CHITRADURGA NEWS | 26 FEBRUARY 2026
ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆಯಲ್ಲಿನ ನ್ಯಾಯಾಲಯದ ಆವರಣದಲ್ಲಿ ಕ್ಯಾಂಟೀನ್ ನಡೆಸಲು ಆಸಕ್ತ ಮತ್ತು ಅರ್ಹರಿಂದ ದರಪಟ್ಟಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: ದಾವಣಗೆರೆ-ಚಿತ್ರದುರ್ಗ ನೇರ ರೈಲ್ವೇ ಮಾರ್ಗ | 2027ರ ಜೂನ್ ಅಂತ್ಯಕ್ಕೆ ಪೂರ್ಣ | ಕೇಂದ್ರ ಸಚಿವ ವಿ.ಸೋಮಣ್ಣ
ಹೊಳಲ್ಕೆರೆಯ ನ್ಯಾಯಾಲಯ ಆವರಣದಲ್ಲಿ ಕ್ಯಾಂಟೀನ್ ನಡೆಸಲು ಬಯಸುವ ಆಸಕ್ತರು, ತಾವು ತಯಾರಿಸುವ ಆಹಾರಗಳು, ಪ್ರಮಾಣ, ಪೂರೈಕೆಗೆ ವಿಧಿಸುವ ದರ ಮುಂತಾದ ವಿವರಗಳನ್ನು ನಮೂದಿಸಿ, ದರಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಾರ್ಯಾಲಯ, ಚಿತ್ರದುರ್ಗ ಇವರಿಗೆ ಮಾರ್ಚ್ 10 ರಂದು ಸಂಜೆ 5 ಗಂಟೆಯ ಒಳಗಾಗಿ ಸಲ್ಲಿಸಬೇಕು.
ದರಪಟ್ಟಿ ಲಕೋಟೆಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಅವರ ಸಮಕ್ಷಮದಲ್ಲಿ ಮಾ. 12 ರಂದು ಸಂಜೆ 05 ಗಂಟೆಗೆ ತೆರೆಯಲಾಗುವುದು.
ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಹೆಚ್ಚಿನ ವಿವರಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಾರ್ಯಾಲಯದಿಂದ ಪಡೆಯಬಹುದಾಗಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
