು ಪಡೆದಿದೆ. ಚೀನಾ 77 ಪದಕಗಳನ್ನು ಮುಡಿಗೇರಿಸಿಕೊಂಡಿದೆ. ಭಾರತ ಕೇವಲ ಒಂದು ಬೆಳ್ಳಿ ಐದು ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದೆ.

    ಕ್ಲಿಕ್ ಮಾಡಿ ಓದಿ: Adike Rate | ರಾಜ್ಯದ ಯಾವ ಮಾರುಕಟ್ಟೆಯಲ್ಲಿ ಎಷ್ಟು ರೇಟಿತ್ತು

    ಪ್ರಾಥಮಿಕ ಹಂತದಲ್ಲಿಯೇ ಮಕ್ಕಳನ್ನು ಉತ್ತಮ ಕ್ರೀಡಾಪಟುಗಳನ್ನಾಗಿ ತಯಾರು ಮಾಡುವಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರುಗಳ ಪಾತ್ರ ಮುಖ್ಯ. ಹೋಬಳಿ ಮಟ್ಟದ ಕ್ರೀಡೆಯಲ್ಲಿ ಆಡುವ ಮಕ್ಕಳು ರಾಜ್ಯ ಮಟ್ಟಕ್ಕೆ ಹೋಗುವಂತೆ ದೈಹಿಕವಾಗಿ ಸದೃಢರನ್ನಾಗಿ ಮಾಡಬೇಕಿದೆ.

    ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದೆ. ತಾಲ್ಲೂಕಿನಲ್ಲಿ ಬಡ ಮಕ್ಕಳು ಶಾಲೆಗೆ ಬರಲು ತೊಂದರೆಯಾಗಬಾರದೆನ್ನುವ ಕಾರಣಕ್ಕಾಗಿ ಸ್ವಂತ ಖರ್ಚಿನಿಂದ ಬಸ್‍ಗಳ ವ್ಯವಸ್ಥೆ ಮಾಡಿದ್ದೇನೆ. ರಾಜ್ಯದಲ್ಲಿ ಎಲ್ಲಿಯೂ ಇಂತಹ ಸೌಕರ್ಯವಿಲ್ಲ. ಪಠ್ಯದ ಜೊತೆ ಮಕ್ಕಳು ಕ್ರೀಡೆಯ ಕಡೆಗೂ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳಬೇಕೆಂದು ಶಾಸಕ ಡಾ.ಎಂ.ಚಂದ್ರಪ್ಪ ತಿಳಿಸಿದರು.

    ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ, ಡಿ.ಎಸ್.ಪ್ರವೀಣ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷನ್, ಕ್ಷೇತ್ರ ಸಮನ್ವಯಾಧಿಕಾರಿ ಸಂಪತ್‍ಕುಮಾರ್, ಚಿದಾನಂದಸ್ವಾಮಿ, ಬಸವರಾಜ್, ಚನ್ನಬಸಪ್ಪ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಇದ್ದರು.

    Click to comment

    Leave a Reply

    Your email address will not be published. Required fields are marked *

    More in ಹೊಳಲ್ಕೆರೆ

    To Top